Thalaivar 171: ರಜಿನಿಕಾಂತ್ ಸಿನಿಮಾಕ್ಕೆ ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್
ಸನ್ ಪಿಕ್ಚರ್ಸ್ ಟ್ವೀಟ್ ವೈರಲ್
Team Udayavani, Sep 11, 2023, 12:39 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರ ʼಜೈಲರ್ʼ ಸೂಪರ್ ಹಿಟ್ ಆಗಿದೆ. ಈ ನಡುವೆಯೇ ಅವರ ಮುಂದಿನ ಸಿನಿಮಾಗಳ ಬಗ್ಗೆ ಮಾತುಕತೆ ಆರಂಭವಾಗಿದ್ದು, ಈ ಕುರಿತ ಚರ್ಚೆಗಳು ನಡೆಯುತ್ತಿರುವಾಗಲೇ ರಜಿನಿಕಾಂತ್ ಅವರ ʼತಲೈವರ್171’ ಸಿನಿಮಾದ ಬಗ್ಗೆ ಬಿಗ್ ಅಪ್ಡೇಟ್ ವೊಂದು ಹೊರಬಿದ್ದಿದೆ.
ಕಳೆದ ಕೆಲ ದಿನಗಳಿಂದ ಕಾಲಿವುಡ್ ಸಿನಿಮಾರಂಗದಲ್ಲಿ ‘ತಲೈವರ್ 170’ ಕುರಿತು ಚರ್ಚೆಗಳು ನಡೆಯುತ್ತಿದೆ. ಟಿಜೆ ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್ ಗಳು ಇರಲಿದ್ದಾರೆ ಎನ್ನುವುದು ಟ್ರೆಂಡ್ ಆಗಿತ್ತು. ಬಾಲಿವುಡ್ ನಿಂದ ಅಮಿತಾಭ್ ಬಚ್ಚನ್ ಮಲಯಾಳಂ ಸಿನಿಮಾರಂಗದಿಂದ ಫಾಹದ್ ಫಾಸಿಲ್ ಅವರು ಕಾಣಿಸೊಕೊಳ್ಳಲಿದ್ದು, ಟಾಲಿವುಡ್ ರಂಗದಿಂದ ರಾಣಾ ದಗ್ಗುಬಾಟಿ ಹಾಗೂ ಮಾಲಿವುಡ್ ನಟಿ ಮಂಜು ವಾರಿಯರ್ ಕೂಡ ಸಿನಿಮಾದ ಭಾಗವಾಗಲಿದ್ದಾರೆ ಎಂದು ಇತ್ತೀಚೆಗೆ ಸುದ್ದಿಯಾಗಿತ್ತು.
ಈ ಸಿನಿಮಾದ ಬಗ್ಗೆ ಚರ್ಚೆ ಇರುವಾಗಲೇ ಇದೀಗ ರಜಿನಿಕಾಂತ್ ಅವರ ʼತಲೈವರ್171’ ಸಿನಿಮಾದ ಕುರಿತು ಬಿಗ್ ಅಪ್ಡೇಟ್ ವೊಂದು ಹೊರಬಿದ್ದಿದೆ.
ರಜಿನಿಕಾಂತ್ ಅವರೊಂದಿಗೆ ಲೋಕೇಶ್ ಕನಕರಾಜ್ ಸಿನಿಮಾ ಮಾಡಲಿದ್ದಾರೆ ಎನ್ನುವ ಬಗ್ಗೆ ಕಾಲಿವುಡ್ ನಲ್ಲಿ ಕಳೆದ ಕೆಲ ದಿನಗಳಿಂದ ಟಾಕ್ ಆಫ್ ದಿ ಟೌನ್ ಆಗಿ ಸುದ್ದಿ ಹರಿದಾಡಿತ್ತು. ಇದೀಗ ಸನ್ ಪಿಕ್ಚರ್ಸ್ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ.
ಸೂಪರ್‌ಸ್ಟಾರ್ ಅವರ ʼತಲೈವರ್171’ ಸಿನಿಮಾವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ನಿರ್ದೇಶನ ಮಾಡಲಿದ್ದಾರೆ. ಅನಿರುದ್ಧ್ ಅವರ ಮ್ಯೂಸಿಕ್ ಇರಲಿದೆ. ಅನ್ಬುಅರಿವು ಅವರ ಸಾಹಸ ನಿರ್ದೇಶನ ಇರಲಿದೆ ಎಂದು ಸನ್ ಪಿಕ್ಚರ್ಸ್ ಟ್ವೀಟ್ ಮಾಡಿದೆ.
ಸಿನಿಮಾದ ಇತರ ಮಾಹಿತಿ ಮುಂದಿನ ದಿನಗಳಲ್ಲಿ ಹೊರಬೀಳಲಿದ್ದು, ಸದ್ಯ ಲೋಕೇಶ್ ಅವರು ʼಲಿಯೋʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆ ಬಳಿಕ ʼಕೈತಿ-2ʼ, ʼವಿಕ್ರಮ್-2ʼ ಮಾಡುವ ಯೋಜನೆಯಲ್ಲಿದ್ದಾರೆ.
ʼಜೈಲರ್ʼ ಬಳಿಕ ಸನ್ ಪಿಕ್ಚರ್ಸ್ ಮತ್ತೆ ರಜಿನಿಕಾಂತ್ ಸಿನಿಮಾವನ್ನು ನಿರ್ಮಾಣ ಮಾಡಲಿದೆ.
ʼತಲೈವರ್ 171ʼ ಲೋಕೇಶ್ ಸಿನೆಮ್ಯಾಟಿಕ್ ಯೂನಿವರ್ಸ್‌ನ ಭಾಗವಾಗಿದೆ ಎಂದು ಹೇಳಲಾಗುತ್ತದೆ, ಇದು ತಮಿಳು ಚಿತ್ರರಂಗದ ಎಲ್ಲಾ ಸೂಪರ್‌ಸ್ಟಾರ್‌ಗಳನ್ನು ಒಟ್ಟುಗೂಡಿಸುತ್ತದೆ ಎನ್ನಲಾಗುತ್ತಿದೆ.
We are happy to announce Superstar @rajinikanth’s #Thalaivar171
Written & Directed by @Dir_Lokesh
An @anirudhofficial musical
Action by @anbariv pic.twitter.com/fNGCUZq1xi
— Sun Pictures (@sunpictures) September 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.