SRK: ಶೂಟಿಂಗ್ ವೇಳೆ ಮೂಗಿಗೆ ಪೆಟ್ಟು; ಶಾರುಖ್ ಖಾನ್‌ಗೆ ಸರ್ಜರಿ ಆಗಿದ್ದು ನಿಜವೇ?
Team Udayavani, Jul 5, 2023, 10:18 AM IST
ಮುಂಬಯಿ: ಕಿಂಗ್ ಖಾನ್ ಶಾರುಖ್ ಅವರಿಗೆ ಶೂಟಿಂಗ್ ವೇಳೆ ಮೂಗಿಗೆ ಪೆಟ್ಟು ಬಿದ್ದು ಸರ್ಜರಿಗೆ ಒಳಗಾಗಿದ್ದಾರೆ ಎಂದು ಫ್ಯಾನ್ಸ್ ಗಳು ಚಿಂತೆ ಮಾಡುತ್ತಿರುವಾಗಲೇ ʼಪಠಾಣ್ʼ ಸ್ಟಾರ್ ತನಗೇನು ಆಗಿಲ್ಲ ಎಂದು ಮೀಡಿಯಾ ಮುಂದೆ ಕಾಣಿಸಿಕೊಂಡಿದ್ದಾರೆ.
ʼಪಠಾಣ್ʼ ಸಿನಿಮಾದ ಬಳಿಕ ಅಟ್ಲಿ ನಿರ್ದೇಶನದ ʼಜವಾನ್ʼ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಶಾರುಖ್ ಖಾನ್ ಇತ್ತೀಚೆಗೆ ಲಾಸ್ ಏಂಜಲೀಸ್‌ನಲ್ಲಿ ಬಹಿರಂಗವಾಗದಿರುವ ಪ್ರಾಜೆಕ್ಟ್ ವೊಂದರ ಶೂಟಿಂಗ್ ನಲ್ಲಿರುವಾಗ ಅವರ ಮೂಗಿಗೆ ಏಟಾಗಿ ರಕ್ತ ಸುರಿದಿದೆ. ಕೂಡಲೇ ಚಿತ್ರತಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ. ಆಸ್ಪತ್ರೆಯಲ್ಲಿ ರಕ್ತ ನಿಲ್ಲಲು ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತು. ಆ ಬಳಿಕ ಅವರ ಮೂಗಿಗೆ ಬ್ಯಾಂಡೇಜ್ ಸುತ್ತಲಾಗಿದೆ ಎನ್ನುವ ವರದಿಯೊಂದು ಫ್ಯಾನ್ಸ್ ಗಳಿಗೆ ಚಿಂತೆಗೀಡು ಮಾಡಿತ್ತು.
ಇದೀಗ ಘಟನೆಯ ಸತ್ಯಾಂಶ ಹೊರಬಿದ್ದಿದೆ. ವಾಸ್ತವವಾಗಿ ಚಿತ್ರೀಕರಣದ ವೇಳೆ ಅವರ ಮೂಗಿಗೆ ಸಣ್ಣ ಗಾಯವಾಗಿತ್ತು. ಕೂಡಲೇ ಅವರು ಸಮೀಪದ ಕ್ಲಿನಿಕ್‌ಗೆ ಭೇಟಿ ನೀಡಿದ್ದಾರೆ. ಗಂಭೀರ ಸ್ವರೂಪವನ್ನು ಗಾಯವಲ್ಲದ ಕಾರಣ, ಅವರು ಚಿತ್ರೀಕರಣವನ್ನು ಮುಂದುವರೆಸಿದ್ದಾರೆ ಎಂದು ವರದಿ ತಿಳಿಸಿದೆ.
ಶಾರುಖ್ ಖಾನ್ ತನ್ನ ಪತ್ನಿ ಗೌರಿ ಖಾನ್ ಮತ್ತು ಮಗ ಅಬ್ರಾಮ್ ಅವರೊಂದಿಗೆ ಯುಎಸ್ ನಿಂದ ಮುಂಬಯಿಗೆ ಬುಧವಾರ ಮುಂಜಾನೆ (ಜು.5 ರಂದು) ಆಗಮಿಸಿದ್ದಾರೆ. ಈ ವೇಳೆ ಅವರು ಫಿಟ್& ಫಿನ್ ಆಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಯಾವುದೇ ಸರ್ಜರಿ ಆಗಿಲ್ಲ ಎಂದು ವರದಿ ತಿಳಿಸಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.