![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
Team Udayavani, Mar 5, 2024, 1:35 PM IST
ಮುಂಬಯಿ: ಉದ್ಯಮಿ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಪೂರ್ವ ಸಮಾರಂಭ ಅದ್ಧೂರಿಯಾಗಿ ಗುಜರಾತಿನ ಜಾಮ್ ನಗರದಲ್ಲಿ ನೆರವೇರಿದೆ. ಮೂರು ದಿನಗಳ ಕಾರ್ಯಕ್ರಮಕ್ಕೆ ಕೋಟಿ ಕೋಟಿ ಖರ್ಚು ವೆಚ್ಚಗಳಾಗಿರುವುದು ಕಾರ್ಯಕ್ರಮದ ಅದ್ಧೂರಿತನದಿಂದಲೇ ಗೊತ್ತಾಗುತ್ತದೆ.
ಅನಂತ್ – ರಾಧಿಕಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ದೇಶ – ವಿದೇಶದ ಖ್ಯಾತ ಸೆಲೆಬ್ರಿಟಿಗಳು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿದ್ದರು. ಪಾಪ್ ಗಾಯಕಿ ರಿಹಾನಾ ಅವರ ಮ್ಯೂಸಿಕಲ್ ನೈಟ್ ಎಲ್ಲರನ್ನು ರಂಜಿಸಿತ್ತು. ಅವರ ಹಾಡಿಗೆ ಬಿಟೌನ್ ಸ್ಟಾರ್ಸ್ ಗಳು ಕೂಡ ಹೆಜ್ಜೆ ಹಾಕಿದ್ದರು. ಅವರು ಭಾರತಕ್ಕೆ ಬಂದು ಅಂಬಾನಿ ಪುತ್ರ ಪ್ರೀ ವೆಡ್ಡಿಂಗ್ ನಲ್ಲಿ ಸ್ಟೇಜ್ ಕಾರ್ಯಕ್ರಮ ನೀಡಲು 75 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎಂದು ವರದಿ ಆಗಿದೆ.
ಕಾರ್ಯಕ್ರಮದಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಹಾಗೂ ಆಮಿರ್ ಖಾನ್ ಮೂವರು ಜೊತೆಯಾಗಿ ಕಾಣಿಸಿಕೊಂಡಿದ್ದರು. ಈ ಮೂವರನ್ನು ಜೊತೆಯಾಗಿ ಒಂದೇ ವೇದಿಕೆಯಲ್ಲಿ ನಿಲ್ಲಿಸುವುದು ಯಾವ ನಿರ್ಮಾಪಕನಿಗೂ ಕಷ್ಟ ಸಾಧ್ಯದ ಕೆಲಸ ಅಂತಲೇ ಹೇಳಬಹುದು. ಆದರೆ ಅಂಬಾನಿ ಅದನ್ನು ಮಾಡಿ ತೋರಿಸಿದ್ದಾರೆ.
ಬಿಟೌನ್ ನ ಮೂವರು ಖಾನ್ ಗಳು ವೇದಿಕೆಯಲ್ಲಿ ʼನಾಟು ನಾಟುʼ ಹಾಡಿಗೆ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂವರು ಜೊತೆಯಾಗಿ ಕಾಣಿಸಿಕೊಂಡು ಹೆಜ್ಜೆ ಹಾಕಲು ಎಷ್ಟು ಸಂಭಾವನೆ ಪಡೆದಿರಬಹುದೆಂದು ಹಲವರಿಗೆ ಪ್ರಶ್ನೆಯೊಂದು ಕಾಡಿತ್ತು.
ಇದೀಗ ಈ ಬಗ್ಗೆ ಒಂದು ಸುದ್ದಿ ಹೊರಬಿದ್ದಿದೆ. ಮೂವರು ಖಾನ್‌ಗಳು ವೇದಿಕೆಯಲ್ಲಿ ತಮ್ಮ ಪ್ರದರ್ಶನಕ್ಕಾಗಿ ಒಂದು ಪೈಸೆಯನ್ನೂ ತೆಗದುಕೊಂಡಿಲ್ಲ. ಅವರು ವೇದಿಕೆಯನ್ನು ಹಂಚಿಕೊಳ್ಳುವ ಮತ್ತು ಅಂಬಾನಿಗಳಿಗೆ ಮನರಂಜನೆ ನೀಡುವುದಕ್ಕೆ ಉತ್ಸುಕರಾಗಿದ್ದರು ಎಂದು ವರದಿ ತಿಳಿಸಿದೆ.
ದಿಲ್ಜಿತ್ ದೋಸಾಂಜ್, ಶ್ರೇಯಾ ಘೋಷಾಲ್, ಉದಿತ್ ನಾರಾಯಣ್, ಅರಿಜಿತ್ ಸಿಂಗ್, ಎಕಾನ್ ಸೇರಿದಂತೆ ಹಲವರು ವೇದಿಕೆಯಲ್ಲಿ ಕಾರ್ಯಕ್ರಮ ನೀಡಿದ್ದರು.
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.