ಆಶ್ಲೀಲ ವಿಡಿಯೋ ಕೇಸ್ ಬಳಿಕ ಮೊದಲ ಬಾರಿ ಮಾಸ್ಕ್ ಇಲ್ಲದೆ ಕಾಣಿಸಿಕೊಂಡ ರಾಜ್ ಕುಂದ್ರಾ
ದೇವರ ದರ್ಶನಕ್ಕೆ ಮಾಸ್ಕ್ ಹಾಕದೆ ಬಂದ ರಾಜ್ ಕುಂದ್ರಾ.!
Team Udayavani, Feb 27, 2023, 3:55 PM IST
ಚಂಡೀಗಢ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಆಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಮಾಸ್ಕ್ ಹಾಕಿಕೊಂಡು, ಮುಖ ಮುಚ್ಚಿಕೊಂಡು ಸಾರ್ವಜನಿಕರ ಮುಂದೆ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ. ಕೆಲ ಸಮಯದ ಹಿಂದೆ ಸತ್ಯಕ್ಕೆ ಖಂಡಿತ ಜಯ ಸಿಗುತ್ತದೆಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದರು.
ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿ ತನ್ನ ಪ್ರಾರ್ಥನೆಯನ್ನು ಸಲ್ಲಿಸಲು ಶಿಲ್ಪಾ ಶೆಟ್ಟಿ ಕುಟುಂಬ ಪಂಜಾಬ್ ಗೆ ಬಂದು ಇಳಿದಿದ್ದಾರೆ. ಈ ವೇಳೆ ಅವರೊಂದಿಗೆ ಶಿಲ್ಪಾ ಶೆಟ್ಟಿಯ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಅವರು ಕೂಡ ಬಂದಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಲ್ಲಿ ʼಕಿಲಾಡಿʼ ಅಕ್ಷಯ್ ಸಿನಿಮಾಗಳು ಸತತ ಸೋಲು: ಕೊನೆಗೂ ಮೌನ ಮುರಿದ ನಟ
ಆಶ್ಲೀಲ ವಿಡಿಯೋಗಳನ್ನು ನಿರ್ಮಿಸಿದ ಆರೋಪದ ಮೇಲೆ ರಾಜ್ ಕುಂದ್ರಾ ವಿರುದ್ಧ ಪ್ರಕರಣ ದಾಖಲಾಗಿ ರಾಜ್ ಕುಂದ್ರಾ ಜೈಲು ವಾಸ ಮಾಡಿ ಜಾಮೀನು ಪಡೆದು ಹೊರ ಬಂದಿದ್ದರು. ( ಸೆ.21,2021 ರಂದು ಜೈಲಿನಿಂದ ರಿಲೀಸ್) ಜೈಲಿನಿಂದ ಹೊರ ಬಂದ ಬಳಿಕ ನಾನಾ ತರದ ಮಾಸ್ಕ್ ಗಳನ್ನು ಹಾಕಿಕೊಂಡು ಮುಖವನ್ನು ಮುಚ್ಚಿಕೊಂಡು ತಿರುಗಾಡುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ನಟಿ ಶೆರ್ಲಿನ್ ಚೋಪ್ರಾ ವಿರುದ್ದ ಅನೇಕ ಬಾರಿ ಆರೋಪವನ್ನು ಹಾಕಿ ಪೋಸ್ಟ್ ಮಾಡುತ್ತಿದ್ದರು.
ಸೋಮವಾರ (ಫೆ.27 ರಂದು) ಅಮೃತಸರಕ್ಕೆ ಬಂದು ಇಳಿದಾಗ ರಾಜ್ ಕುಂದ್ರಾ ಅವರು ಮಾಸ್ಕ್ ಹಾಕದೆ ಬಂದಿರುವುದು ಪಾಪರಾಜಿಗಳ ( ಬಿಟೌನ್ ಛಾಯಗ್ರಾಹಕರು) ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಕರಣದ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಮಾಸ್ಕ್ ಹಾಕದೆ ರಾಜ್ ಕುಂದ್ರಾ ಅವರು ಕಾಣಿಸಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ರಾಜ್ ಕುಂದ್ರಾ ಅವರ ಫೋಟೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.