ರಿಯಾ ಚಕ್ರವರ್ತಿ ನನ್ನ ಮಗನಿಗೆ ವಿಷಪ್ರಾಶನ ಮಾಡಿದ್ದಾಳೆ: ಸುಶಾಂತ್ ತಂದೆ ಕೆ.ಕೆ ಸಿಂಗ್ ಆರೋಪ
Team Udayavani, Aug 27, 2020, 1:08 PM IST
ಮುಂಬೈ: ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು, ಇದೀಗ ತನ್ನ ಮಗನಿಗೆ ರಿಯಾ ಚಕ್ರವರ್ತಿ ವಿಷಪ್ರಾಶನ ಮಾಡಿದ್ದಾಳೆ, ಈ ಕೂಡಲೇ ಆಕೆಯನ್ನು ಬಂಧಿಸಿ ಎಂದು ಸುಶಾಂತ್ ತಂದೆ ಕೆ.ಕೆ ಸಿಂಗ್ ವಿಡಿಯೋವೊಂದರ ಮೂಲಕ ಮನವಿ ಮಾಡಿದ್ದಾರೆ.
ರಿಯಾ ಚಕ್ರವರ್ತಿ ನನ್ನ ಮಗನಾದ ಸುಶಾಂತ್ ಸಿಂಗ್ ರಜಪೂತ್ ಗೆ ನಿರಂತರವಾಗಿ ವಿಷಪ್ರಾಶನ ಮಾಡುತ್ತಿದ್ದಳು. ಆಕೆಯೇ ಹತ್ಯೆ ಮಾಡಿದ್ದಾಳೆ ಎಂಬುದು ಇದೀಗ ಸುಳಿವು ಸಿಕ್ಕಿದೆ. ಈ ಕೂಡಲೇ ತನಿಖಾ ತಂಡ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹಚರರನ್ನು ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ.
ಸುಶಾಂತ್ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಕೂಡ ಇದೇ ಆರೋಪವನ್ನು ಮಾಡಿದ್ದು ಸರಣಿ ಟ್ವೀಟ್ ಮಾಡಿದ್ದಾರೆ. ರಿಯಾಚಕ್ರವರ್ತಿ ಪ್ರಚಾರ ತಂತ್ರ ಅನುಸರಿಸುತ್ತಿದ್ದು ಈ ಕೂಡಲೇ ಆಕೆಯನ್ನು ಬಂಧಿಸಬೇಕು. ಭಾರತ ಸರ್ಕಾರ ಕೂಡ ಸುಶಾಂತ್ ಹಂತಕರು ಯಾವುದೇ ರೀತಿಯಲ್ಲೂ ಸಂದರ್ಶನದಲ್ಲಿ ಭಾಗಿಯಾಗದಂತೆ ಮತ್ತು ಪ್ರಚಾರ ತಂತ್ರ ಅನುಸರಿಸದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸುಶಾಂತ್ ತಂದೆ ಕೆ.ಕೆ ಸಿಂಗ್ ಪಾಟ್ನಾ ಠಾಣೆಯಲ್ಲಿ ಈಗಾಗಲೇ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ. ನಟನ ಹಣವನ್ನು ಕಸಿದುಕೊಂಡಿರುವುದು, ಮಾದಕ ದ್ರವ್ಯ ಸೇವಿಸಿರುವುದು ಮತ್ತು ಆತನನ್ನು ಕುಟುಂಬದಿಂದ ದೂರ ಮಾಡಿರುವ ಆರೋಪವನ್ನು ಹೊರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.