ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ
ನೂರಾರು ಸಿನಿಮಾಗಳಲ್ಲಿ ನಟಿಸಿರುವ ವಿವೇಕ್ ದೇಶದ ಪ್ರತಿಷ್ಠಿತ ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
Team Udayavani, Apr 16, 2021, 3:29 PM IST
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ವಿವೇಕ್ ಶುಕ್ರವಾರ (ಏಪ್ರಿಲ್ 16) ಹೃದಯಾಘಾತಕ್ಕೊಳಗಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ. ನಟ ವಿವೇಕ್ ಅವರು ಗುರುವಾರ(ಏ.15)ಒಮಾನ್ದುರಾರ್ ಸರ್ಕಾರಿ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದರು.
ಇದನ್ನೂ ಓದಿ:ಭಾನುವಾರ ಉತ್ತರ ಪ್ರದೇಶ ಲಾಕ್ ಡೌನ್ : ಮಾಸ್ಕ್ ಹಾಕದಿದ್ದರೆ 10,000 ದಂಡ!
ವರದಿಯ ಪ್ರಕಾರ, ವಿವೇಕ್ ಅವರು ಇಂದು ಬೆಳಗ್ಗೆ ಎದೆ ನೋವು ಎಂದು ತಿಳಿಸಿದ್ದು, ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೊಳಪಡಿಸಿದ ಸಂದರ್ಭದಲ್ಲಿ ವಿವೇಕ್ ಅವರಿಗೆ ಹೃದಯಾಘಾತವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ವಿವೇಕ್ ಅವರ ಆರೋಗ್ಯ ಗಂಭೀರವಾಗಿದ್ದು, ವೈದ್ಯರ ತಂಡ ಆರೋಗ್ಯ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಆ್ಯಂಜಿಯೋಗ್ರಾಮ್ ಮಾಡಲು ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.
59 ವರ್ಷದ ನಟ ವಿವೇಕ್ ಅವರು ಏಪ್ರಿಲ್ 15ರಂದು ಮೊದಲ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ಯಾರೆಲ್ಲಾ ಲಸಿಕೆ ಪಡೆಯಲು ಅರ್ಹರೋ ಅವರೆಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದರು.
ವಿವೇಕ್ 1989ರಲ್ಲಿ ಕೆ.ಎಸ್.ರವಿಕುಮಾರ್ ಅವರ “ಪುದು, ಪುದು ಅರ್ಥಂಗಳ್” ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿ ತೆರೆಗೆ ಪ್ರವೇಶಿಸಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸಿರುವ ವಿವೇಕ್ ದೇಶದ ಪ್ರತಿಷ್ಠಿತ ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.