ಗುಡ್ ನ್ಯೂಸ್: ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕೆಜಿಎಫ್-2 ಅಧೀರ “ಸಂಜಯ್ ದತ್”
ಈ ಖುಷಿಯ ವಿಚಾರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.
Team Udayavani, Oct 21, 2020, 6:24 PM IST
ಮುಂಬೈ: ಕಳೆದ ಎರಡು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಬಾಲಿವುಡ್ ನಟ, ಕೆಜಿಎಫ್ 2 ಚಾಪ್ಟರ್ ನ ಅಧೀರ ಪಾತ್ರಧಾರಿ ಸಂಜಯ್ ದತ್ ಬುಧವಾರ (ಅಕ್ಟೋಬರ್ 21, 2020)ಸಾಮಾಜಿಕ ಜಾಲತಾಣದಲ್ಲಿ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದು, ತಾನು ಆರೋಗ್ಯವಂತನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿಯೇ ತನಗೆ ದೇವರು ಆರೋಗ್ಯ ಕರುಣಿಸಿದ್ದಾನೆ ಎಂದು ದತ್ ಪ್ರತಿಕ್ರಿಯೆ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಈ ಖುಷಿಯ ವಿಚಾರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.
“ ಕಳೆದ ಕೆಲವು ವಾರಗಳು ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾ ಕಠಿಣ ದಿನಗಳಾಗಿದ್ದವು. ಆದರೆ ದೇವರು ನನಗೆ ಕಠಿಣ ಹೋರಾಟದ ಸವಾಲನ್ನು ಒಡ್ಡಿದ್ದು, ಇಂದು ನಾನು ಅದನ್ನು ಜಯಿಸಿದ್ದೇನೆ. ಅದು ನನ್ನ ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ. ನಾನು ಗುಣಮುಖನಾಗಿರುವುದೇ ಮಕ್ಕಳಿಗೆ ನೀಡಿರುವ ಉತ್ತಮ ಕೊಡುಗೆಯಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಾಕಿಸ್ತಾನದಲ್ಲಿ ಗೆಲ್ಲಬೇಕಷ್ಟೆ!ಕೈ ಮುಖಂಡರಿಗೆ ಮತ್ತೆ ಸಿಎಂ ಹುದ್ದೆ ಕನಸು
ಇದು ಸಾಧ್ಯವಾಗಿದ್ದು ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ. ನಾನು ನನ್ನ ಕುಟುಂಬಕ್ಕೆ, ಗೆಳೆಯರಿಗೆ ಮತ್ತು ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಅಪರಿಮಿತವಾದ ಪ್ರೀತಿ ಮತ್ತು ಅಭಿಮಾನಕ್ಕೆ ಅಭಾರಿಯಾಗಿದ್ದಾನೆ.
ನಾನು ಮುಖ್ಯವಾಗಿ ಕೋಕಿಲಾಬೆನ್ ಆಸ್ಪತ್ರೆಯ ಡಾ.ಸೇವಂತಿ ಹಾಗೂ ಅವರ ವೈದ್ಯರ ತಂಡಕ್ಕೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ ಕೆಲವು ವಾರಗಳಿಂದ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಟ್ವೀಟ್ ನಲ್ಲಿ ಶೇರ್ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.
My heart is filled with gratitude as I share this news with all of you today. Thank you ?? pic.twitter.com/81sGvWWpoe
— Sanjay Dutt (@duttsanjay) October 21, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.