Movie review: ಮಸ್ತ್ ಜರ್ನಿಯ ‘ನ್ಯಾನೋ ನಾರಾಯಣಪ್ಪ’
Team Udayavani, Jul 9, 2023, 3:46 PM IST
ಕೆಲವು ಸಿನಿಮಾಗಳು ತಮ್ಮ ಕಥಾವಸ್ತುಗಳ ಮೂಲಕ ಗಮನ ಸೆಳೆಯುತ್ತವೆ. ಅಂತಹ ಸಿನಿಮಾಗಳಿಗೆ ಹೀರೋ ಯಾರು, ಆತನ ವಯಸ್ಸೆಷ್ಟು ಎನ್ನುವುದು ಮುಖ್ಯವಾಗುವುದಿಲ್ಲ. ಈ ವಾರ ತೆರೆಕಂಡಿರುವ “ನ್ಯಾನೋ ನಾರಾಯಣಪ್ಪ’ ಕೂಡಾ ಇದೇ ಸಾಲಿಗೆ ಸೇರುವ ಸಿನಿಮಾ.
ನಿರ್ದೇಶಕ ಕುಮಾರ್ ಒಂದು ಲವಲವಿಕೆಯ ಕಥೆಯನ್ನು ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ. ಸಿನಿಮಾದ ಕಥೆ ಬಗ್ಗೆ ಹೇಳಬೇಕಾದರೆ ತನ್ನ ಪ್ರೀತಿಯ ಹೆಂಡತಿಯ ಶಸ್ತ್ರಚಿಕಿತ್ಸೆಗೆ 20 ಲಕ್ಷ ಹೊಂದಿಸಿ ಜೀವ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಗಂಡನದ್ದು. ಈ 20 ಲಕ್ಷವನ್ನು ಹೇಗೆ ಹೊಂದಿಸುತ್ತಾನೆ ಎನ್ನುವುದನ್ನು ಸಿನಿಮಾದಲ್ಲಿ ನೋಡಬೇಕು. ಹಾಗಂತ ಸಿನಿಮಾ ಕೇವಲ ಈ ವೃದ್ಧ ಜೋಡಿಗಷ್ಟೇ ಸೀಮಿತವಾಗಿದೆ ಎನ್ನುವಂತಿಲ್ಲ. ಅದರಾಚೆ ಹಲವು ಅಂಶಗಳನ್ನು ಹೇಳಲಾಗಿದೆ. ಯುವಜೋಡಿ, ಕಾಸು ಮಾಡಲು ನಿಂತವರ ಹಲವು ದಾರಿಗಳು, ಜೊತೆಗೆ ಅನೇಕ ದಂಧೆ… ಹೀಗೆ ಹಲವು ಅಂಶಗಳು ಸಿನಿಮಾದಲ್ಲಿ ಗಮನ ಸೆಳೆಯುತ್ತವೆ. ನಮ್ಮ ಸುತ್ತಮುತ್ತ ನಡೆಯುವ ಘಟನೆಗಳನ್ನೇ ತಮ್ಮ ಸಿನಿಮಾದ ಕಥಾಹಂದರವನ್ನಾಗಿಸಿದ್ದಾರೆ.
ಚಿತ್ರದಲ್ಲಿ ಭಾವನಾತ್ಮಕ ಅಂಶಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಬಜೆಟ್‌ಗಿಂತ ಸಬ್ಜೆಕ್ಟ್ ಮುಖ್ಯ ಎಂಬುದು ಸಿನಿಮಾ ನೋಡಿದಾಗ ಆಗಾಗ ನೆನಪಾಗುತ್ತದೆ.
ಚಿತ್ರದಲ್ಲಿ ನಟಿಸಿರುವ ಕೃಷ್ಣೋಜಿ ರಾವ್, ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ರವಿ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.