BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Team Udayavani, Oct 26, 2024, 9:43 AM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11)ದಲ್ಲಿ ಈ ವಾರ ಕಿಚ್ಚ ಸುದೀಪ್ ಅವರ ವೀಕೆಂಡ್ ಎಪಿಸೋಡ್ ಶೂಟಿಂಗ್ ಇರಲ್ಲ. ಅವರ ಬದಲಾಗಿ ಬೇರೆಯವರು ಶೋ ನಡೆಸಿಕೊಡಲಿದ್ದಾರೆ.
ತಾಯಿಯ ನಿಧನದಿಂದ ನೊಂದಿರುವ ಕಿಚ್ಚ ಸುದೀಪ್ (Kiccha Sudeep) ಈ ವಾರ ಬಿಗ್ ಬಾಸ್ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಅವರ ಜಾಗಕ್ಕೆ ಈ ವಾರ ಬೇರೆ ಕಲಾವಿದರು ಶೋ ನಡೆಸಿಕೊಡಲಿದ್ದಾರೆ.
ಈಗಾಗಲೇ ಕಲರ್ಸ್ ಕನ್ನಡ ಶನಿವಾರದ ಪ್ರೋಮೊ ರಿಲೀಸ್ ಮಾಡಿದ್ದು, ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸ್ಪರ್ಧಿಗಳ ಜತೆ ಬೆರೆತುಕೊಂಡು ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ.
ಸ್ಪರ್ಧಿಗಳನ್ನು ನಗಿಸುತ್ತಾ, ಅವರ ವ್ಯಕ್ತಿತ್ವದ ಬಗ್ಗೆ ಭಟ್ರು ಮಾತನಾಡಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ನಾಳೆ ಯಾರು ನಡೆಸಿಕೊಡ್ತಾರೆ ಶೋ..?
ಪ್ರತಿ ಸಂಡೆ ನಡೆಯುತ್ತಿದ್ದ ಸೂಪರ್ ಸಂಡೇ ವಿತ್ ಕಿಚ್ಚ ಕೂಡ ಈ ವಾರ ಇರುವುದಿಲ್ಲ. ಭಾನುವಾರದ ಕಾರ್ಯಕ್ರಮವನ್ನು ಖ್ಯಾತ ನಿರೂಪಕ ಸೃಜನ್ ಲೋಕೇಶ್ ಅವರು ನಡೆಸಿಕೊಡಲಿದ್ದಾರೆ ಎನ್ನಲಾಗಿದೆ.
ಸೃಜನ್ ಅವರಿಗೆ ಬಿಗ್ ಬಾಸ್ ಮನೆಯ ಆಟ ಹೇಗಿರುತ್ತದೆ ಎನ್ನುವುದು ಗೊತ್ತಿದೆ. ಸೃಜನ್ ಲೋಕೇಶ್ ಈ ಹಿಂದೆ ಸ್ಪರ್ಧಿಯಾಗಿ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು.
ದೊಡ್ಮನೆ ಬೊಂಬೆಗಳಿಗೆ ಕೀ ಕೊಡಲು ಬಂದ್ರು ಯೋಗರಾಜ್ ಭಟ್!
ಬಿಗ್ ಬಾಸ್ ಕನ್ನಡ ಸೀಸನ್ 11 | ಇಂದು ರಾತ್ರಿ 9:00#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/pbH1Sahrxi
— Colors Kannada (@ColorsKannada) October 26, 2024
ಭವ್ಯಾ, ಚೈತ್ರ, ಗೌತಮಿ, ಹಂಸ, ಮಂಜು, ಮಾನಸ, ಮೋಕ್ಷಿತಾ, ಶಿಶಿರ್ ಮತ್ತು ಗೋಲ್ಡ್ ಸುರೇಶ್ ಇವರುಗಳ ಪೈಕಿ ಒಬ್ಬರು ಇದೇ ವೇಳೆ ಮನೆಯಿಂದ ಆಚೆ ಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
BBK11: ಕೋಪದಿಂದ ಅರ್ಧದಲ್ಲೇ ಬಿಗ್ ಬಾಸ್ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ
BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.