![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 11, 2024, 5:36 PM IST
ಚಿತ್ರರಂಗಕ್ಕೆ ಬರುವ ಹೊಸಬರು ಒಂದಷ್ಟು ವಿಭಿನ್ನ ಟೈಟಲ್ ಮೊರೆ ಹೋಗುತ್ತಿದ್ದಾರೆ. ಈ ಸಾಲಿಗೆ ಸೇರುವ ಸಿನಿಮಾ ‘ಈ ಸಿನಿಮಾಗೆ ಕ್ಲೈಮ್ಯಾಕ್ಸ್ ಇರುವುದಿಲ್ಲ’. ಹೀಗೊಂದು ಟೈಟಲ್‌ನ ಸಿನಿಮಾಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಆರ್.ಕೆ.ಗಾಂಧಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಗೋವಾಗೆ ಟ್ರಿಪ್ ಹೊರಡುವ 6 ಜನ ಹುಡುಗ, ಹುಡುಗಿಯರ ಜೀವನದಲ್ಲಿ ಆಗಂತುಕನೊಬ್ಬ ಬಂದಾಗ ಅವರಿಗೆ ಎದುರಾದಾಗ ಸಂಕಷ್ಟಗಳು ಹಾಗೂ ಅವುಗಳನ್ನು ಆ ಸ್ನೇಹಿತರು ಹೇಗೆ ಎದುರಿಸುತ್ತಾರೆ ಎಂಬುದನ್ನು ಈ ಸಿನಿಮಾಗೆ ಕ್ಲೈಮ್ಯಾಕ್ಸ್ ಇರುವುದಿಲ್ಲ ಚಿತ್ರದ ಮೂಲಕ ಹೇಳಹೊರಟಿದ್ದಾರೆ.
ಈ ಚಿತ್ರದಲ್ಲಿ ಬಾಹುಬಲಿ ಸಿನಿಮಾದ ಕಾಲಕೇಯ ಖ್ಯಾತಿಯ ಪ್ರಭಾಕರ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ, ಹರಿ ಬಂಗಾರಪೇಟೆ, ದೀನ ಉಪ್ಪಾಡ, ರಾಮ್ ಜನಾರ್ದನ್, ರೂಪಶ್ರೀ, ಅಶೋಕ್ ರೆಡ್ಡಿ, ದೇವರಾಜ್, ಎಂ ವಿ. ಸಮಯ್, ಬಲರಾಂ ಮೊದಲಾದವರು ನಟಿಸುತ್ತಿದ್ದಾರೆ. ಎರಡೂವರೆ ಗಂಟೆಯ ಈ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ಇರುವುದಿಲ್ಲ, ಆದರೆ ಸಿನಿಮಾ ನೋಡಿದ ನಂತರ ಪ್ರೇಕ್ಷಕರೇ ಚಿತ್ರಕ್ಕೊಂದು ಒಳ್ಳೆಯ ಕ್ಲೈಮ್ಯಾಕ್ಸ್ ನೀಡಬೇಕೆಂದು ನಿರ್ದೇಶಕರ ಮಾತು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.