![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 9, 2021, 7:30 PM IST
ದುಬೈ: ಭಾರತವು ಕೋವಿಡ್ ಸೋಂಕಿಗೆ ದೇಶೀಯವಾಗಿ ಲಸಿಕೆ ಅಭಿವೃದ್ದಿಪಡಿಸಿ ಅದರ ಬಳಕೆಗೆ ಇನ್ನೇನು ಕ್ಷಣಗಣನೆ ಆರಂಭಿಸಿರುವಾಗಲೇ ನಟಿ ಶಿಲ್ಪಾ ಶಿರೋಡ್ಕರ್ ಅವರು ದುಬೈನಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ.
ಸದ್ಯ ದುಬೈನಲ್ಲಿ ಇರುವ ನಟಿ ಅಲ್ಲಿ ಕೋವಿಡ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಆ ಮೂಲಕ ಕೋವಿಡ್ ಲಸಿಕೆ ಪಡೆದುಕೊಂಡ ಮೊದಲ ಬಾಲಿವುಡ್ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಕುರಿತಾಗಿ ತನ್ನ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ನಾನು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದೇನೆ ಹಾಗೂ ಸುರಕ್ಷಿತವಾಗಿದ್ದೇನೆ, ಧನ್ಯವಾದಗಳು UAE ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ತಾವು ಲಸಿಕೆ ಹಾಕಿಸಿಕೊಂಡಿರುವ ಪೋಟೋವೊಂದನ್ನು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ದೇಶದ ಮೊದಲ ಆಟಿಕೆ ಕ್ಲಸ್ಟರ್‌ಗೆ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ
1989ರಲ್ಲಿ ತೆರೆಕಂಡ ‘ಭ್ರಷ್ಟಾಚಾರ್’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಶಿಲ್ಪಾ ಶಿರೋಡ್ಕರ್ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ಜೊತೆಯಲ್ಲಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಆ ನಂತರ ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಈ ನಟಿ 2000 ನೇ ಇಸವಿಯಲ್ಲಿ ತೆರೆಕಂಡಿದ್ದ ಗಜಗಾಮಿನಿ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ನಂತರದ ದಿನಗಳಲ್ಲಿ ಚಿತ್ರರಂಗದಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.
ಈ ನಟಿ ಮಹೇಶ್ ಬಾಬು ಅವರ ಪತ್ನಿಯ ಸಹೋದರಿಯಾಗಿದ್ದು, ಹಲವು ಧಾರವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ನಂತರ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿರುವ ಇವರು ದುಬೈನಲ್ಲಿಯೇ ವಾಸವಾಗಿದ್ದಾರೆ .
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.