ಹಿರಿಯ ಬಾಲಿವುಡ್ ನಟ ಟಾಮ್ ಆಲ್ಟರ್‌ಗೆ ಕ್ಯಾನ್ಸರ್ ಚಿಕಿತ್ಸೆ
Team Udayavani, Sep 11, 2017, 3:12 PM IST
ಹೊಸದಿಲ್ಲಿ : ಅಮೆರಿಕ ಸಂಜಾತ ಹಿರಿಯ ಬಾಲಿವುಡ್ ನಟ ಟಾಮ್ ಆಲ್ಟರ್ ಕ್ಯಾನ್ಸರ್ ಪೀಡಿತರಾಗಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿಯಾಗಿದೆ. 67ರ ಹರೆಯದ ಟಾಮ್ ಆಲ್ಟರ್ ಅವರ ಕ್ಯಾನ್ಸರ್ ಈಗ ನಾಲ್ಕನೇ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಚಿತ್ರರಂಗದಲ್ಲಿ ಮನೆ ಮಾತಾಗಿರುವ ಟಾಮ್ ಆಲ್ಟರ್ ಗೆ ಭಾರತ ಸರಕಾರ 2008ರಲ್ಲಿ ಪದ್ಮ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಅವರು ಅನೇಕ ಸಿನೆಮಾಗಳಲ್ಲಿ ಮತ್ತು ಟಿವಿ ಸರಣಿಗಳಲ್ಲಿ ನಟಿಸಿದ್ದಾರೆ. ಅವರು ಕೊನೇ ಬಾರಿ ಬೆಳ್ಳಿ ಪರದೆಯಲ್ಲಿ ಕಾಣಿಸಿಕೊಂಡದ್ದು 2017ರಲ್ಲಿ ತೆರೆ ಕಂಡಿದ್ದ ಸರ್ ಗೋಶಿಯಾಂ ಚಿತ್ರದಲ್ಲಿ . ಇಮ್ರಾನ್ ಖಾನ್ ಈ ಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದ್ದರು.
ಟಾಮ್ ಆಲ್ಟರ್ ಅವರ ಪುತ್ರ ಜೆಮೀ ಆಲ್ಟರ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ತಂದೆಯ ಆರೋಗ್ಯದ ಬಗ್ಗೆ ಮಾತನಾಡಲು ಇದು ತಕ್ಕುದಾದ ಸಮಯವಲ್ಲ; ಸಂಜೆಯ ವೇಳೆ ನಿಮ್ಮನ್ನು ಸಂಪರ್ಕಿಸುತ್ತೇನೆ’ ಎಂದು ಹೇಳಿದರು. ಟಾಮ್ ಆಲ್ಟರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.