53ನೇ ಇಫಿ ಯಲ್ಲಿ 39 ದೇಶಗಳ ಪ್ರತಿನಿಧಿಗಳು ಭಾಗಿ: ರವೀಂದ್ರ ಭಾಕರ್
ಎರಡು ವರ್ಷಗಳ ನಂತರ ಸಂಪೂರ್ಣ ಪ್ರಮಾಣದಲ್ಲಿ ಈ ಚಿತ್ರೋತ್ಸವ ನಡೆಯುತ್ತಿದೆ...
Team Udayavani, Nov 24, 2022, 6:12 PM IST
ಪಣಜಿ: ರಾಜ್ಯದಲ್ಲಿ ನಡೆಯುತ್ತಿರುವ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದುವರೆಗೆ 10 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ಬಾರಿಗೆ 39 ದೇಶಗಳ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ಅಮೆರಿಕ, ರಷ್ಯಾ, ಯುಕೆ, ದಕ್ಷಿಣ ಕೊರಿಯಾ, ಫ್ರಾನ್ಸ್ ಸೇರಿವೆ ಎಂದು ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮದ ಸಿಇಒ ರವೀಂದ್ರ ಭಾಕರ್ ತಿಳಿಸಿದ್ದಾರೆ.
ಪಣಜಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ನಿಂದಾಗಿ ಎರಡು ವರ್ಷಗಳ ನಂತರ ಸಂಪೂರ್ಣ ಪ್ರಮಾಣದಲ್ಲಿ ಈ ಚಿತ್ರೋತ್ಸವ ನಡೆಯುತ್ತಿದೆ. ಇದರಿಂದಾಗಿ ದೇಶ-ವಿದೇಶಗಳ ಸಿನಿರಸಿಕರು ಹಬ್ಬಕ್ಕೆ ಸ್ಪಂದಿಸಿದ್ದಾರೆ. ಗೋವಾ ಸರ್ಕಾರವು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜೊತೆಗೆ ಈ ವರ್ಷ ಉತ್ಸವವನ್ನು ಹೆಚ್ಚು ಯಶಸ್ವಿಗೊಳಿಸಲು ವಿಶೇಷ ಸಹಾಯವನ್ನು ನೀಡಿದೆ. ಈ ವರ್ಷ, ಮೊದಲ ಬಾರಿಗೆ, 39 ದೇಶಗಳ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.
ಪ್ರಸಕ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತಿದೊಡ್ಡ ನಿಯೋಗ ಅಮೆರಿಕದಿಂದ, ನಂತರ ರಷ್ಯಾದ ಪ್ರತಿನಿಧಿಗಳು ಆಗಮಿಸಿದ್ದಾರೆ. ಉತ್ಸವವು ವಿವಿಧ ವಿಭಾಗಗಳಲ್ಲಿ 79 ದೇಶಗಳ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ಪ್ರದರ್ಶಿಸಿದೆ. ಇನ್ನೂ 180 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಮೇಲಾಗಿ ಈ ಉತ್ಸವದ ನಿಮಿತ್ತ ಆಯೋಜಿಸಿದ್ದ ‘ಫಿಲ್ಮ್ ಬಜಾರ್’ಗೆ ನಿರ್ಮಾಪಕರು-ನಿರ್ದೇಶಕರು ಭರ್ಜರಿ ರೆಸ್ಪಾನ್ಸ್ ನೀಡಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವಚಂದ್ರ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Movie: ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ; ಗಣೇಶ್ ರಾವ್
Chef Chidambara: ಅನಿರುದ್ಧ್ ಅಡುಗೆ ಶುರು
Bollywood: ರಿಮೇಕ್ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್ ಸಿನಿಮಾಗಳು
ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್
ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.