ಸಲ್ಮಾನ್ ಖಾನ್ ಬರ್ತ್ ಡೇ ವಿಶ್ ಗೆ ನೂಕುನುಗ್ಗಲು: ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್
Team Udayavani, Dec 28, 2022, 11:38 AM IST
ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮಂಗಳವಾರ (ಡಿ.27 ರಂದು) ತಮ್ಮ 57ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಬಿಟೌನ್ ಸೆಲೆಬ್ರಿಟಿಗಳು ಟೈಗರ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿ ನಟನಿಗೆ ವಿಶ್ ಮಾಡಿದ್ದಾರೆ.
ಸಲ್ಮಾನ್ ಖಾನ್ ಗೆ ಬಹುದೊಡ್ಡ ಅಭಿಮಾನಿ ವರ್ಗವಿದೆ. ಪ್ರತಿವರ್ಷ ಅವರ ಹುಟ್ಟುಹಬ್ಬಕ್ಕೆ ರಾತ್ರಿಯೇ ಸಾಲಿನಲ್ಲಿ ನಿಂತು ಕಾದು ಕುಳಿತುಕೊಳ್ಳುವ ಅಭಿಮಾನಿಗಳಿದ್ದಾರೆ. ಮಂಗಳವಾರವೂ ಹೀಗೆ ಸಾವಿರಾರು ಮಂದಿ ಅಭಿಮಾನಿಗಳು ಸಲ್ಮಾನ್ ಅವರ ಹುಟ್ಟು ಹಬ್ಬಕ್ಕೆ ವಿಶ್ ಮಾಡಲು ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತಿದ್ದರು.
ಪೋಸ್ಟರ್, ಬ್ಯಾನರ್ ಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ತಮ್ಮ ಗ್ಯಾಲಕ್ಸಿ ನಿವಾಸದಲ್ಲಿ ಸಲ್ಮಾನ್ ಖಾನ್ ಅವರು ಅಭಿಮಾನಿಗಳತ್ತ ಕೈ ಬೀಸಿ ಎಲ್ಲರಿಗೂ ಥ್ಯಾಂಕ್ಯೂ ಹೇಳಿದ್ದಾರೆ. ಈ ವೇಳೆ ಅಭಿಮಾನಿಗಳು ಖುಷಿಯಿಂದ ಆಳವಡಿಸಿದ ಬ್ಯಾರಿಕೇಡ್ ಗಳನ್ನು ದಾಟಿ ಮುಂದೆ ಬರಲು ಯತ್ನಿಸಿದ್ದಾರೆ.
ಯಾವಾಗ ಅಭಿಮಾನಿಗಳ ದಂಡು ಹೆಚ್ಚಾಗಿ ಬ್ಯಾರಿಕೇಡ್ ಮುರಿದು ನುಗ್ಗಲು ಯತ್ನಸಿದ್ದಾರೋ ಆ ವೇಳೆ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್‌ನ ವೇಳೆ ಅಭಿಮಾನಿಗಳ ಚಪ್ಪಲಿ, ಬ್ಯಾಗ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಬರ್ತ್ ಡೇ ವೇಳೆ ಆದ ಈ ನೂಕುನುಗ್ಗಲಿನ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಭಿಮಾನಿಗಳ ಮೇಲೆ ಈ ರೀತಿ ಲಾಠಿ ಚಾರ್ಚ್ ಮಾಡುವುದು ಸರಿಯಲ್ಲ ನೆಟ್ಟಿಗರು ಕಿಡಿಕಾರಿದ್ದಾರೆ. ಇನ್ನು ಕೆಲವರು ಇವರೆಲ್ಲಾ ಕೆಲಸವಿಲ್ಲದವರು, ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಸಲ್ಮಾನ್ ಖಾನ್ ಬರ್ತ್ ಡೇ ಪಾರ್ಟಿ ಅವರ ತಂಗಿ ಅರ್ಪಿತಾ ಅವರ ನಿವಾಸದಲ್ಲಿ ಆಯೋಜಿಸಲಾಗಿತ್ತು. ಶಾರುಖ್ ಖಾನ್, ಸಂಗೀತಾ ಬಿಜಲಾನಿ, ರಿತೇಶ್ ದೇಶಮುಖ್, ಜೆನಿಲಿಯಾ ಡಿಸೋಜಾ, ತಬು, ಕಾರ್ತಿಕ್ ಆರ್ಯನ್ ಮುಂತಾದ ನಟರು ಭಾಗಿಯಾಗಿದ್ದರು.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.