ಅಮಿತಾಭ್, ಧರ್ಮೇಂದ್ರ, ಅಂಬಾನಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ: ಪೊಲೀಸರಿಂದ ಪರಿಶೀಲನೆ
Team Udayavani, Mar 1, 2023, 3:31 PM IST
ಮುಂಬಯಿ: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ಧರ್ಮೆಂದ್ರ ಹಾಗೂ ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸಕ್ಕೆ ಬಾಂಬ್ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ನಾಗ್ಪುರ ಪೊಲೀಸರಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ.
ನಾಗ್ಪುರ ಪೊಲೀಸ್ ಕಂಟ್ರೋಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ ಬೆನ್ನಲೇ ನಾಗ್ಪುರ ಪೊಲೀಸರು ಈ ಬಗ್ಗೆ ಮುಂಬಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮುಂಬಯಿ ಪೊಲೀಸರು ಕರೆಯ ಜಾಡನ್ನು ಪತ್ತೆ ಹಚ್ಚುತ್ತಿದ್ದು, ಇದು ಹುಸಿ ಕರೆಯೇ ಎನ್ನುವುದನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಅಮಿತಾಭ್ ಬಚ್ಚನ್ ಅವರ ಮುಂಬಯಿಯಲ್ಲಿ 5 ದುಬಾರಿ ಮನೆಯನ್ನು ಹೊಂದಿದ್ದಾರೆ. ಜಲ್ಸಾ, ಜನಕ್, ವತ್ಸ, ಮತ್ತು ಪ್ರತೀಕ್ಷಾ ಎನ್ನುವ ಅವರ ಮನೆಯ ಹೆಸರುಗಳಿದ್ದು, ಇದರಲ್ಲಿ ʼಜಲ್ಸಾʼ ಮನೆಯಲ್ಲಿ ಅಮಿತಾಭ್ ಕುಟುಂಬ ವಾಸಿಸುತ್ತಿದೆ.
ಇದನ್ನೂ ಓದಿ: ಯುಪಿಯಲ್ಲಿ ಮತ್ತೆ ಬುಲ್ಡೋಜರ್ ದಾಳಿ; ಅತೀಕ್ ಅಹ್ಮದ್ ಸಂಬಂಧಿಯ ಬಂಗಲೆ ಧ್ವಂಸ
ನಟ ಧರ್ಮೇಂದ್ರ ಅವರು ಜುಹುನಲ್ಲಿರುವ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಇದರೊಂದಿಗೆ ಅಪರಿಚಿತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಮನೆಗೂ ಬಾಂಬ್ ಬೆದರಿಕೆಯನ್ನು ಹಾಕಿದ್ದಾನೆ ಎಂದು ವರದಿ ತಿಳಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮತ್ತು ಆಡಳಿತ ನಿರ್ದೇಶಕರಾಗಿರುವ ಮುಕೇಶ್ ಅಂಬಾನಿ ಹಾಗೂ ಕುಟುಂಬ ಸದಸ್ಯರಿಗೆ ಭಾರತ ಹಾಗೂ ವಿದೇಶಗಳಲ್ಲಿಯೂ ಉನ್ನತ ಝಡ್ ಪ್ಲಸ್ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.