BBK11: ತಾಯಿಯನ್ನು ನೆನೆದು ಬಿಗ್ ಬಾಸ್ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್
Team Udayavani, Nov 2, 2024, 3:09 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಶೋ ನಡೆಸಿಕೊಡುವ (Kiccha Sudeep) ತಮ್ಮ ತಾಯಿಯನ್ನು ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟಿದ್ದಾರೆ.
ತಾಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಕರ್ತವ್ಯ ನಿಷ್ಠಬಿಡದೆ ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ನಡೆಸಿಕೊಟ್ಟಿದ್ದರು. ತಾಯಿ ನಿಧನ ಹೊಂದಿದ ದಿನದಿಂದ ಸುದೀಪ್ ನೋವಿನಿಂದ ಕುಗ್ಗಿದ್ದಾರೆ.
ಒಂದು ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಬಾರದ ಕಿಚ್ಚ ಈ ವಾರ ಬಿಗ್ ಬಾಸ್ ವೇದಿಕೆಗೆ ಬಂದಿದ್ದಾರೆ. ಈ ವೇಳೆ ಅವರು ಬಿಗ್ ಬಾಸ್ ವೇದಿಕೆಯಲ್ಲೇ ತಾಯಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ಕಿಚ್ಚ ಅವರ ಮುಂದೆ ಅವರ ತಾಯಿ ಫೋಟೋವನ್ನು ಹಾಕಿ, ಪ್ರೇಕ್ಷಕರನ್ನು ರಂಜಿಸುವ ʼಮಾಣಿಕ್ಯʼನಂತಹ ನಾಯಕನನ್ನು ಕರುನಾಡ ಮಡಿಲಿಗೆ ಹಾಕಿ, ತನ್ನ ಪ್ರೀತಿಯನ್ನು ಮನೆ ಮನೆಯ ಜೊತೆ ಹಂಚಿಕೊಂಡ ನಿಮ್ಮ ತಾಯಿಯ ಅಗಲಿಕೆ ಭರಿಸಲಾರದ ಭಾರ.. ಎನ್ನುವ ಧ್ವನಿಯನ್ನು ಹಿನ್ನೆಲೆಯಲ್ಲಿ ಹಾಕಲಾಗಿದೆ.
ತಾಯಿಯ ಭಾವಚಿತ್ರವನ್ನು ನೋಡುತ್ತಾ ಕಿಚ್ಚ ನಿಂತಲ್ಲೇ ನಿಂತು ಮಾತು ಬಾರದೆ, ನೋವನ್ನು ನುಂಗಿ ಕಣ್ಣೀರಿಟ್ಟಿದ್ದಾರೆ.
ಇಡೀ ಬಿಗ್ ಬಾಸ್ ಮನೆ ಸುದೀಪ್ ತಾಯಿಯ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದೆ. ಮನೆಯೊಳಗಿನ ಸ್ಪರ್ಧಿಗಳು ಭಾವುಕರಾಗಿದ್ದಾರೆ.
ಮನಸ್ಸು ಭಾರವಾಗಿದ್ರೂ ಜವಾಬ್ದಾರಿ ನಿಭಾಯಿಸೋಕೆ ಹಾಜರಾದ ಕಿಚ್ಚ!
ವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/LBW7BaeZcF
— Colors Kannada (@ColorsKannada) November 2, 2024
ಅಕ್ಟೋಬರ್ 20 ರಂದು ಸುದೀಪ್ ಜೀವನದಲ್ಲಿ ಅತೀ ಹೆಚ್ಚಾಗಿ ಪ್ರೀತಿಸುತ್ತಿದ್ದ ತಾಯಿಯನ್ನು ಕಳೆದುಕೊಂಡಿದ್ದರು. ಸರೋಜಾ ಸಂಜೀವ್ (Saroja Sanjeev) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.