“ಆ ಹುಡುಗನ ಭವಿಷ್ಯದ ಜೊತೆ ಆಟವಾಡುತ್ತಿರುವುದು ಖೇದಕರ” : ನಟಿ ರವೀನಾ ಟಂಡನ್
Team Udayavani, Oct 8, 2021, 1:46 PM IST
ಮುಂಬೈ:ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನಕ್ಕೆ ನಟಿ ರವೀನಾ ಟಂಡನ್ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲಿಯೂ ಕೂಡ ಆರ್ಯನ್ ಖಾನ್ ಹೆಸರು ಉಲ್ಲೇಖಿಸದೆ ಟ್ವೀಟ್ ಮಾಡಿದ್ದಾರೆ.
ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಎನ್‍ಸಿಬಿ ಅಧಿಕಾರಿಗಳು ಶಾರುಖ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದ್ದಾರೆ. ಗುರುವಾರಷ್ಟೇ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈನ ಕಿಲ್ಲಾ ಕೋರ್ಟ್ ಆದೇಶ ಹೊರಡಿಸಿತು. ಇದರ ಬೆನ್ನಲ್ಲೆ ಟ್ವೀಟ್ ಮಾಡಿರುವ ರವೀನಾ, ಈ ವಿಷಯದಲ್ಲಿ ನಡೆಯುತ್ತಿರುವ ರಾಜಕೀಯ ನೋಡಿದರೆ ಅಸಹ್ಯವಾಗುತ್ತಿದೆ. ಆ ಯುವಕನ ಜೀವನ ಮತ್ತು ಭವಿಷ್ಯದ ಜೊತೆ ಆಟವಾಡುತ್ತಿರುವುದು ಖೇದರಕರ ಎಂದಿದ್ದಾರೆ.
ಮುಂಬೈನ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ವೇಳೆ ದಾಳಿ ನಡೆಸಿದ ಎನ್‍ಸಿಬಿ ಅಧಿಕಾರಿಗಳು, ಆರ್ಯನ್ ಖಾನ್ ಸೇರಿ 8 ಜನರನ್ನು ಬಂಧಿಸಿದ್ದಾರೆ. ಈತನ ಬಂಧನವನ್ನು ಬಾಲಿವುಡ್‍ನ ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಸುನಿಲ್ ಶೆಟ್ಟಿ, ಸುಸ್ಸೇನ್ ಖಾನ್ ಹಾಗೂ ಹೃತಿಕ್ ರೋಷನ್ ಅವರು ಆರ್ಯನ್ ಖಾನ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಅವರು ಶಾರುಖ್ ಖಾನ್ ಮನೆಗೆ ತೆರಳಿ ಧೈರ್ಯ ತುಂಬಿ ಬಂದಿದ್ದಾರೆ.
ಇನ್ನು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ನಂತರ ಬಾಲಿವುಡ್ ಜೊತೆ ಡ್ರಗ್ಸ್ ಪ್ರಕರಣ ತಳುಕು ಹಾಕಿಕೊಂಡಿತು. ಈ ಪ್ರಕರಣದಲ್ಲಿ ಇದುವರೆಗೆ ಹಲವು ಜನರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.