Vinod Dondale: ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?
Team Udayavani, Jul 20, 2024, 5:18 PM IST
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕರೊಬ್ಬರು (Tv Serial Director) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ.
ನಿರ್ದೇಶಕ ವಿನೋದ್ ದೊಂಡಾಲೆ (Vinod Dondale) ಆತ್ಮಹತ್ಯೆ ನಾಗಾರಬಾವಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಶನಿವಾರ(ಜು.20ರಂದು) ಮಾಡಿಕೊಂಡಿರುವುದು ವರದಿಯಾಗಿದೆ.
ಕನ್ನಡ ಕಿರುತೆರೆಯಲ್ಲಿ ‘ಕರಿಮಣಿ’, ‘ಮೌನರಾಗ’ ಸೇರಿದಂತೆ ‘ಶಾಂತಂ ಪಾಪಂ’ ಧಾರಾವಾಹಿಯ ಕೆಲ ಎಪಿಸೋಡ್ಗಳನ್ನು ಕೂಡ ನಿರ್ದೇಶನ ಮಾಡಿರುವ ಅವರು ಚಂದನವನದಲ್ಲಿ ನಿರ್ದೇಶಕರಾಗಿ ಕಾಲಿಡಲು ಸಜ್ಜಾಗಿದ್ದರು. ಸತೀಶ್ ನೀನಾಸಂ ಅವರ ‘ಅಶೋಕ ಬ್ಲೇಡ್’ ಚಿತ್ರವನ್ನು ಅವರು ನಿರ್ದೇಶನ ಮಾಡುವ ತಯಾರಿಯಲ್ಲಿದ್ದರು.
ಮುಂದಿನ ವಾರದಿಂದ ಈ ಚಿತ್ರದ ಚಿತ್ರೀಕರಣ ಆರಂಭಗೊಳ್ಳಬೇಕಿತ್ತು. ಶುಕ್ರವಾರವಷ್ಟೇ (ಜು.19ರಂದು) ಚಿತ್ರತಂಡದ ಜೊತೆ ವಿನೋದ್ ಮಾತನಾಡಿ ಬಂದಿದ್ದರು ಎನ್ನಲಾಗಿದೆ.
ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದ ಅವರು, ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದರು ಎನ್ನುವ ಮಾತುಗಳು ಕೇಳಿ ಬರುತ್ತಿದೆ.
ಅಂದಾಜು 2-3 ಕೋಟಿ ರೂ. ಸಾಲ: ?:
ಅಶೋಕ ಬ್ಲೇಡ್ ಚಿತ್ರಕ್ಕೆ ವಿನೋದ್ ಸೇರಿ ಇಬ್ಬರು ನಿರ್ಮಾಪಕರಾಗಿದ್ದು, ವೃದ್ದಿ ಕ್ರಿಯೇಷನ್ ಬ್ಯಾನರ್ ಅಡಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಚಿತ್ರಕ್ಕಾಗಿ ವಿನೋದ್ 2 ರಿಂದ 3 ಕೋಟಿ ರೂ. ಸಾಲ ಮಾಡಿಕೊಂಡಿದ್ದರು. ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸ್ನೇಹಿತರು ಹಾಗೂ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಎಷ್ಟು ಸಾಲ ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿಲ್ಲ. ಇದೀಗ ಅಹಜಸಾವು ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಲೇಔಟ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಡೆತ್‌ನೋಟ್‌ನಲ್ಲಿ ಏನಿದೆ?:
ನನ್ನ ಸಾವಿಗೆ ನಾನೇ ಕಾರಣರಲ್ಲ. ಬೇರೆ ಯಾರು ಕಾರಣರಲ್ಲ. ವೈಯಕ್ತಿಕ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖೀಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.