ತಮ್ಮ ಫೋಟೋ ಹಾಕಿ ‘RIP’ ಹೇಳಿದ್ದಕ್ಕೆ ನಟ ಸಿದ್ದಾರ್ಥ ಪ್ರತಿಕ್ರಿಯೆ ಏನು ?
Team Udayavani, Sep 2, 2021, 9:11 PM IST
ಚೆನ್ನೈ : ತಮ್ಮ ಫೋಟೋ ಹಾಕಿ RIP ಹೇಳಿದ ವ್ಯಕ್ತಿಗೆ ನಟ ಸಿದ್ಧಾರ್ಥ್ ಪ್ರತಿಕ್ರಿಯಿಸಿದ್ದು, ಇದು ಉದ್ದೇಶಿತ ದ್ವೇಷ ಹಾಗೂ ಕಿರುಕುಳ. ಇಂದು ನಾವು ಯಾವ ಮಟ್ಟಕ್ಕೆ ಇಳಿದಿದ್ದೇವೆ ನೋಡಿ ಎಂದಿದ್ದಾರೆ.
ಇಂದು (ಸೆ.02) ಹಿಂದಿ ಬಿಗ್ ಬಾಸ್ ವಿನ್ನರ್ ಹಾಗೂ ಕಿರುತೆರೆಯ ನಟ ಸಿದ್ಧಾರ್ಥ್ ಶುಕ್ಲಾ ಅವರು ಹೃದಯಘಾತದಿಂದ ಸಾವನ್ನಪ್ಪಿದರು. ಈ ನಟನ ಸಾವಿಗೆ ಎಲ್ಲೆಡೆ ಸಂತಾಪ ವ್ಯಕ್ತವಾಯಿತು. ಇದೇ ವೇಳೆ ವ್ಯಕ್ತಿಯೋರ್ವ ಟ್ವಿಟರ್ ನಲ್ಲಿ ತಮಿಳು ನಟ ಸಿದ್ಧಾರ್ಥ್ ಅವರ ಫೋಟೊ ಹಾಕಿ RIP ಅಂತಾ ಕಾಮೆಂಟ್ ಮಾಡಿದ್ದಾನೆ. ಸೆನ್‍ಸೆ ಎಕ್ಸ್ ಹೆಸರಿನಲ್ಲಿರುವ ಟ್ವಿಟರ್ ಖಾತೆಯಲ್ಲಿ ಸಿದ್ಧಾರ್ಥ್ ಬದುಕಿದ್ದಾಗಲೇ ಸಂತಾಪ ಸೂಚಿಸಲಾಗಿದೆ.
Targetted hate and harassment. What have we been reduced to? pic.twitter.com/61rgN88khF
— Siddharth (@Actor_Siddharth) September 2, 2021
ತಮಗೆ ಸಂತಾಪ ಸೂಚಿಸಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿದ್ಧಾರ್ಥ್ ಅವರು, ಈ ಟ್ವೀಟ್ ಹಾಗೂ ಇದಕ್ಕೆ ಬಂದಂತಹ ಪ್ರತಿಕ್ರಿಯೆಗಳು ಪ್ರಸ್ತುತ ದಿನಗಳಲ್ಲಿ ನಿಮಗೆ ಅಚ್ಚರಿಯನ್ನುಂಟು ಮಾಡಬಾರದು. ಇದು ಉದ್ದೇಶಿತವಾದ ದ್ವೇಷ ಹಾಗೂ ಕಿರುಕುಳ. ನಾವು ಇಂದು ಯಾವ ಮಟ್ಟಕ್ಕೆ ಇಳಿದಿದ್ದೇವೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಸಿದ್ದಾರ್ಥ್ ಅವರು ಕೇಂದ್ರ ಸರ್ಕಾರ ವಿರುದ್ಧ ಕೆಲವೊಂದು ಸಾರಿ ಟೀಕೆ ಮಾಡಿದ್ದುಂಟು. ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಈ ನಟ ಮಾತನಾಡಿದ್ದರು. ಅಂದಿನಿಂದ ಇವರ ಬಗ್ಗೆ ಕೆಲವೊಂದಿಷ್ಟು ಜನರು ಆಕ್ರೋಶ ಹೊರ ಹಾಕಿದ್ದುಂಟು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.