Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Team Udayavani, Mar 17, 2024, 10:34 AM IST
ಚಂಡಿಗಢ: 2022 ರಲ್ಲಿ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರ ತಾಯಿ ಚರಣ್ ಕೌರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮೂಸೆವಾಲ ಅವರ ತಂದೆ ಬಾಳ್ಕೌರ್ ಸಿಂಗ್ ಮಗುವಿನ ಫೋಟೋವನ್ನು ಹಂಚಿಕೊಂಡಿದ್ದಾರೆ.
“ಶುಭ ದೀಪ್ (ಮೊಸೆವಾಲ) ನ್ನು ಪ್ರೀತಿಸುವ ಲಕ್ಷಾಂತರ ಆತ್ಮಗಳ ಆಶೀರ್ವಾದದೊಂದಿಗೆ, ಪರಮಾತ್ಮನು ಶುಭ್ ಅವರ ಕಿರಿಯ ಸಹೋದರನನ್ನು ನಮ್ಮ ಗುಂಪಿಗೆ ಸೇರಿಸಿದ್ದಾನೆ. ವಾಹೇ ಗುರುಗಳ ಆಶೀರ್ವಾದದಿಂದ ಕುಟುಂಬವು ಆರೋಗ್ಯವಾಗಿದೆ ಮತ್ತು ಅಪಾರ ಪ್ರೀತಿಗೆ ಎಲ್ಲಾ ಹಿತೈಷಿಗಳಿಗೆ ಧನ್ಯವಾದ” ಎಂದು ಬಾಳ್ಕೌರ್ ಸಿಂಗ್ ಫೋಟೋವನ್ನು ಹಂಚಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಮೂಸೆವಾಲ ಅವರ ತಾಯಿ ಚರಣ್ ಕೌರ್ ಶೀಘ್ರದಲ್ಲೇ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ವರದಿ ಆಗಿತ್ತು. ಆದರೆ ಮೂಸೆವಾಲ ತಂದೆ ಇದನ್ನು ಅಲ್ಲಗೆಲ್ಲದಿದ್ದರು.
ಚರಣ್ ಕೌರ್ ಐವಿಎಫ್ ತಂತ್ರದ ಮೂಲಕ ಮಗುವಿಗೆ ಜನ್ಮ ನೀಡಿದ್ದಾರೆ. ಕಳೆದ ವರ್ಷ ಇದರ ಕಾರ್ಯವಿಧಾನಕ್ಕಾಗಿ ಮೊಸೆವಾಲ ಪೋಷಕರು ವಿದೇಶಕ್ಕೆ ಹೋಗಿದ್ದರು ಎಂದು ಮೂಲಗಳು ತಿಳಿಸಿವೆ.
ಕಾರ್ಯವಿಧಾನ ಯಶಸ್ವಿಯಾಗುವವರೆಗೆ ಸುದ್ದಿಯನ್ನು ಸಾರ್ವಜನಿಕಗೊಳಿಸಬಾರದು ಎಂದು ಕುಟುಂಬವು ಆ ಸಮಯದಲ್ಲಿ ವಿನಂತಿಸಿತ್ತು.
2022 ರ ಮೇ 29 ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಮೂಸೆವಾಲ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಅದೇ ವರ್ಷದಲ್ಲಿ ಅವರು ಮಾನ್ಸಾದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಪಂಜಾಬಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
ಈ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 31 ಆರೋಪಿಗಳನ್ನು ಹೆಸರು ಕೇಳಿ ಬಂದಿದ್ದು, ಇದುವರೆಗೆ 25 ಮಂದಿಯನ್ನು ಬಂಧಿಸಲಾಗಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.