Dharmendra: ಹಿರಿಯ ನಟ ಧರ್ಮೇಂದ್ರರಿಗೆ ಅನಾರೋಗ್ಯ; ಚಿಕಿತ್ಸೆ ಪಡೆಯಲು ಅಮೆರಿಕಾ ಪಯಣ
Team Udayavani, Sep 12, 2023, 9:54 AM IST
ಮುಂಬಯಿ: ಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಚಿಕಿತ್ಸೆಗಾಗಿ ಯುಎಸ್ ಗೆ ಕರೆದುಕೊಂಡು ಹೋಗಲಾಗಿದೆ ಎಂದು ವರದಿಯಾಗಿದೆ.
87 ವರ್ಷದ ಧರ್ಮೇಂದ್ರ ಅವರು ವಯೋಸಹಜ ಕಾಯಿಲೆಯಿಂದ ಬಳಲಯತ್ತಿದ್ದು, ಅವರ ಆರೋಗ್ಯದಲ್ಲಿ ಸಮಸ್ಯ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಚಿಕಿತ್ಸೆ ನೀಡಲು ಅಮೆರಿಕಾಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ವರದಿ ತಿಳಿಸಿದೆ.
ಅವರ ಮಗ ಸನ್ನಿ ಡಿಯೋಲ್ ಅವರು ʼಗದರ್-2ʼ ಸಿನಿಮಾ ಪ್ರಚಾರದಲ್ಲಿ ನಿರತರಾಗಿದ್ದು, ತಂದೆಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಿಂದ ಬ್ರೇಕ್ ಪಡೆದುಕೊಂಡು ತಂದೆಯನ್ನು ಸ್ವತಃ ಸನ್ನಿ ಡಿಯೋಲ್ ಅವರೇ ಯುಎಸ್ ಗೆ ಕರೆದುಕೊಂಡು ಹೋಗಿದ್ದಾರೆ. ಅಮರಿಕಾದಲ್ಲಿ ವಿಶೇಷ ಚಿಕಿತ್ಸೆ ನೀಡಲಿದ್ದಾರೆ ಎನ್ನಲಾಗಿದೆ.
“ಧರಮ್ ಸರ್ ಅವರಿಗೆ ಆರೋಗ್ಯ ಸಮಸ್ಯೆಗಳಿವೆ. ಆದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ, ಸನ್ನಿ ತನ್ನ ತಂದೆಯನ್ನು ಯುಎಸ್ಎಗೆ ಕರೆದುಕೊಂಡು ಹೋಗಿದ್ದಾರೆ. ಅವರು ಅಮೆರಿಕಾದಲ್ಲಿ 15-20 ದಿನಗಳವರೆಗೆ ಅಥವಾ ಚಿಕಿತ್ಸೆಯು ಹೋಗುವವರೆಗೆ ಇರುತ್ತಾರೆ. ಚಿಂತಿಸುವ ಅಗತ್ಯವಿಲ್ಲ” ಎಂದು ಮೂಲಗಳು ಹೇಳಿರುವುದಾಗಿ ʼಇಂಡಿಯಾ ಟುಡೇʼ ವರದಿ ತಿಳಿಸಿದೆ.
ಇತ್ತೀಚೆಗೆ ಧರ್ಮೇಂದ್ರ ಅವರು ʼ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಮುಂದೆ ಅವರು ಕೆಲ ಸಿನಿಮಾದಲ್ಲಿ ಕಾಣಿಸಿಕೊಳ್ಳುವವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.