Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್ ಮೇಲೆ ಕೇಸ್
ಖಾಸಗಿ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ
Team Udayavani, Sep 12, 2024, 10:27 AM IST
ಬೆಂಗಳೂರು: ಪ್ರೀತಿಸಿ ವಂಚಿಸಿದಲ್ಲದೆ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇರೆಗೆ ಕಿರುತೆರೆ ನಟ, ಯುಟ್ಯೂಬರ್ ವರುಣ್ ಆರಾಧ್ಯನ ವಿರುದ್ಧ ಯುವತಿಯೊಬ್ಬಳು ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
24 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ ವಿರುದ್ಧ ಪಶ್ಚಿಮ ವಿಭಾಗ ಸೈಬರ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆರೋಪ ಏನು?: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಮೂಲಕ 2019ರಲ್ಲಿ ಆರೋಪಿ ವರುಣ್ ಆರಾಧ್ಯ ಪರಿಚಯವಾಗಿದ್ದು, ಸ್ನೇಹಿತರಾಗಿ ನಂತರ ಪ್ರೀತಿಯಾಗಿ ಬದಲಾಗಿ 4 ವರ್ಷಗಳಿಂದ ಪ್ರೀತಿಯಲ್ಲಿದ್ದೆವು. 4-5 ತಿಂಗಳ ನಂತರ ನಾನು, ವರುಣ್ ನನ್ನು ಭೇಟಿಯಾದಾಗ ನನ್ನ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ತನ್ನ ಮೊಬೈಲ್ ನಲ್ಲಿ ತೆಗೆದುಕೊಂಡಿದ್ದ. ನಂತರ 2023ರ ಜುಲೈನಲ್ಲಿ ನಾನು ವರುಣ್ ಆರಾಧ್ಯ ಫೋನ್ ನೋಡಿದಾಗ, ಆತ ಮತ್ತೊಂದು ಹುಡುಗಿ ಜತೆಗಿದ್ದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಗಮನಿಸಿದ್ದೆ. ಅದನ್ನು ಪ್ರಶ್ನಿಸಿದಾಗ ಇದನ್ನು ಹೊರಗಡೆ ಎಲ್ಲೂ ಹೇಳಬಾರದು. ಒಂದು ವೇಳೆ ಹೇಳಿದರೆ ನಿನ್ನ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆಂದು ಬೆದರಿಕೆ ಹಾಕಿದ್ದಾನೆ.
2023ರ ಸೆ. 10 ರಂದು ವರುಣ್ ವಾಟ್ಸ್‌ಆ್ಯಪ್ ನಿಂದ ನನಗೆ ನನ್ನ ಖಾಸಗಿ, ಆಶ್ಲೀಲ ಫೋಟೋ ಕಳಿಸಿದ್ದ. ಅದನ್ನು ನೋಡಿ ಶಾಕ್ ಆಗಿ, ಈ ರೀತಿ ಯಾಕೆ ಕಳಿಸ್ತಿದ್ದೀಯಾ ಅಂತ ಕೇಳಿದ್ದೆ. ನನ್ನ ಹತ್ತಿರ ಇನ್ನೂ ಹೆಚ್ಚಿನ ಖಾಸಗಿ ಫೋಟೋ ಮತ್ತು ವಿಡಿಯೋಗಳಿವೆ. ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತೇನೆಂದು ನನಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಸೈಬರ್ ಕ್ರೈಂ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ
Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.