Leo: ‘ಲಿಯೋ’ ಟ್ರೈಲರ್ ಅಬ್ಬರ… ವಿಜಯ್ ಅಭಿಮಾನಿಗಳಿಂದ ಚಿತ್ರಮಂದಿರದ ಆಸನಗಳು ಧ್ವಂಸ

ಚೆನ್ನೈನ ರೋಹಿಣಿ ಸಿಲ್ವರ್‌ಸ್ಕ್ರೀನ್ ನಲ್ಲಿ ನಡೆದ ಘಟನೆ

Team Udayavani, Oct 6, 2023, 12:00 PM IST

Leo: ‘ಲಿಯೋ’ ಟ್ರೈಲರ್ ಅಬ್ಬರ… ವಿಜಯ್ ಅಭಿಮಾನಿಗಳಿಂದ  ಚಿತ್ರಮಂದಿರದ ಆಸನ ಪುಡಿ ಪುಡಿ

ಚೆನ್ನೈ: ದಳಪತಿ ವಿಜಯ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ‘ಲಿಯೋ’ ಚಿತ್ರದ ಟ್ರೈಲರ್ ಗುರುವಾರ ಸಂಜೆ ಬಿಡುಗಡೆಯಾಗಿದೆ. ಟ್ರೇಲರ್‌ಗೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ.

ತಮಿಳು ಟ್ರೈಲರ್ ಕೇವಲ 30 ನಿಮಿಷಗಳಲ್ಲಿ ಯೂಟ್ಯೂಬ್‌ನಲ್ಲಿ 30 ಲಕ್ಷ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ದಳಪತಿ ಅಭಿಮಾನಿಗಳಿಗಾಗಿಯೇ ಹಲವೆಡೆ ವಿಶೇಷ ಸ್ಕ್ರೀನ್ ಮೂಲಕ ಟ್ರೇಲರ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಇಂತಹದೊಂದು ವಿಶೇಷ ಶೋ ಚೆನ್ನೈನ ರೋಹಿಣಿ ಸಿಲ್ವರ್ ಸ್ಕ್ರೀನ್ ನಲ್ಲಿ ಏರ್ಪಡಿಸಲಾಗಿದ್ದು ಅದರಂತೆ ಗುರುವಾರ ಸಂಜೆ 6.30ಕ್ಕೆ ಬಿಡುಗಡೆಯಾದ ಎರಡು ನಿಮಿಷ 43 ಸೆಕೆಂಡ್ ನ ಟ್ರೇಲರ್‌ಗಾಗಿ ಚೆನ್ನೈನ ರೋಹಿಣಿ ಸಿಲ್ವರ್‌ಸ್ಕ್ರೀನ್ ಥಿಯೇಟರ್ ಅಂಗಳದ ಪಾರ್ಕಿಂಗ್ ಸ್ಥಳದಲ್ಲಿ ಟ್ರೈಲರ್ ಅನ್ನು ಪ್ರದರ್ಶಿಸುವುದು ಮೊದಲ ನಿರ್ಧಾರವಾಗಿತ್ತು. ಆದರೆ, ಪೊಲೀಸರ ಅನುಮತಿ ಪಡೆಯದ ಕಾರಣ ಥಿಯೇಟರ್‌ನೊಳಗೆ ಪ್ರದರ್ಶನ ನಡೆಸಲಾಯಿತು.

ಉಚಿತ ಪ್ರದರ್ಶನದಲ್ಲಿ ನೂರಾರು ಅಭಿಮಾನಿಗಳು ಭಾಗವಹಿಸಿದ್ದರು. ಥಿಯೇಟರ್ ನ ಹೊರಗೆ ಬಹಳ ಹೊತ್ತು ಕಾದು ನಿಂತಿದ್ದ ಅಭಿಮಾನಿಗಳು ಗೇಟ್ ತೆರೆದಾಗ ಒಮ್ಮೆಲೇ ಒಳಗೆ ನುಗ್ಗಿ ಟ್ರೇಲರ್ ವೀಕ್ಷಣೆಯನ್ನೂ ಮಾಡಿದ್ದಾರೆ ಆದರೆ, ಪ್ರದರ್ಶನ ಮುಗಿದಾಗ ಬಳಿಕ ಥಿಯೇಟರ್ ಅಧಿಕಾರಿಗಳು ಮಾತ್ರ ಬೆಚ್ಚಿಬಿದ್ದಿದ್ದರು. ಕಾರಣ ಟ್ರೇಲರ್‌ನ ಸಂಭ್ರಮದಲ್ಲಿ ಅಭಿಮಾನಿಗಳು ಥಿಯೇಟರ್ ನ ಸೀಟ್‌ಗಳ ಮೇಲೆ ಏರಿ ಕುಣಿಯುವ ಭರದಲ್ಲಿ ಆಸನಗಳು ಮುರಿದು ಹೋಗಿದ್ದು ಆಸನದ ಕೆಲವು ಭಾಗಗಳು ಚದುರಿ ಹೋಗಿವೆ ಎಂದು ಥಿಯೇಟರ್ ಅಧಿಕಾರಿಗಳು ಹೇಳಿದ್ದಾರೆ ಅಲ್ಲದೆ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಲೋಕೇಶ್ ಕನಕರಾಜ್ ಹಾಗೂ ದಳಪತಿ ವಿಜಯ್ ಅವರ ‘ಲಿಯೋ’ ಚಿತ್ರ ಅಕ್ಟೋಬರ್ 19 ರಂದು ಥಿಯೇಟರ್‌ಗೆ ಬರಲಿದ್ದು. ಬರೋಬ್ಬರಿ 14 ವರ್ಷಗಳ ಬಳಿಕ ತ್ರಿಶಾ ವಿಜಯ್ ಜೊತೆ ನಟಿಸುತ್ತಿರುವ ಚಿತ್ರವಾಗಿದೆ. ಸಂಜಯ್ ದತ್, ಅರ್ಜುನ್ ಸರ್ಜಾ, ಗೌತಮ್ ಮೆನನ್, ಮಿಶ್ಕಿನ್, ಮನ್ಸೂರ್ ಅಲಿ ಖಾನ್ ಸೇರಿದಂತೆ ಇತರ ತಾರಾ ಬಳಗವೇ ಚಿತ್ರದಲ್ಲಿದೆ.

ಇದನ್ನೂ ಓದಿ: ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ

 

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.