Thalaivar 171: ಲೋಕೇಶ್‌ ಸಿನಿಮಾದಲ್ಲಿ ʼತಲೈವಾʼ ಜೊತೆ ʼಡಾನ್‌ʼ ಶಿವಕಾರ್ತಿಕೇಯನ್ ನಟನೆ?

Team Udayavani, Nov 28, 2023, 11:10 AM IST

Thalaivar 171: ಲೋಕೇಶ್‌ ಸಿನಿಮಾದಲ್ಲಿ ʼತಲೈವಾʼ ಜೊತೆ ʼಡಾನ್‌ʼ ಶಿವಕಾರ್ತಿಕೇಯನ್ ನಟನೆ?

ಚೆನ್ನೈ: ʼಜೈಲರ್‌ʼ ಬಳಿಕ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ‘ತಲೈವರ್ 170’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆ ಅವರ ‘ತಲೈವರ್ 170′ ಸಿನಿಮಾದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ʼತಲೈವರ್ 171ʼ ಲೋಕೇಶ್ ಸಿನೆಮ್ಯಾಟಿಕ್ ಯೂನಿವರ್ಸ್‌ನ ಭಾಗವಾಗಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ತಮಿಳು ಸಿನಿಮಾರಂಗದ ಖ್ಯಾತ ಸ್ಟಾರ್‌ ಗಳು ಇರಲಿದ್ದಾರೆ ಎನ್ನುವ ಮಾತೊಂದು ಸಿನಿಮಾ ಸಟ್ಟೇರುವ ಮುನ್ನವೇ ಹರಿದಾಡುತ್ತಿದೆ.

ರಜಿನಿಕಾಂತ್‌ ಅವರೊಂದಿಗಿನ ಸಿನಿಮಾಕ್ಕಾಗಿ ಲೋಕೇಶ್‌ ಕನಕರಾಜ್‌ ಅವರು ಸಾಕಷ್ಟು ತಯಾರಿಯಲ್ಲಿ ನಿರತರಾಗಿದ್ದಾರೆ. ಪಾತ್ರವರ್ಗಗಳ ಚರ್ಚೆ ನಡೆಯುತ್ತಿರುವ ವೇಳೆ ಸ್ಟಾರ್‌ ನಟರೊಬ್ಬರು ʼತಲೈವಾʼ ಜೊತೆ ಸ್ಕ್ರೀನ್‌ ಹಂಚಿಕೊಳ್ಳಲಿದ್ದಾರೆ ಎನ್ನುವ ವರದಿಯೊಂದು ಹೊರಬಿದ್ದಿದೆ.

ʼಮಾವೀರನ್’ ನಟ ಶಿವಕಾರ್ತಿಕೇಯನ್ ರಜಿನಿಕಾಂತ್‌ ದೊಡ್ಡ ಅಭಿಮಾನಿಯಲ್ಲಿ ಒಬ್ಬರು. ಅನೇಕ ಸಂದರ್ಶನದಲ್ಲಿ ಈ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ಈ ಹಿಂದೆ ರಜಿನಿ ಅವರ ಧ್ವನಿಯನ್ನು ಮಿಮಿಕ್ರಿ ಮಾಡಿದ್ದರು. ಇದೀಗ ತನ್ನ ಸ್ಪೂರ್ತಿದಾಯಕ ನಾಯಕನ ಜತೆ ಶಿವಕಾರ್ತಿಕೇಯನ್  ನಟಿಸಲಿದ್ದಾರೆ ಎನ್ನುವ ವರದಿಯೊಂದು ಬಂದಿದೆ.

ಮೂಲಗಳ ಪ್ರಕಾರ ರಜಿನಿಕಾಂತ್‌ – ಲೋಕೇಶ್‌ ಅವರ ʼತಲೈವರ್ 171ʼ ಸಿನಿಮಾದಲ್ಲಿ ಶಿವಕಾರ್ತಿಕೇಯನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕಾಲಿವುಡ್‌ ನಲ್ಲಿ ವೈರಲ್‌ ಆಗಿದ್ದು, ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಸದ್ಯ ಬಹು ನಿರೀಕ್ಷಿತ  ʼಅಯಾಲನ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಮುಂದಿನ ವರ್ಷದ ಆರಂಭದಲ್ಲಿ ತೆರೆ ಕಾಣಲಿದೆ. ಇತ್ತ ರಜಿನಿಕಾಂತ್‌ ಟಿಜೆ ಜ್ಞಾನವೇಲ್‌ ಅವರ ʼತಲೈವರ್ 170ʼ ದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.