Viral Wedding ; ಸಾಯಿ ಪಲ್ಲವಿ ಮದುವೆ ಫೋಟೋ ವೈರಲ್: ಹಿಂದಿನ ಸತ್ಯ ಬಯಲು
Team Udayavani, Sep 20, 2023, 7:44 PM IST
ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅತ್ಯಂತ ಗೌರವಾನ್ವಿತ ಮತ್ತು ಪ್ರತಿಭಾಸಂಪನ್ನ ನಟಿ. ಆಕೆಯ ಸಹಜ ಸೌಂದರ್ಯ, ಅತ್ಯಾಕರ್ಷಕವಾದ ನೃತ್ಯ ಕೌಶಲ್ಯಗಳು ಮತ್ತು ಬಹುಮುಖ ಪ್ರತಿಭಾ ಸಾಮರ್ಥ್ಯಗಳು ಆಕೆಗೆ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ.
ಆಕೆಯ ಖಾಸಗಿ ಜೀವನದ ಕುರಿತಾದ ಊಹಾಪೋಹಗಳು, ಅನೇಕ ವದಂತಿಗಳಿಗೆ ಉತ್ತೇಜನ ನೀಡಿವೆ.ಸಾಯಿ ಪಲ್ಲವಿ ಅವರ ಮದುವೆಯ ಫೋಟೋಗಳು ಮತ್ತು ಅವರ ಕಲ್ಪಿತ ಪತಿಯ ಹೆಸರಿನ ಸುತ್ತಲಿನ ಇತ್ತೀಚಿನ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು ಈ ಊಹಾಪೋಹಗಳ ಹಿಂದಿನ ಸತ್ಯ ಬಯಲಾಗಿದೆ.
ಮದುವೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಸಾಯಿ ಪಲ್ಲವಿಯವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತು. ನಿರ್ದೇಶಕ ರಾಜ್‌ಕುಮಾರ್ ಪೆರಿಯಸ್ವಾಮಿ ಅವರೊಂದಿಗೆ ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಊಹೆಗೆ ಕಾರಣವಾಯಿತು.
ಸಾಯಿ ಪಲ್ಲವಿ ನಟಿಸುತ್ತಿರುವ ಮುಂಬರಲಿರುವ ಚಿತ್ರ ”SK21” ಲಾಂಚಿಂಗ್ ಸಮಾರಂಭದಲ್ಲಿ ಈ ಚಿತ್ರವನ್ನು ತೆಗೆದುಕೊಳ್ಳಲಾಗಿದೆ ಎಂದು ನಂತರ ಬಹಿರಂಗವಾಗಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಅವರೊಂದಿಗೆ ನಟಿಸಿದ್ದಾರೆ.
ಚಿತ್ರದ ಶುಭ ಸಮಾರಂಭದ ಅಂಗವಾಗಿ ಸಾಯಿ ಪಲ್ಲವಿ ಮತ್ತು ತಾವು ಹೂಮಾಲೆ ಧರಿಸಿರುವ ಫೋಟೋವನ್ನು ಚಿತ್ರದ ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಹಂಚಿಕೊಂಡಿದ್ದಾರೆ. ಇದು ನಿಜವಾದ ಮದುವೆಯ ಛಾಯಾಚಿತ್ರವಲ್ಲ ಬದಲಿಗೆ ಚಿತ್ರದ ಸಮಾರಂಭದಿಂದ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Adei 🤦♂️🤦♂️🤦♂️ pic.twitter.com/pk26NRPeFO
— Christopher Kanagaraj (@Chrissuccess) September 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.