ಮತ್ತೆ ಕನ್ನಡಕ್ಕೆ ಬಂದ RGV | ಉಪ್ಪಿ ಚಿತ್ರಕ್ಕೆ ವರ್ಮಾ ಆ್ಯಕ್ಷನ್ ಕಟ್
Team Udayavani, Sep 18, 2021, 1:27 PM IST
ಬೆಂಗಳೂರು: ಬಾಲಿವುಡ್ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇದೀಗ ಮತ್ತೊಂದು ಬಾರಿ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿ ಅವರು ರಿಯಲ್ ಸ್ಟಾರ್ ಉಪೇಂದ್ರ ಅವರ ಆ್ಯಕ್ಷನ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಹೌದು, ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ ಉಪ್ಪಿಯವರ ಮುಂದಿನ ಚಿತ್ರಕ್ಕೆ ತಾವು ನಿರ್ದೇಶನ ಮಾಡುವ ಸಿಹಿ ಸುದ್ದಿಯನ್ನು ನೀಡಿದ್ದಾರೆ.
Thank you ? @RGVzoomin https://t.co/QFBjlTfoQ7
— Upendra (@nimmaupendra) September 18, 2021
ಈ ಹಿಂದೆ ಕರುನಾಡು ಚಕ್ರವರ್ತಿ ಶಿವರಾಜ್ ಕುಮಾರ್ ಅವರ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ರಾಮ್ ಗೋಪಾಲ್ ವರ್ಮಾ, ಇದೀಗ ಉಪೇಂದ್ರ ಅವರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಸಹಜವಾಗಿ ಉಪೇಂದ್ರ ಅವರು ಕೂಡ ಖ್ಯಾತ ನಿರ್ದೇಶಕರು. ರಾಮ್ ಗೋಪಾಲ್ ವರ್ಮಾ ಅವರೂ ತುಂಬಾ ಫೇಮಸ್ . ಈ ಇಬ್ಬರು ಪ್ರತಿಭಾವಂತರ ಕಾಂಬಿನೇಷನ್‍ನಲ್ಲಿ ಸಿನಿಮಾ ಬರುತ್ತಿರುವುದು ಸಿನಿ ರಸಿಕರಿಗೆ ಖುಷಿ ನೀಡಿದೆ.
ಇನ್ನು ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಉಪೇಂದ್ರ ಅವರಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ. ಜೊತೆಗೆ ಹೊಸ ಸಿನಿಮಾಗಳ ಘೋಷಣೆ ಕೂಡ ಆಗುತ್ತಿದೆ. ನಟನಾಗುವುದಕ್ಕೂ ಮುನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಉಪೇಂದ್ರ ಅವರು ‘ಓಂ’, ‘ಶ್’ ನಂತಹ ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಮತ್ತೆ ನಿರ್ದೇಶನದತ್ತ ಉಪೇಂದ್ರ ಮುಖ ಮಾಡಿದ್ದಾರೆ. ಹೊಸ ಚಿತ್ರದ ಕುರಿತು ಉಪೇಂದ್ರ ಅವರು ಇನ್ನಷ್ಟೇ ಮಾಹಿತಿ ನೀಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBT8: ಬಿಗ್ ಬಾಸ್ ತಮಿಳು ಟ್ರೋಫಿ ಗೆದ್ದ ಮುತ್ತುಕುಮಾರನ್; ವೀಕ್ಷಕರು ಫುಲ್ ಖುಷ್
Saif Ali Khan Case: ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಆರೋಪಿ; ಮುಂಬೈ ಡಿಸಿಪಿ ಹೇಳಿದ್ದೇನು?
Saif Ali Khan: ಸೈಫ್ ಅಲಿಖಾನ್‌ಗೆ ಚಾಕು ಇರಿತ; ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು
Tragedy: ರಸ್ತೆ ಅಪಘಾತ.. ಆಡಿಷನ್ ಗೆ ತೆರಳುತ್ತಿದ್ದ ಕಿರುತೆರೆ ನಟ ಮೃತ್ಯು…
Saif Ali Khan ಇರಿತ: 2 ದಿನ ಕಳೆದರೂ ಸಿಗದ ಆರೋಪಿ!
MUST WATCH
ಹೊಸ ಸೇರ್ಪಡೆ
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.