Jani Chacko Uthup: ಹೃದಯಸ್ತಂಭನದಿಂದ ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ನಿಧನ
Team Udayavani, Jul 9, 2024, 9:08 AM IST
ಕೋಲ್ಕತ್ತಾ: ಖ್ಯಾತ ಗಾಯಕಿ, ಇಂಡಿಯನ್ ಪಾಪ್ ಐಕಾನ್ ಉಷಾ ಉತ್ತುಪ್(Usha Uthup) ಅವರ ಪತಿ ಹೃದಯಸ್ತಂಭನದಿಂದ (Cardiac arrest) ನಿಧನರಾಗಿದ್ದಾರೆ.
ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನ ಹೊಂದಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಹಠಾತ್ ಹೃದಯಸ್ತಂಭನದಿಂದ ಅವರು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.
ಉಷಾ ಅವರಿಗೆ ಜಾನಿ ಚಾಕೋ (Jani Chacko Uthup) ಎರಡನೇ ಪತಿ. 70 ದಶಕದಲ್ಲಿ ಉಷಾ ಮೊದಲ ಬಾರಿ ರೆಸ್ಟೋರೆಂಟ್ ವೊಂದರಲ್ಲಿ ಕಾರ್ಯಕ್ರಮದ ವೇಳೆ ಜಾನಿ ಅವರನ್ನು ಭೇಟಿ ಆಗಿದ್ದರು. ಉಷಾ ಈ ಹಿಂದೆ ರಾಮು ಅವರನ್ನು ಮದುವೆಯಾಗಿದ್ದರು.
ಉಷಾ – ಜಾನಿ ದಂಪತಿಗೆ ಸನ್ನಿ ಎಂಬ ಮಗ ಮತ್ತು ಅಂಜಲಿ ಎಂಬ ಮಗಳಿದ್ದಾರೆ.
ಮಂಗಳವಾರ (ಜು.9ರಂದು) ಜಾನಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂಗೀತ ಲೋಕದಲ್ಲಿನ ಅಪಾರ ಸಾಧನೆಗಾಗಿ ಉಷಾ ಉತ್ತುಪ್ ಅವರಿಗೆ ಈ ವರ್ಷದ ಆರಂಭದಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.