BBK11: ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ
Team Udayavani, Sep 17, 2024, 12:33 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ -11 (Bigg Boss Kannada-11) ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸಾಕಷ್ಟು ಕುತೂಹಲ ಹುಟ್ಟಿಸಿದ್ದ ನಿರೂಪಕ ಯಾರೆನ್ನುವ ಪ್ರಶ್ನೆಗೆ ಪ್ರೋಮೊ ಬಿಟ್ಟು ಆಯೋಜಕರು ಸಸ್ಪೆನ್ಸ್ ರಿವೀಲ್ ಮಾಡಿದ್ದಾರೆ.
ಕಳೆದ 10 ಸೀಸನ್‌ಗಳನ್ನು ನಿರೂಪಣೆ ಮಾಡುತ್ತಾ ಬಂದಿರುವ ಕಿಚ್ಚ ಸುದೀಪ್ (Kiccha sudeep) ಅವರೇ ಈ ಬಾರಿಯೂ ಬಿಗ್ ಬಾಸ್‌ಗೆ ʼಕಿಂಗ್ʼ ಆಗಲಿದ್ದಾರೆ. ಕಾರ್ಯಕ್ರಮದ ಪ್ರೋಮೊ ರಿಲೀಸ್ ಆದ ಬೆನ್ನಲ್ಲೇ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯೂ ಜೋರಾಗಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಪ್ರತಿಬಾರಿಯಂತೆ ಈ ಬಾರಿಯೂ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ. ನಾನಾ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳು ಈ ಪಟ್ಟಿಯಲ್ಲಿದ್ದಾರೆ. ಯಾರೆಲ್ಲಾ ಆ ಸಂಭಾವ್ಯ ಸ್ಪರ್ಧಿಗಳು ಇಲ್ಲಿದೆ ವಿವರ..
ಹುಲಿ ಕಾರ್ತಿಕ್: ʼಗಿಚ್ಚಿ ಗಿಲಿ ಗಿಲಿ-3ʼ ಮೂಲಕ ಪ್ರೇಕ್ಷಕರ ಮನೆಮನವನ್ನು ಗೆದ್ದು, ಕಾರ್ಯಕ್ರಮ ವಿಜೇತರಾಗಿರುವ ಹುಲಿ ಕಾರ್ತಿಕ್(Huli Kartik) ಅವರು ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಅವರಿಗೆ ಬಿಗ್ ಬಾಸ್ ಕಡೆಯಿಂದ ಆಫರ್ ಬಂದಿದೆ ಎಂದು ಹೇಳಲಾಗುತ್ತಿದೆ.
ಗೌರವ್ ಶೆಟ್ಟಿ: ʼಅಮೃತಾಂಜನ್ʼ ಸೇರಿದಂತೆ ಹತ್ತಾರು ಶಾರ್ಟ್ ಮೂವೀಸ್ ಹಾಗೂ ಕಾಮಿಡಿ ವಿಡಿಯೋಗಳಲ್ಲಿ ಕಾಣಿಸಿಕೊಂಡು, ಯೂಟ್ಯೂಬ್‌ನಲ್ಲಿ ಮಿಂಚಿರುವ ಗೌರವ್ ಶೆಟ್ಟಿ (Gaurav Shetty) ಅವರಿಗೆ ಬಿಗ್ ಬಾಸ್ ಮನೆಗೆ ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.
ಮಾನಸ ಸಂತು: ಬಿಗ್ ಬಾಸ್ ಸೀಸನ್ -10ನಲ್ಲಿ ಸ್ಪರ್ಧಿಯಾಗಿದ್ದ ಕಾಮಿಡಿಯನ್ ತುಕಾಲಿ ಸಂತು ಅವರ ಪತ್ನಿ ಮಾನಸ (Manasa Santu) ಈಗಾಗಲೇ ಪ್ರೇಕ್ಷಕರಿಗೆ ಪರಿಚಯವಿರುವ ಹೆಸರು. ತನ್ನ ಹಾಸ್ಯ ಪ್ರಜ್ಞೆಯಿಂದ ಗಮನ ಸೆಳೆದಿರುವ ಮಾನಸ, ಕಿರುತೆರೆ ಶೋಗಳಲ್ಲೂ ಕಾಣಿಸಿಕೊಂಡಿದ್ದಾರೆ.
ಕಳೆದ ಸೀಸನ್‌ನಲ್ಲಿ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಬಂದು ಗಮನ ಸೆಳೆದಿದ್ದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ಎನ್ನಲಾಗುತ್ತಿದೆ.
ನಟಿ ಪ್ರೇಮಾ: ಕನ್ನಡ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ನಮ್ಮೂರ ಮಂದಾರ ಹೂವೆ, ʼಚಂದ್ರಮುಖಿ ಪ್ರಾಣಸಖಿʼ , ʼಉಪೇಂದ್ರʼ ಅಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿ, ತೆಲುಗು, ಮಲಯಾಳಂನಲ್ಲೂ ಮಿಂಚಿದ್ದ ನಟಿ ಪ್ರೇಮಾ (Actress Prema), ಇತ್ತೀಚೆಗಿನ ವರ್ಷದಲ್ಲಿ ನಟನೆ ಬಿಟ್ಟು ಕಿರುತೆರೆ ಶೋಗಳಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ.
ಬಿಗ್ ಬಾಸ್ ಮನೆಗೆ ಪ್ರೇಮಾ ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ.
ಹರೀಶ್ ನಾಗರಾಜ್: ಪ್ರತಿಬಾರಿ ಬಿಗ್ ಬಾಸ್ ಮನೆಗೆ ನಾನಾ ಕ್ಷೇತ್ರದಿಂದ ಸ್ಪರ್ಧಿಗಳು ಬರುತ್ತಾರೆ. ಕಳೆದ ವರ್ಷ ಗೌರೀಶ್ ಅಕ್ಕಿ ಪತ್ರಿಕೋದ್ಯಮ ಕ್ಷೇತ್ರದಿಂದ ದೊಡ್ಮನೆಗೆ ಹೋಗಿದ್ದರು.
ಈ ಬಾರಿ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಕಳೆದ ಅನೇಕ ವರ್ಷದಿಂದ ನ್ಯೂಸ್ ಆ್ಯಂಕರ್ ಆಗಿ ಗುರುತಿಸಿಕೊಂಡಿರುವ ಹರೀಶ್ ನಾಗರಾಜ್ (Harish Nagaraj) ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಆಗುತ್ತಾರೆ ಎಂದು ಹೇಳಲಾಗುತ್ತಿದೆ.
ಐಶ್ವರ್ಯಾ ರಂಗರಾಜನ್: ʼಮಗಳು ಜಾನಕಿʼ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ಗಾಯಕಿ ಐಶ್ವರ್ಯಾ ರಂಗರಾಜನ್ (Aishwarya Rangarajan) ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಹೋಗುತ್ತಾರೆ ಎನ್ನಲಾಗುತ್ತಿದೆ.
ಅದ್ವಿತಿ ಶೆಟ್ಟಿ ಹಾಗೂ ಅಶ್ವಿತಿ ಶೆಟ್ಟಿ : ಕನ್ನಡ ಚಿತ್ರರಂಗದಲ್ಲಿ ನಟಿಯರಾಗಿ ಗುರುತಿಸಿಕೊಂಡಿರುವ ಕರಾವಳಿಯ ಅವಳಿ ಸಹೋದರಿಯರು ಅದ್ವಿತಿ ಶೆಟ್ಟಿ(Adhvithi Shetty) ಹಾಗೂ ಅಶ್ವಿತಿ ಶೆಟ್ಟಿ (ASHVITHI SHETTY) ಬಿಗ್ ಬಾಸ್ ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಮೂಲ್ಯ ಭಾರದ್ವಾಜ್: ಕಿರುತೆರೆ ನಟಿಯಾಗಿ ಗುರುತಿಸಿಕೊಂಡು, ‘ದಾಸ ಪುರಂದರ’ ಹಾಗೂ ‘ಬೃಂದಾವನ’ಧಾರಾವಾಹಿಗಳಲ್ಲಿ ನಟಿಸಿ ಮನೆ-ಮನದ ಪ್ರೀತಿ ಪ್ರೋತ್ಸಾಹವನ್ನು ಗಳಿಸಿರುವ ನಟಿ ಅಮೂಲ್ಯ ಭಾರದ್ವಾಜ್ (Amulya Bharadwaj) ಈ ಬಾರಿ ದೊಡ್ಡನೆ ಆಟಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.
ಭವ್ಯಾ ಗೌಡ: ಟಿಕ್ ಟಾಕ್ ನಲ್ಲಿ ಖ್ಯಾತಿಗಳಿಸಿ, ಕಿರುತೆರೆಯ ʼಗೀತಾʼ ಧಾರಾವಾಹಿಯಲ್ಲಿ ಅಭಿನಯಿಸಿ ಗಮನ ಸೆಳೆದಿರುವ ನಟಿ ಭವ್ಯಾ ಗೌಡ (Bhavya Gowda) ಅವರ ಹೆಸರು ಕೂಡ ಬಿಗ್ ಬಾಸ್ ಸ್ಪರ್ಧಿಯ ಲಿಸ್ಟ್‌ನಲ್ಲಿ ಬರುತ್ತಿದೆ.
ದೀಪಕ್ ಗೌಡ: ʼನಮ್ಮನೆ ಯುವರಾಣಿʼ ಸೀರಿಯಲ್‌ನಲ್ಲಿ ʼಅನಿಕೇತ್ʼ ಆಗಿ ಖ್ಯಾತಿ ಪಡೆದ ದೀಪಕ್ ಗೌಡ (Deepak Gowda) ಬಿಗ್ ಬಾಸ್ ಮನೆಗೆ ಎಂಟ್ರಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಕ್ಷಯ್ ನಾಯಕ್: ʼಒಲವಿನ ನಿಲ್ದಾಣʼ ಸೀರಿಯಲ್‌ನಲ್ಲಿ ಸಿದ್ಧಾಂತ್ ಪಾತ್ರದ ಮೂಲಕ ಗಮನ ಸೆಳೆದು, ʼಕಸ್ತೂರಿ ನಿವಾಸʼದಲ್ಲೂ ಮಿಂಚಿರುವ ಅಕ್ಷಯ್ ನಾಯಕ್ (Akshay Nayak) ಬಿಗ್ ಬಾಸ್ ಮನೆಗೆ ಬರ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಲೇಖಿ ಗೋಸ್ವಾಮಿ: ʼಲೇಖಿ ರೈಡರ್ʼ ಎಂಬ ಯೂಟ್ಯೂಬ್ ಚಾನೆಲ್ ನಿಂದ ಖ್ಯಾತಿ ಗಳಿಸಿರುವ ಲೇಖಿ ಗೋಸ್ವಾಮಿ(Lekhi Goswami) ಈ ಬಾರಿ ‘ಬಿಗ್ ಬಾಸ್ ʼ ಸ್ಪರ್ಧಿಯಾಗಿ ಎಂಟ್ರಿ ಆಗಲಿದ್ದಾರೆ ಎನ್ನಲಾಗುತ್ತಿದೆ.
ಇತರೆ ಹೆಸರುಗಳು.. ಇವರುಗಳಲ್ಲದೆ ರೀಲ್ಸ್ ರೇಷ್ಮಾ, ಚಂದ್ರಪ್ರಭ, ರಾಘವೇಂದ್ರ, ಜಾಹ್ನವಿ, ಶರ್ಮಿತಾ ಗೌಡ, ನಟ ತ್ರಿವಿಕ್ರಮ್, ನಟಿ ಸುಕೃತಾ ನಾಗ್, ನಟಿ ಗೌತಮಿ ಜಾಧವ್, ಶರತ್ ಕುಮಾರ್ ಹೆಸರುಗಳೂ ಇವೆ ಬಿಗ್ ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.
ಇದೇ ಸೆ.29ರಿಂದ ಬಿಗ್ ಬಾಸ್ ಗ್ರ್ಯಾಂಡ್ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.