54th IFFI ಉದ್ಘಾಟನೆ: ಶೀಘ್ರ ಭಾರತ ಮನೋರಂಜನಾ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ: ಠಾಕೂರ್
ಚಲನಚಿತ್ರೋತ್ಸವದಲ್ಲಿ ವರ್ಷದಿಂದ ವರ್ಷಕ್ಕೆ ಹೊಸತನ
Team Udayavani, Nov 20, 2023, 9:04 PM IST
ಪಣಜಿ: ಜಗತ್ತಿನಲ್ಲಿಯೇ ಪ್ರಪ್ರಥಮವಾಗಿ ಚಂದ್ರನ ದಕ್ಷಿಣಧ್ರುವದಲ್ಲಿ ಚಂದ್ರಯಾನ ಪೂರ್ಣಗೊಳಿಸಿದ ದೇಶ ಭಾರತವು ಶೀಘ್ರದಲ್ಲಿಯೇ ಮನೋರಂಜನಾ ಕ್ಷೇತ್ರದಲ್ಲಿಯೂ ಜಗತ್ತಿನಲ್ಲಿ 3 ನೇ ಸ್ಥಾನಕ್ಕೆ ಬರಲಿದೆ. ಅಂತಾರಾಷ್ಟ್ರೀಯ ಚಲನಚಿತ್ತೋತ್ಸವವು 2047 ರ ಸಂದರ್ಭದಲ್ಲಿ ಜಗತ್ತಿನ ನಂಬರ್ 1 ಫೆಸ್ಟಿವಲ್ ಆಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಮಂತ್ರಿ ಅನುರಾಗ್ ಠಾಕೂರ್ ವಿಶ್ವಾಸ ವ್ಯಕ್ತಪಡಿಸಿದರು.
ಗೋವಾ ರಾಜಧಾನಿ ಪಣಜಿ ಸಮೀಪದ ಬಾಂಬೋಲಿಂ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ಸೋಮವಾರ (ನ 20) ಸಂಜೆ 54 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಭಾರತೀಯ ಸಾಂಸ್ಕೃತಿಕ ಛಾಪನ್ನು ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾ ಮತ್ತು ಇತರ ಪ್ರದೇಶಗಳಲ್ಲಿಯೂ ಕಾಣಬಹುದು. ಭಾರತದ ಯಾವುದೇ ಚಲನಚಿತ್ರಗಳನ್ನು ಪೈರಸಿ ಮಾಡಿದರೆ ಅಂತವರಿಗೆ 3 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇಂತಹ ಕಾನೂನನ್ನು ಕೇವಲ ಭಾರತದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿದೆ. ಯಾವುದೇ ಚಲನಚಿತ್ರಗಳನ್ನು ಕಳ್ಳತನ ಮಾಡುವಂತಿಲ್ಲ ಎಂದರು.
ಪ್ರಸಕ್ತ ಚಲನಚಿತ್ರೋತ್ಸವದಲ್ಲಿ 78 ದೇಶಗಳ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ಕಳೆದ ವರ್ಷದ ಚಲನಚಿತ್ರಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ 3 ರಷ್ಟು ಹೆಚ್ಚು ಚಲನಚಿತ್ರಗಳನ್ನು ಚಲನಚಿತ್ರೋತ್ಸವದಲ್ಲಿ ವೀಕ್ಷಿಸಬಹುದಾಗಿದೆ ಎಂದರು.
ಇದನ್ನೂ ಓದಿ : 54th IFFI ಗೆ ಚಾಲನೆ: ಮಾಧುರಿ ದೀಕ್ಷಿತ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋವಾ ಸಿಎಂ ಡಾ.ಪ್ರಮೋದ ಸಾವಂತ್ ಮಾತನಾಡಿ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗೋವಾ ರಾಜ್ಯ ಖಾಯಂ ಸ್ಥಳವಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಷದಿಂದ ವರ್ಷಕ್ಕೆ ಹೊಸತನವನ್ನು ಕಾಣಬಹುದಾಗಿದೆ. 2004 ರಲ್ಲಿ ದಿ.ಮನೋಹರ್ ಪರೀಕರ್ ರವರು ಗೋವಾದಲ್ಲಿ ಆರಂಭಿಸಿದ ಚಲನಚಿತ್ರೋತ್ಸವ ಇಂದು ಜಗತ್ತಿನ ಚಲನಚಿತ್ರ ಕ್ಷೇತ್ರದ ವೇದಿಕೆಯಾಗಿ ನಿಂತಿದೆ. ಗೋವಾ ಸಿನಿಮಾ ವಲಯದಲ್ಲಿ ನಿಧಾನವಾಗಿ ಪ್ರಗತಿ ಸಾಧಿಸುತ್ತಿದೆ, ಗೋವಾ ಎಂಟರ್‍ಟೈನ್‍ಮೆಂಟ್ ಕಾರ್ಪೊರೇಷನ್ ರಾಜ್ಯದಲ್ಲಿ ಫಿಲ್ಮ್ ಸಿಟಿ ಸ್ಥಾಪಿಸಲು ಉತ್ಸುಕವಾಗಿದೆ. ಫಿಲ್ಮ್‍ಸಿಟಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜಗತ್ತಿನ ಎಲ್ಲ ಪ್ರತಿನಿಧಿಗಳಿಗೆ ಸ್ವಾಗತ ಕೋರುತ್ತೇನೆ ಎಂದರು.
ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ರವರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್, ಕೇಂದ್ರ ಸಚಿವ ಶ್ರೀಪಾದ ನಾಯಕ್, ಶಾಹಿದ್ ಕಪೂರ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಬಾಲಿವುಡ್‍ನ ಹಲವು ನಟರು ಭಾಗವಹಿಸಿದ್ದು, ಕರಣ್ ಜೋಹರ್, ಸನ್ನಿ ಡಿಯೋಲ್, ಶ್ರಿಯಾ ಸರನ್, ನುಸ್ರತ್ ಭರುಚಾ, ಪಂಕಜ್ ತ್ರಿಪಾಠಿ ಮತ್ತು ಇತರ ತಾರೆಯರ ಜತೆಗೆ ಸಂಗೀತಗಾರರಾದ ಶಾಂತನು ಮೊಯಿತ್ರಾ, ಶ್ರೇಯಾ ಘೋಷಾಲ್ ಮತ್ತು ಸುಖವಿಂದರ್ ಸಿಂಗ್, ನಟ ಮತ್ತು ನಿರೂಪಕಿ ಅಪರಶಕ್ತಿ ಖುರಾನಾ ಮತ್ತು ಕರಿಷ್ಮಾ ತನ್ನಾ ಕೂಡ ಉಪಸ್ಥಿತರಿದ್ದರು.
ವಿವಿಧ ಭಾಷೆಯ ಅನೇಕ ಸಿನಿ ಕಲಾವಿದರು, ನಿರ್ದೇಶಕರು, ಬರಹಗಾರರು ಮತ್ತು ಚಲನಚಿತ್ರ ಪ್ರೇಮಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಚಲನಚಿತ್ರೋತ್ಸವ ನವೆಂಬರ್ 28 ರ ವರೆಗೆ ನಡೆಯಲಿದೆ. 270 ಕ್ಕೂ ಹೆಚ್ಚು ಚಲನ ಚಿತ್ರಗಳು ವಿವಿಧ ಭಾಗಗಳಲ್ಲಿ ಪ್ರದರ್ಶನ ಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.