ಊರನ್ನೇ ಬದಲಿಸಿದ ಪ್ರವೇಶ ! 


Team Udayavani, Mar 28, 2019, 12:56 PM IST

28-March-8
ಒಂದು ಹಳ್ಳಿ. ಅಲ್ಲೊಂದು ಶಾಂತಿ ಸಾಮರಸ್ಯದ ಜೀವನ. ಜಾತಿ- ಮತ ಧರ್ಮದ ಪರಿವೆಯೇ ಇಲ್ಲದೆ ಬದುಕುವ ಜನರು. ಆಧುನಿಕ ಸ್ಪರ್ಶದ ಹೊರಜಗತ್ತಿನಿಂದ ದೂರ ನಿಂತ ಸಮಾಜವದು. ಆದರೆ, ಅಂತಹ ಊರೇ ಜಾತಿ- ಧರ್ಮದ ಆಧಾರದಲ್ಲಿ ಯಾರೂ ಊಹಿಸದ ಹಾಗೆ ಬದಲಾಗಿ ಬಿಡುತ್ತದೆ. ಯಾಕೆ ಹೀಗೆ… ಎಂದು ಯೋಚಿಸುವ ಸಮಯದಲ್ಲಿ ಊರಿನ ಚಿತ್ರಣವೇ ಅದಲು- ಬದಲು. ಯಾಕೆಂದರೆ ಅನ್ಯೋನ್ಯ ಬದುಕಿಗೆ ಅಲ್ಲಿ ಕೊಳ್ಳಿ ಏಟು ಬಿದ್ದಾಗಿರುತ್ತದೆ.
ಅಂದಹಾಗೆ, ಇನ್ನೇನು ಕೆಲವೇ ದಿನಗಳ ಅಂತರದಲ್ಲಿ ಅಂದರೆ ಹೆಚ್ಚು ಕಡಿಮೆ ಆಗಸ್ಟ್‌ ವೇಳೆಗೆ ತೆರೆ ಕಾಣಲಿರುವ ಪ್ರವೇಶ ಸಿನೆಮಾದ ಒನ್‌ಲೈನ್‌ ಸಬೆjಕ್ಟ್ ಇದು. ಇದೇ ಕಥೆಯ ಜತೆಗೆ ಸಾಗಿದ ಪ್ರವೇಶದ ಕಥಾನಕ ಅತ್ಯಂತ ಸುಮಧುರ ಹಾಗೂ ಭಯಾನಕ! ವಿಶೇಷವೆಂದರೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿರುವ ಚೇತನ್‌ ಮುಂಡಾಡಿಯವರು ಮಾಡಿದ ಸಿನೆಮಾ ಇದಾಗಿರುವುದರಿಂದ ‘ಪ್ರವೇಶ’ದ ಬಗ್ಗೆ ಸಾಕಷ್ಟು ಕುತೂಹಲ ಹಾಗೂ ನಿರೀಕ್ಷೆ ಇದ್ದೇ ಇದೆ.
ಇದು ತುಳು ಸಿನೆಮಾ. ಜತೆಗೆ ಬ್ಯಾರಿ ಸಿನೆಮಾ ಕೂಡ ಹೌದು. ಅಷ್ಟು ಮಾತ್ರವಲ್ಲ; ಕುಂದಾಪುರ ಕನ್ನಡ, ಮಂಗಳೂರು ಕನ್ನಡ ಹಾಗೂ ಬೆಂಗಳೂರು ಕನ್ನಡ ಈ ಚಿತ್ರದಲ್ಲಿ ಬಳಕೆಯಾಗಿದೆ. ಹೀಗಾಗಿ ಕರ್ನಾಟಕದ ಪ್ರಾದೇಶಿಕ ಭಾಷೆಯನ್ನು ಹದವಾಗಿ ಮಿಕ್ಸ್‌ ಮಾಡಿ ರೆಡಿ ಮಾಡಿದ ಸಿನೆಮಾ. ಸಿನೆಮಾಗೆ ಚೇತನ್‌ ಅವರೇ ಕಥೆ ಬರೆದಿದ್ದು, ಅದನ್ನು ಖ್ಯಾತ ಸಿನಿ ಪತ್ರಕರ್ತ ಜೋಗಿ ಅವರು ವಿಸ್ತರಿಸಿದ್ದಾರೆ. ಹಿಂದಿನ ಪ್ರಶಸ್ತಿ ಪುರಸ್ಕೃತ ‘ಮದಿಪು’ ಚಿತ್ರದ ತಂಡವನ್ನೇ ಈ ಸಿನೆಮಾಕ್ಕೂ ಬಳಸಲಾಗಿದೆ. ವಿ. ಮನೋಹರ್‌ ಅವರ ಸಂಗೀತವಿದೆ. ನಾಯಕನಾಗಿ ಪೃಥ್ವೀ ಅಂಬರ್‌ ಮತ್ತು ನಾಯಕಿಯಾಗಿ ಬಿಂದು ರಕ್ಷಿದಿ ಅವರು ನಟಿಸುತ್ತಿದ್ದಾರೆ. ಖ್ಯಾತ ರಂಗಭೂಮಿ ನಟ ಮತ್ತು ಪಡ್ಡಾಯಿ ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದ ಚಂದ್ರಹಾಸ್‌ ಉಳ್ಳಾಲ ಅವರು ಒಂದು ಭಿನ್ನ ಮತ್ತು ವಿಶೇಷ ಪಾತ್ರದಲ್ಲಿದ್ದಾರೆ.
ಇನ್ನೊಂದು ಸಂಗತಿಯೆಂದರೆ, ‘ಕೆಜಿಎಫ್‌’ ಸಿನೆಮಾದ ಎಡಿಟಿಂಗ್‌ ಮಾಡಿದ ಶ್ರೀಕಾಂತ್‌ ಅವರೇ ‘ಪ್ರವೇಶ’ ಸಿನೆಮಾಕ್ಕೂ ಎಡಿಟಿಂಗ್‌ ಮಾಡುತ್ತಿದ್ದಾರೆ. ಚೇತನ್‌ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ತಂದು ಕೊಟ್ಟ ‘ಮದಿಪು’ ಸಿನೆಮಾದ ಸಂಕಲನವನ್ನೂ ಅವರೇ ಮಾಡಿದ್ದರು. ಈಗ ಎರಡನೇ ತುಳು ಸಿನೆಮಾವಾಗಿ ‘ಪ್ರವೇಶ’ದ ಸಂಕಲನ ಮಾಡಲಿದ್ದಾರೆ. ಚೇತನ್‌ ಹಾಗೂ ಶ್ರೀಕಾಂತ್‌ 17 ವರ್ಷಗಳಿಂದ ಆತ್ಮೀಯ ಸ್ನೇಹಿತರು. ಇಬ್ಬರೂ ಜತೆಯಾಗಿ ಸಿನೆಮಾ ಇಂಡಸ್ಟ್ರಿಯಲ್ಲಿ ಬೆಳೆದವರು ಎಂಬುದು ಗಮನಾರ್ಹ.
ದಿನೇಶ್‌ ಇರಾ

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.