ರಾಬರ್ಟ್ ಚಿತ್ರದಲ್ಲಿ ವಿನೋದ್ ನಟನೆ ?
Team Udayavani, May 28, 2019, 11:28 AM IST
ದರ್ಶನ್ ಅಭಿನಯದ “ರಾಬರ್ಟ್’ ಚಿತ್ರದ ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ. ಮೊದಲ ಪೋಸ್ಟರ್ ಮತ್ತು ಶೀರ್ಷಿಕೆಯಲ್ಲೇ ಕುತೂಹಲ ಕೆರಳಿಸಿದ್ದ ಈ ಚಿತ್ರ ದಿನ ಕಳೆದಂತೆ ಹೊಸ ಸುದ್ದಿಗೆ ಕಾರಣವಾಗುತ್ತಿದೆ.
ಮೊದಲಿಗೆ ಚಿತ್ರದ ಸೆಟ್‌ನಲ್ಲಿ ಯಾರೊಬ್ಬರಿಗೂ ಮೊಬೈಲ್ ಬಳಸಲು ಅವಕಾಶವಿಲ್ಲವಂತೆ. ಯಾರೂ ಸಹ ಸೆಟ್‌ನಲ್ಲಿ ಮೊಬೈಲ್ ಹಿಡಿದುಕೊಳ್ಳುವಂತಿಲ್ಲವಂತೆ ಎಂಬ ಮಾತುಗಳು ಗಾಂಧಿನಗರದಲ್ಲಿ ತುಸು ಜೋರಾಗಿಯೇ ಕೇಳಿಬರುತ್ತಿವೆ. ಅದಕ್ಕೆ ಕಾರಣ, ಚಿತ್ರದಲ್ಲಿ ಏನೆಲ್ಲಾ ನಡೆಯುತ್ತಿದೆ, ಯಾರೆಲ್ಲಾ ಇದ್ದಾರೆ ಇತ್ಯಾದಿ ವಿಷಯಗಳು ಸೋರಿಕೆಯಾಗುತ್ತವೆ ಎಂಬುದು.
ಆದರೆ, ಎಷ್ಟೇ, ಬಿಗಿಯಾದ ನಿರ್ಬಂಧವಿದ್ದರೂ, ಏನೇ, ಸುದ್ದಿ ಸೋರಿಕೆಯಾಗದಂತೆ ತಡೆದರೂ ಸೆಟ್‌ನಲ್ಲಿ ಏನೆಲ್ಲಾ ನಡೆಯುತ್ತಿದೆ, ಯಾರೆಲ್ಲಾ ಇದ್ದಾರೆ ಎಂಬ ವಿಷಯಗಳ ಹರಿದಾಟಕ್ಕೆ ಬ್ರೇಕ್ ಹಾಕುವುದು ಕಷ್ಟ. ಸಿನಿಮಾ ರಂಗದಲ್ಲಿ ಎಲ್ಲವನ್ನೂ ಗೌಪ್ಯವಾಗಿಟ್ಟುಕೊಂಡು ಕೆಲಸ ಮಾಡುವುದು ಅಸಾಧ್ಯ. “ರಾಬರ್ಟ್’ ಚಿತ್ರದಲ್ಲೂ ಗೌಪ್ಯತೆ ಕಾಪಾಡಬೇಕೆಂಬ ನಿಯಮವಿದ್ದರೂ, ಹೀಗೊಂದು ಸುದ್ದಿ ಗಾಂಧಿನಗರದಲ್ಲಿ ಜೋರಾಗಿಯೇ ಹರಿದಾಡುತ್ತಿದೆ.
ಅದೇನೆಂದರೆ, “ರಾಬರ್ಟ್’ ಚಿತ್ರದಲ್ಲಿ ನಟ ವಿನೋದ್ ಪ್ರಭಾಕರ್ ಅವರು ನಟಿಸುತ್ತಿದ್ದಾರೆ ಎಂಬುದೇ ಜೋರಾಗಿ ಹರಿದಾಡುತ್ತಿರುವ ಆ ಸುದ್ದಿ. ಹೌದು, ಈಗಾಗಲೇ ವಿನೋದ್ ಪ್ರಭಾಕರ್ ನಟನೆಯ ಕೆಲವು ದೃಶ್ಯಗಳನ್ನು ನಿರ್ದೇಶಕರು ಚಿತ್ರೀಕರಿಸಿದ್ದಾರೆ ಎಂದು ಹೇಳಲಾಗಿದೆ. ವಿನೋದ್ ಪ್ರಭಾಕರ್ ಅವರು ಇತ್ತೀಚೆಗಷ್ಟೇ ದರ್ಶನ್ ಅಭಿನಯದ “ಯಜಮಾನ’ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ಆ ಚಿತ್ರದ ಶೀರ್ಷಿಕೆ ಗೀತೆಯಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದರು. ಅದಕ್ಕೂ ಮೊದಲು “ನವಗ್ರಹ’ ಚಿತ್ರದಲ್ಲಿ ದರ್ಶನ್ ಜೊತೆ ನಟಿಸಿದ್ದರು. ಈಗ “ರಾಬರ್ಟ್’ ಚಿತ್ರದಲ್ಲೊಂದು ಸ್ಪೆಷಲ್ ಪಾತ್ರ ಮಾಡುತ್ತಿದ್ದಾರೆ ಎಂಬುದೇ ಈ ಹೊತ್ತಿನ ಸುದ್ದಿ.
ಅಂದಹಾಗೆ, “ರಾಬರ್ಟ್’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರದ್ದೇನು ಪಾತ್ರ? ಇದಕ್ಕೆ ಸದ್ಯ ಉತ್ತರವಿಲ್ಲ. ಅವರು ಆ ಚಿತ್ರದಲ್ಲಿ ನಟಿಸುತ್ತಿರುವುದಂತೂ ಅಷ್ಟೇ ಸತ್ಯ ಎನ್ನುವ ಗಾಂಧಿನಗರದ ಮೂಲಗಳು, ಇನ್ನು, ಚಿತ್ರದಲ್ಲಿ ಹಲವು ವಿಶೇಷತೆಗಳು, ಹಲವು ವಿಶೇಷ ನಟ,ನಟಿಯರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಅದೇನೆ ಇರಲಿ, “ರಾಬರ್ಟ್’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ದರ್ಶನ್ ಅವರು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಂಡಿದ್ದಾರೆ. ಆ ತಯಾರಿ ಏನೆಂದರೆ, ಚಿತ್ರದ ಒಂದು ಗೆಟಪ್‌ನಲ್ಲಿ ದಪ್ಪ ದಾಡಿಯನ್ನು ಬಿಡಬೇಕಾಗಿದ್ದು, ಈಗ ದಾಡಿ ಬಿಟ್ಟಿರುವ ಭಾಗದ ಚಿತ್ರೀಕರಣವನ್ನು ನಡೆಸಲಾಗುತ್ತಿದೆ.
ಆ ಗೆಟಪ್‌ನ ಬಳಿಕ ಬೇರೊಂದು ಗೆಟಪ್‌ನಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ “ರಾಬರ್ಟ್’ಗೆ ನಾಯಕಿ ಯಾರೆಂಬುದು ಗೊತ್ತಿಲ್ಲ. ನಿರ್ದೇಶಕರು ಆ ಬಗ್ಗೆ ಎಲ್ಲೂ ಹೇಳಿಕೊಂಡಿಲ್ಲ. “ರಾಬರ್ಟ್”ಗೆ ಜೋಡಿ ಯಾರೆಂಬ ಬಗ್ಗೆ ಇಷ್ಟರಲ್ಲೇ ಗೊತ್ತಾಗಲಿದೆ. ಚಿತ್ರತಂಡ ಎಷ್ಟೇ ಗೌಪ್ಯತೆ ಕಾಪಾಡಿಕೊಂಡರೂ, ಸೆಟ್‌ನಲ್ಲಿ ಏನೆಲ್ಲಾ ನಡೆಯುತ್ತೆ ಎಂಬ ವಿಷಯ, ಗಾಂಧಿನಗರದ ಅಂಗಳದಲ್ಲಿ ಸದ್ದು ಮಾಡದೇ ಇರದು. ಸದ್ಯಕ್ಕೆ ಈಗ “ರಾಬರ್ಟ್’ ಜೊತೆ ವಿನೋದ್ ಪ್ರಭಾಕರ್ ನಟಿಸುತ್ತಿದ್ದಾರೆ. ಇನ್ನು ಯಾರೆಲ್ಲಾ ಇರಲಿದ್ದಾರೆ, ಏನೆಲ್ಲಾ ಮಾಡಲಿದ್ದಾರೆ ಎಂಬ ಬಗ್ಗೆಯೂ ಸುದ್ದಿ ಹೊರಬಿದ್ದರೆ ಅಚ್ಚರಿ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.