ಡ್ರಗ್ಸ್ ಖರೀದಿ, ಮಾರಾಟ ಜಾಲದಲ್ಲಿ ರಿಯಾ ಶಾಮೀಲು ಸಾಬೀತು; ಭಾನುವಾರ ರಿಯಾ ಬಂಧನ?

ರಿಯಾ ಚಕ್ರವರ್ತಿ ವಿಚಾರಣೆ ನಡೆಸಲು ಭಾನುವಾರ ಹಾಜರಾಗುವಂತೆ ಎನ್ ಸಿಬಿ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ

Team Udayavani, Sep 5, 2020, 2:47 PM IST

ಡ್ರಗ್ಸ್ ಖರೀದಿ, ಮಾರಾಟ ಜಾಲದಲ್ಲಿ ರಿಯಾ ಶಾಮೀಲು ಸಾಬೀತು; ಭಾನುವಾರ ರಿಯಾ ಬಂಧನ?

ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಡ್ರಗ್ಸ್ ಮಾಫಿಯಾ ಪ್ರಮುಖ ಕಾರಣ ಎಂಬ ವಿಚಾರ ಮುನ್ನೆಲೆಗೆ ಬಂದ ನಂತರ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ ಅಧಿಕಾರಿಗಳು ಹಲವಾರು ಮಾಹಿತಿಯನ್ನು ಬಯಲಿಗೆಳೆದಿದ್ದಾರೆ. ಅಲ್ಲದೇ ರಿಯಾ ಕೂಡಾ ಡ್ರಗ್ಸ್ ಜಾಲದಲ್ಲಿ ಶಾಮೀಲಾಗಿರುವುದಾಗಿ ತಿಳಿಸಿದ್ದಾರೆ.

ರಿಯಾ ಚಕ್ರವರ್ತಿಯ ವಾಟ್ಸಪ್ ಚಾಟ್ಸ್ ವಿಶ್ಲೇಷಣೆ ನಡೆಸಿದ ಎನ್ ಸಿಬಿ ತನಿಖೆ ನಡೆಸಿದ ಸಂದರ್ಭದಲ್ಲಿ ನಟಿ ಮಾದಕ ವಸ್ತುಗಳನ್ನು ಖರೀದಿಸಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ಶುಕ್ರವಾರ ಎನ್ ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿ ಮನೆ ಮೇಲೆ ದಾಳಿ ನಡೆಸಿದ್ದರು.

ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಹಾಗೂ ಸುಶಾಂತ್ ರಜಪೂತ್ ಮನೆಯ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾನನ್ನು ಸುಮಾರು 9ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ನಂತರ ಶುಕ್ರವಾರ ರಾತ್ರಿ ಮಿರಾಂಡಾನನ್ನು ಅಧಿಕಾರಿಗಳು ಬಂಧಿಸಿದ್ದರು.

ಎನ್ ಸಿಬಿಯ ಕ್ರೈಂ ವರದಿ ಪ್ರಕಾರ, ರಿಯಾ ಚಕ್ರವರ್ತಿಯ ವಾಟ್ಸಪ್ ಚಾಟ್ ನ ವಿಶ್ಲೇಷಣೆ ನಡೆಸಿದಾಗ ರಿಯಾ ಹಾಗೂ ಆಕೆಯ ಆಪ್ತರು ಡ್ರಗ್ಸ್ ಜಾಲದ ಸಂಚನ್ನು ಹೊಂದಿರುವುದು ಪತ್ತೆಯಾಗಿದೆ, ಇವರು ಡ್ರಗ್ಸ್ ಮಾರಾಟ, ಖರೀದಿ, ಸೇವನೆ ಹಾಗೂ ಸಾಗಾಟ ನಡೆಸುತ್ತಿದ್ದರು ಎಂಬುದು ತಿಳಿದು ಬಂದಿದೆ. ಮೇಲ್ನೋಟಕ್ಕೆ ನಾವು ಎನ್ ಡಿಪಿಎಸ್ ಕಾಯ್ದೆಯಡಿ ದಾಖಲಿಸುವ ಪ್ರಕರಣವಾಗಿದೆ ಎಂದು ತಿಳಿಸಿದೆ.

ಮೂಲಗಳ ಪ್ರಕಾರ, ರಿಯಾ ಚಕ್ರವರ್ತಿ ವಿಚಾರಣೆ ನಡೆಸಲು ಭಾನುವಾರ ಹಾಜರಾಗುವಂತೆ ಎನ್ ಸಿಬಿ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ವಿಚಾರಣೆ ನಂತರ ಆಕೆಯ ಬಂಧನ ಸಾಧ್ಯತೆ ದಟ್ಟವಾಗಿದೆ ಎಂದು ಊಹಾಪೋಹ ಹರಿದಾಡುತ್ತಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡನನ್ನು ಬಂಧಿಸಿ ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಹಾಗೂ ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡನನ್ನು ಮುಂಬೈ ಕೋರ್ಟ್ ಸೆಪ್ಟೆಂಬರ್ 9ರವರೆಗೆ ಮಾದಕ ವಸ್ತು ನಿಯಂತ್ರಣ ಬ್ಯುರೋ (ಎನ್ ಸಿಬಿ) ಅಧಿಕಾರಿಗಳ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.ಈವರೆಗೂ ಇಬ್ಬರನ್ನೂ ಮಾದಕ ವಸ್ತು ಸೇವನೆ ಪರೀಕ್ಷೆಗೆ ಒಳಪಡಿಸಿಲ್ಲ ಎಂದು ವರದಿ ತಿಳಿಸಿದೆ.

ರಿಯಾ ಚಕ್ರವರ್ತಿ ಅಪೇಕ್ಷೆಯಂತೆ ಡ್ರಗ್ಸ್ ಖರೀದಿಸಿ ಉಪಯೋಗಿಸುತ್ತಿರುವುದಾಗಿ ಶೋವಿಕ್ ಚಕ್ರವರ್ತಿ ಶುಕ್ರವಾರ ಎನ್ ಸಿಬಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ. ಈತ ಸುಶಾಂತ್ ಸಿಂಗ್ ರಜಪೂತ್ ಗೆ ಮಾತ್ರ ಡ್ರಗ್ಸ್ ವಿತರಿಸಿಲ್ಲ, ಬಾಲಿವುಡ್ ಸ್ಟಾರ್ ಗಳಿಗೂ ವಿತರಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.