ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ
Team Udayavani, Jul 25, 2021, 1:10 PM IST
ಚೆನ್ನೈ: ಶನಿವಾರ ರಾತ್ರಿ ತಮಿಳು ಬಿಗ್ ಬಾಸ್ ಸ್ಪರ್ಧಿ ಹಾಗೂ ಚಿತ್ರನಟಿ ಯಶಿಕಾ ಆನಂದ್ ಕಾರು ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಯಶಿಕಾ ಗಂಭೀರ ಗಾಯಗೊಂಡಿದ್ದು ಆಕೆಯ ಸ್ನೇಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ನೇಹಿತರ ಜೊತೆಗೆ ಯಶಿಕಾ ಆನಂದ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು ಈ ವೇಳೆ ಮಹಾಬಲಿಪುರಂ ಬಳಿ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಶಿಕಾ ಅವರ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಧುರುವಾಂಗಲ್ ಪಾಥಿನಾರು’ ಮೂಲಕ ಖ್ಯಾತಿ ಗಳಿಸಿದ ನಟಿ ಯಶಿಕಾ ಆನಂದ್ ಪ್ರಯಾಣ ಮಾಡುತ್ತಿದ್ದ ಕಾರು ಮಹಾಬಲಿಪುರಂನ ಈಸ್ಟ್ ಕೋಸ್ಟ್ ರೋಡ್‌ನಲ್ಲಿ ಅತಿ ವೇಗವಾಗಿ ಸಾಗುತ್ತಿತ್ತು. ಅತಿಯಾದ ವೇಗ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಜಾರಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಾರಿನಲ್ಲಿದ್ದವರನ್ನು ರಕ್ಷಿಸಲು ಪ್ರತ್ಯಕ್ಷದರ್ಶಿಗಳು ಓಡಿ ಬಂದರು. ಅಷ್ಟರಲ್ಲಾಗಲೇ, ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರನ್ನು ಪ್ರತ್ಯಕ್ಷದರ್ಶಿಗಳು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಹಾಬಲಿಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.