ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ; ಸಲ್ಮಾನ್ ಖಾನ್ ವಿಚಾರಣೆ ಮಾಡಲ್ಲ ಎಂದ ಪೊಲೀಸರು
Team Udayavani, Jul 15, 2020, 2:09 PM IST
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡು ಒಂದು ತಿಂಗಳು ಕಳೆದಿದೆ. ಆದರೇ ಇಲ್ಲಿಯವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು 35ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ವಿಚಾರಣೆ ಮಾಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ, ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಟ್ಯಾಲೆಂಟ್ ಮ್ಯಾನೇಜರ್ ರೇಶ್ಮಾ ಶೆಟ್ಟಿ ಮುಂತಾದವರನ್ನು ವಿಚಾರಣೆಗೆ ಕರೆಸಲಾಗಿತ್ತು.
ಏತನ್ಮಧ್ಯೆ ಸಲ್ಮಾನ್ ಖಾನ್ ಹೆಸರು ಕೂಡ ಈ ಪ್ರಕರಣದೊಂದಿಗೆ ಥಳಕು ಹಾಕಿಕೊಂಡಿದ್ದರಿಂದ ಅವರ ವಿಚಾರಣೆಯನ್ನು ಮಾಡಬಹುದೆಂದು ಅಂದಾಜಿಸಲಾಗಿತ್ತು. ಈ ಕುರಿತು ಆಗ್ರಹಗಳು ಕೂಡ ಕೇಳಿ ಬಂದಿದ್ದವು.
ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣ್ ಜೋಹರ್, ಸಲ್ಮಾನ್ ಖಾನ್, ಏಕ್ತಾ ಕಪೂರ್, ಸಂಜಯ್ ಲೀಲಾ ಬನ್ಸಾಲಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಕೋರಿ ಮುಜಾಫರ್ಪುರ್ ಕೋರ್ಟ್ನಲ್ಲಿ ಬಿಹಾರದ ವಕೀಲರಾದ ಸುಧೀರ್ ಕುಮಾರ್ ಓಝಾ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.
ಕಳೆದ ವಾರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮ್ಯಾನೇಜರ್ ಆಗಿದ್ದ ರೇಶ್ಮಾ ಶೆಟ್ಟಿ ಅವರನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರನ್ನು ಕೂಡ ವಿಚಾರಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ, ಈ ವರದಿಯನ್ನು ಪೊಲೀಸರು ತಳ್ಳಿ ಹಾಕಿದ್ದಾರೆ.
ಸುಶಾಂತ್ ಆತ್ಮಹತ್ಯೆಯಲ್ಲಿ ಸಲ್ಮಾನ್ ಅವರ ನೇರ ಪಾತ್ರವಿಲ್ಲದಿದ್ದರೂ, ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಆದರೇ ಇದಕ್ಕೆ ಪ್ರಬಲ ಸಾಕ್ಷ್ಯಾಧಾರಗಳ ಕೊರತೆ ಇರುವುದರಿಂದ ಮುಂಬೈ ಪೊಲೀಸರು ವಿಚಾರಣೆಗೆ ಕರೆಸುತ್ತಿಲ್ಲ ಎಂದು ವರದಿ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್ ಶೆಟ್ಟಿಗೆ ಗಂಭೀರ ಗಾಯ
Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ
SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?
BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್ ʼಛಾವಾʼ; ರಿಲೀಸ್ ಡೇಟ್ ಮುಂದೂಡಿಕೆ?
Ramayana: ಎರಡು ಭಾಗಗಳಾಗಿ ಬರಲಿದೆ ಬಿಗ್ ಬಜೆಟ್ ʼರಾಮಾಯಣʼ; ರಿಲೀಸ್ ಡೇಟ್ ಅನೌನ್ಸ್
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.