ಬಿಗ್‌ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
Team Udayavani, May 4, 2024, 11:56 AM IST
ಮುಂಬಯಿ: ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ) ಬಿಗ್ ಬಾಸ್ ಓಟಿಟಿ-2 ವಿಜೇತ, ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರವನ್ನು ದಾಖಲಿಸಿದೆ.
ಇತ್ತೀಚೆಗೆ ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಎಲ್ವಿಶ್ ಯಾದವ್ ರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದಾದ ಬಳಿಕ ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ದ ಪೊಲೀಸರು 1200 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು.
ಇದೀಗ ರೇವ್ ಪಾರ್ಟಿ ಆಯೋಜಿಸಲು ಎಲ್ವಿಶ್ ಯಾದವ್ ಹಾಗೂ ಇತರರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದರೆಂದು ಅಕ್ರಮ ಹಣ ವರ್ಗಾವಣೆ (PMLA) ಕಾಯ್ದೆಯ ಅಡಿಯಲ್ಲಿ ಆರೋಪಗಳನ್ನು ಮಾಡಿ ದೂರು ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ ಎಲ್ವಿಶ್ ಯಾದವ್ ಮತ್ತು ಇತರೆ ಕೆಲವರನ್ನು ತನಿಖೆಯ ಭಾಗವಾಗಿ ವಿಚಾರಣೆ ನಡೆಸಲಾಗುವುದು ಎಂದು ವರದಿ ತಿಳಿಸಿದೆ.
ವಿಚಾರಣೆಗೆ ಬರುವಂತೆ ಎಲ್ವಿಶ್ ಯಾದವ್ ಗೆ ಇ.ಡಿ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.