ʼToxic’ ನಲ್ಲಿ ಯಶ್ ಜೊತೆ ಕರೀನಾ ನಟನೆ?: ಕುತೂಹಲ ಹೆಚ್ಚಿಸಿದ ʼಬೇಬೋʼ ತಂಡದ ಹೇಳಿಕೆ
Team Udayavani, Jan 11, 2024, 5:20 PM IST
ಮುಂಬಯಿ: ರಾಕಿಂಗ್ ಸ್ಟಾರ್ ಯಶ್ ʼಟಾಕ್ಸಿಕ್ʼ ಸಿನಿಮಾ ಅನೌನ್ಸ್ ಆದ ಬಳಿಕ ದೊಡ್ಡಮಟ್ಟದಲ್ಲಿ ಈಗಿನಿಂದಲೇ ಸದ್ದು ಮಾಡುತ್ತಿದೆ. ಸಿನಿಮಾದ ಬಗೆಗಿನ ಮುಂದಿನ ಅಪ್ಡೇಟ್ ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
ಪ್ಯಾನ್ ಇಂಡಿಯಾದೆಲ್ಲೆಡೆ ಯಶ್ ಅವರ ʼಟಾಕ್ಸಿಕ್ʼ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿದೆ. ʼಕೆಜಿಎಫ್ʼ ಸರಣಿ ಬಳಿಕ ಯಶ್ ಬೇಡಿಕೆ ಹೆಚ್ಚಿದೆ. ಇತ್ತೀಚೆಗೆ ಖ್ಯಾತ ಬಾಲಿವುಡ್ ನಟಿ ಕರೀನಾ ಕಪೂರ್ ಯಶ್ ಅವರ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಮಾತುಗಳು ಸಿನಿವಲಯದಲ್ಲಿ ಹರಿದಾಡಿದೆ.
ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಇದೀಗ ಈ ವೈರಲ್ ಸುದ್ದಿಗೆ ಕರೀನಾ ಕಪೂರ್ ಅವರ ತಂಡ ಪ್ರತಿಕ್ರಿಯೆ ನೀಡಿದೆ.
“ಕರೀನಾ ಕಪೂರ್ ಖಾನ್ ಅವರ ಮುಂದಿನ ಚಿತ್ರದ ಬಗ್ಗೆ ಅನೇಕ ಊಹಾಪೋಹಗಳು ಸುತ್ತುತ್ತಿವೆ. ನಾವು ಉತ್ಸಾಹ ಮತ್ತು ನಿರೀಕ್ಷೆಯನ್ನು ಅರ್ಥಮಾಡಿಕೊಂಡಿದ್ದೇವೆ. ಕರೀನಾ ಕಪೂರ್ ಅವರ ಮುಂದಿನ ಪ್ರಾಜೆಕ್ಟ್ ಮತ್ತು ಅದರ ತಾರಾಬಳಗದ ಮಾಹಿತಿ ಬಗ್ಗೆ ಕೆಲ ಸಮಯ ದೂರವಿರಿ ಎಂದು ನಾವು ಮಾಧ್ಯಮಗಳಿಗೆ ವಿನಂತಿಸುತ್ತೇವೆ. ಬಹಳ ರೋಚಕವಾದ ಸಂಗತಿಯು ಶೀಘ್ರದಲ್ಲೇ ಬರಲಿದೆ ಮತ್ತು ಅಧಿಕೃತ ಪ್ರಕಟಣೆಗಾಗಿ ಕಾಯಲು ನಾವು ಎಲ್ಲರಿಗೂ ವಿನಂತಿಸುತ್ತೇವೆ.”ಎಂದು ತಂಡ ಹೇಳಿದೆ.
ನಾಯಕಿ ಯಾರಗುತ್ತಾರೆ ಎನ್ನುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಹಿಂದೆ ʼಟಾಕ್ಸಿಕ್ʼ ಸಿನಿಮಾದಲ್ಲಿ ಸಾಯಿಪಲ್ಲವಿ, ಮೃಣಾಲ್ ಠಾಕೂರು ಸೇರಿದಂತೆ ಇತರೆ ಕೆಲ ನಟಿಯರ ಹೆಸರು ನಾಯಕಿಯರ ರೇಸ್ ನಲ್ಲಿ ಕೇಳಿ ಬಂದಿದೆ.
ಗೋವಾ ಡ್ರಗ್ಸ್ ಮಾಫಿಯಾದ ಕಥೆಯನ್ನು ʼಟಾಕ್ಸಿಕ್ʼ ಒಳಗೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲಿ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.