ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ
Team Udayavani, Oct 19, 2021, 8:11 AM IST
ಇತ್ತೀಚೆಗಷ್ಟೇ ತೆರೆಕಂಡಿರುವ ನಟ ದುನಿಯಾ ವಿಜಯ್ ಅಭಿನಯದ ಮತ್ತು ನಿರ್ದೇಶನದ ಚೊಚ್ಚಲ ಚಿತ್ರ “ಸಲಗ’ ಭರ್ಜರಿಯಾಗಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ “ಸಲಗ’ ಚಿತ್ರ ಶೀಘ್ರದಲ್ಲಿಯೇ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾ ಸೇರಿದಂತೆ, ಅಲ್ಲಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಮಾತನಾಡಿರುವ ನಟ ಕಂ ನಿರ್ದೇಶಕ ದುನಿಯಾ ವಿಜಯ್ ಓಟಿಟಿಯಲ್ಲಿ “ಸಲಗ’ ಬಿಡುಗಡೆಯಾಗಲಿದೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ದುನಿಯಾ ವಿಜಯ್, “”ಸಲಗ ಸಿನಿಮಾಕ್ಕೆ ದೊಡ್ಡಮಟ್ಟದ ಯಶಸ್ಸು ಪ್ರೇಕ್ಷಕರಿಂದ ಸಿಕ್ಕಿದೆ. ನಮ್ಮ ಪ್ರೇಕ್ಷಕರ ಈ ಪ್ರೀತಿ-ಬೆಂಬಲಕ್ಕೆ ಇಡೀ ತಂಡ ಚಿರಋಣಿ ಆಗಿರುತ್ತೇವೆ.
ಆದರೆ, ಈ ಸಿನಿಮಾ ಓಟಿಟಿಯಲ್ಲಿ ಬರುತ್ತದೆ ಎಂಬ ವಿಚಾರವೊಂದು ಎಲ್ಲ ಕಡೆ ಓಡಾಡುತ್ತಿದೆ. ನಮ್ಮ ಯಶಸ್ಸನ್ನು ಸಹಿಸೋಕೆ ಆಗದವರು ಯಾರೋ ಕೆಲವರು, ಈ ರೀತಿ ನಮ್ಮ ಸಿನಿಮಾ ಓಟಿಟಿಯಲ್ಲಿ ಬರುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೇಗಾದರೂ ಸರಿ, ನಮ್ಮ ಸಿನಿಮಾಕ್ಕೆ ಡ್ಯಾಮೇಜ್ ಮಾಡೋಣ ಅಂತ ಏನೇನೋ ಮಾಡ್ತಾ ಇದ್ದಾರೆ.
ಹಾಗಾಗಿ, ಇದು ಓಟಿಟಿಯಲ್ಲಿ ಬರುತ್ತೆ ಅಂತ ಸುದ್ದಿ ಹಬ್ಬಿಸುತ್ತಿದ್ದಾರೆ. ಆದ್ರೆ ಓಟಿಟಿಯಲ್ಲಿ ಈ ಸಿನಿಮಾ ಬರಲ್ಲ. ಇದು ಥಿಯೇಟರ್‌ನಲ್ಲೇ ಇರುತ್ತದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿಯೇ ಜನರು ನೋಡಬೇಕು ಎಂದು ನಾವು ಎರಡು ವರ್ಷಗಳಿಂದ ಕಾದಿದ್ದೆವು. ಆಗಲೇ ನಮಗೆ ಓಟಿಟಿ ಆಫರ್ ಬಂದಿತ್ತು.
ಆದರೂ ನಾವೂ ಕೊಟ್ಟಿರಲಿಲ್ಲ. ಸಿನಿಮಾ ಪ್ರೇಮಿಗಳು “ಸಲಗ’ ಓಟಿಟಿಗೆ ಬರುತ್ತದೆ ಎಂದುಕೊಂಡು ಚಿತ್ರವನ್ನು ಮಿಸ್ ಮಾಡಿಕೊಳ್ಳಬೇಡಿ. ಚಿತ್ರಮಂದಿರಕ್ಕೆ ಬಂದು ನೋಡಿ. ಇಂತಹ ಸುಳ್ಳು ಸುದ್ದಿ ಹಬ್ಬಿಸುವವರು ಇದ್ದೇ ಇರುತ್ತಾರೆ. ಅವರ ಬಗ್ಗೆ ನಾವು ಕೇರ್ ಮಾಡುವುದಿಲ್ಲ’ ಎಂದಿದ್ದಾರೆ. ಒಟ್ಟಾರೆ “ಸಲಗ’ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಊಹಾಪೋಹ ಸುದ್ದಿಗಳಿಗೆ ದುನಿಯಾ ವಿಜಯ್ ತಮ್ಮ ವಿಡಿಯೋ ಮೂಲಕ ಫುಲ್ ಸ್ಟಾಪ್ ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.