ಹಸಿದವರ ಸಹಾಯಕ್ಕೆ ತಮನ್ನಾ
Team Udayavani, Apr 23, 2020, 11:07 AM IST
ಕೋವಿಡ್ 19 ಲಾಕ್ ಡೌನ್ ನಿಂದಾಗಿ ಜನರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ. ಇನ್ನು ದಿನನಿತ್ಯದ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು ಬಡವರು, ಕೂಲಿ ಕಾರ್ಮಿಕರ ಕೈಗೆಟುಕುವುದು ಕಷ್ಟವಾಗುತ್ತಿದೆ. ಇದೇ ವೇಳೆ ಚಿತ್ರರಂಗದ ಅನೇಕ ತಾರೆಯರು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದು, ಇದೀಗ ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ ಕೂಡ ಅಂಥದ್ದೇ ಸಹಾಯಕ್ಕೆ ಮುಂದಾಗಿದ್ದಾರೆ.
ಕೋವಿಡ್ 19 ಲಾಕ್ ಡೌನ್ ನಿಂದಾಗಿ ಆಹಾರ ಸಿಗದೆ ಸಂಕಷ್ಟಕ್ಕೆ ಒಳಗಾಗಿರುವ ಮುಂಬೈ ಸ್ಲಂ ನಿವಾಸಿಗಳು ಮತ್ತು ವೃದ್ದಾಶ್ರಮಗಳಿಗೆ ಬರೋಬ್ಬರಿ ಐವತ್ತು ಟನ್ ನಷ್ಟು ಆಹಾರ ಸಾಮಗ್ರಿಗಳನ್ನು ಒದಗಿಸಲು ಮುಂದಾಗಿದ್ದಾರೆ. ಯಾರೂ ಹಸಿವಿನಿಂದ ಮಲಗಬಾರದು ಅದಕ್ಕಾಗಿ ಈ ಮೂಲಕ ತನ್ನ ಕೈಲಾದ ಸಹಾಯಕ್ಕೆ ಮುಂದಾಗಿರುವುದಾಗಿ ತಮನ್ನಾ ತಿಳಿಸಿದ್ದಾರೆ. ಇನ್ನು ತಮನ್ನಾ ಅವರ ಇಂಥದ್ದೊಂದು ಮಹಾತ್ಕಾರ್ಯಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈಗಾಗಲೇ ಚಿತ್ರರಂಗದ ಬಹುತೇಕ ಮಂದಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಚಿತ್ರೋದ್ಯಮದ ಕಾರ್ಮಿಕರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇನ್ನು ಅನೇಕ ಮಂದಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಆದರೆ ತಮನ್ನಾ ನೇರವಾಗಿ ಹಸಿದವರ ಹೊಟ್ಟೆತುಂಬಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕೊರೊನಾ ಲಾಕೌxನ್ನಿಂದಾಗಿ ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ತಮನ್ನಾ ಮುಂದಾಗಿದ್ದಾರೆ.
ತಮನ್ನಾ ಬಹುಭಾಷೆಯಲ್ಲಿ ಬೇಡಿಕೆಯ ನಟಿಯಾಗಿದ್ದು, ತಮ್ಮ ನಟನೆ ಹಾಗೂ ಬೋಲ್ಡ್ ಲುಕ್‌ನಿಂದ ಗಮನಸೆಳೆದಿದ್ದಾರೆ. ಕನ್ನಡದ ಜಾಗ್ವಾರ್ ಹಾಗೂ ಕೆಜಿಎಫ್ ಚಿತ್ರಗಳ ಸ್ಪೆಷಲ್ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ತಮನ್ನಾ ವಿಷಯವಾದರೆ ಕನ್ನಡದ ಅನೇಕ ನಟಿಯರು ಕೂಡಾ ತಮ್ಮ ಕೈಲಾದ ಸೇವೆ ಮಾಡುತ್ತಿದ್ದಾರೆ. ಜೊತೆಗೆ ತಮ್ಮ ಅಭಿಮಾನಿ ಸಂಘಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.