ಕೋವಿಡ್ ಸಂಕಷ್ಟ : ಬಡ ರೋಗಿಗಳ ನೆರವಿಗೆ ನಿಂತ ನಟ ಸಲ್ಮಾನ್ ಖಾನ್
Team Udayavani, May 22, 2021, 8:30 PM IST
ಬಾಲಿವುಡ್ ಭಾಯ್ ಜಾನ್ ಸಲ್ಮಾನ್ ಖಾನ್ ಕೋವಿಡ್ ರೋಗಿಗಳ ಪಾಲಿಗೆ ಆಪತ್ಬಾಂಧವ ಆಗಿದ್ದಾರೆ. ಬಡರೋಗಿಗಳ ಚಿಕಿತ್ಸೆಗಾಗಿ 500 ಆಮ್ಲಜನಕದ ಸಾಂದ್ರಕಗಳನ್ನು ನೀಡಿದ್ದಾರೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆ ಶುರುವಾದಾಗಿನಿಂದ ಪರೋಪಕಾರಿ ಕೆಲಸ ಮಾಡುತ್ತಿರುವ ಸಲ್ಲು ಭಾಯ್, ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರಿಗಾಗಿ ಅನ್ನ ದಾಸೋಹ ಮಾಡುತ್ತಿದ್ದಾರೆ. ನಿತ್ಯ 5000 ಕ್ಕೂ ಹೆಚ್ಚು ಜನರ ಹಸಿವು ನೀಗಿಸುತ್ತಿದ್ದಾರೆ. ಇದೀಗ ಕೋವಿಡ್ ರೋಗದಿಂದ ಬಳಲುತ್ತಿರುವ ಬಡವರ ಚಿಕಿತ್ಸೆಗೆ ನೆರವಾಗಿದ್ದಾರೆ.
ಶಾಸಕ ಬಾಬಾ ಸಿದ್ದಿಕ್ ಹಾಗೂ ಅವರ ಮಗ ಜೀಶಾನ್ ಸಿದ್ದಿಕ್ ಜೊತೆ ಸೇರಿ 500 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ. ಬುಧವಾರ ಇವು ಮುಂಬೈ ತಲುಪಿವೆ . ಈ ಎಲ್ಲಾ ಆಕ್ಸಿಜನ್ ಸಾಂದ್ರಕಗಳನ್ನು ಪೋಲ್ಯಾಂಡ್, ದುಬೈ, ಯುಕೆಯಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಮೊದಲು ತೀರಾ ಅವಶ್ಯಕತೆ ಇರುವ ಮುಂಬೈನ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ತಲುಪಿಸುತ್ತೇವೆ. ಜೊತೆಗೆ ಮಹಾರಾಷ್ಟ್ರದ ವಿವಿಧ ಭಾಗಗಳಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಜೊತೆಗೆ ಅಕಸ್ಮಾತ್ ಇನ್ನಿತರ ರಾಜ್ಯಗಳಾದ ಗೋವಾ, ಬಿಹಾರ ರಾಜ್ಯಗಳಿಗೆ ಆಕ್ಸಿಜನ್ ಅವಶ್ಯಕತೆ ಇದ್ದರೆ ಯಾವುದೇ ಹಣವಿಲ್ಲದೇ ಉಚಿತವಾಗಿ ಕಳುಹಿಸಿಕೊಡುತ್ತೇವೆ ಎಂದು ಎಂದು ಬಾಬಾ ಸಿದ್ದಿಕ್ ಮಾಹಿತಿ ನೀಡಿದ್ದಾರೆ.
ಆಮ್ಲಜನಕ ಸಾಂದ್ರಕಗಳ ಬಗ್ಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಸಲ್ಮಾನ್ ಅವರು ಅವಶ್ಯಕತೆ ಇದ್ದವರು ಈ ಮೊಬೈಲ್ ನಂಬರ್ಗೆ 8451869785 ಸಂಪರ್ಕಿಸಲು ತಿಳಿಸಿದ್ದು, ಉಚಿತವಾಗಿ ನೀಡಲಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಸಾಂದ್ರಕಗಳನ್ನು ತರಿಸಿರುವ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.