YouTuber ಮೇಲೆ ಹಲ್ಲೆ… ಮತ್ತೆ ವಿವಾದಕ್ಕೆ ಸಿಲುಕಿದ ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್
Team Udayavani, Mar 9, 2024, 10:25 AM IST
ನವದೆಹಲಿ: ಗುರುಗ್ರಾಮ್‌ನ ಸೆಕ್ಟರ್ 53 ಪೊಲೀಸ್ ಠಾಣೆಯಲ್ಲಿ ಬಿಗ್ ಬಾಸ್ ಓಟಿಟಿ ಸೀಸನ್ 2 ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯಾದವ್ ನನ್ನ ಬೆನ್ನುಮೂಳೆ ಮುರಿಯಲು ಯತ್ನಿಸಿದ್ದಾರೆ ಎಂದು ಸಾಗರ್ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಇದೀಗ ಎಲ್ವಿಶ್ ಯಾದವ್ ಯೂಟ್ಯೂಬರ್ ಸಾಗರ್ ಅವರನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಏನಿದು ಪ್ರಕರಣ:
ಕಳೆದ ಎರಡು ವರ್ಷಗಳಿಂದ ಎಲ್ವಿಶ್ ಯಾದವ್ ಗೆ ಸಾಗರ್ ಠಾಕೂರ್ ಪರಿಚಯವಿತ್ತು ಆದರೆ ಕಳೆದ ಕೆಲ ಸಮಯಗಳಿಂದ ಎಲ್ವಿಶ್ ಯಾದವ್ ಅವರು ತನ್ನ ಚಾನೆಲ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಾಗರ್ ಹೇಳಿದ್ದರು ಅದೂ ಅಲ್ಲದೆ ನಾನಾ ಪ್ರಖ್ಯಾತಿಯೂ ಕುಂದಿತ್ತು ಎಂದು ಸಾಗರ್ ಹೇಳ್ಕೊಂಡಿದ್ದರು ಇತ್ತೀಚಿಗೆ ಎಲ್ವಿಶ್ ಯಾದವ್ ತನ್ನನ್ನು ಭೇಟಿಯಾಗುವಂತೆ ಹೇಳಿದ್ದರು ಅದರಂತೆ ನಾನು ಒಂದು ರೆಸ್ಟೋರೆಂಟ್ ನಲ್ಲಿ ಅವರಿಗಾಗಿ ಕಾಯುತ್ತಿದ್ದೆ ಈ ವೇಳೆ ಎಂಟು ಹತ್ತು ಮಂದಿಯ ಜೊತೆಗೆ ಬಂದಿದ್ದ ಎಲ್ವಿಶ್ ಗೆ ನಾನು ವಿಶ್ ಮಾಡಲು ಹೋದೆ ಅವಾಗ ಏಕಾಏಕಿ ಎಲ್ವಿಶ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಅಲ್ಲದೆ ಆತನ ಜೊತೆಗಿದ್ದ ಇತರರು ನನ್ನ ಮೇಲೆ ಹಲ್ಲೆ ನಡೆಸಿದ್ದು ನನ್ನ ತುಟಿ, ಕೈ, ಬೆನ್ನಿನ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಎಲ್ಲಾ ಘಟನೆಯ ವಿಡಿಯೋ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಎಲ್ವಿಶ್ ನನ್ನು ಬಂಧಿಸುವಂತೆ ಆಗ್ರಹ
ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದ್ದ ಎಲ್ವಿಶ್ ಯಾದವ್ ವಿರುದ್ಧ ನೆಟ್ಟಿಗರು ಗರಂ ಆಗಿದ್ದರೆ ಅಲ್ಲದೆ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಎಲ್ವಿಶ್ ನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ದಾಖಲು:
ಸಾಗರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಗುರುಗ್ರಾಮ್ ಪೊಲೀಸರು ಎಲ್ವಿಶ್ ವಿರುದ್ಧ ಐಪಿಸಿಯ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 149 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
•@gurgaonpolice why Gurugram is becoming crime city? This is an attempt to mürd êr̥.
A #YouTuber #Maxtern is allegedly beaten by RW YouTuber #ElvishYadav
Is there any law & order in #Gurugram ?#ShameOnElvish #RandomSena #ElvishArmy pic.twitter.com/SLMJki0auW
— Samajwadi Prahari (@SP_Prahari) March 8, 2024
I was brutally attacked and assaulted by @ElvishYadav, who openly issued death threats to me. All the evidence is available on the internet. But, When I went to the police station to file an FIR, the SHO lodged it under IPC 147, 149, 323, and 506. Unfortunately, these are… pic.twitter.com/UC2U4n1Gee
— Maxtern (@RealMaxtern) March 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.