Renukaswamy: ಕಿರುತೆರೆಯ ಕ್ರೈಮ್ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?
Team Udayavani, Jun 29, 2024, 10:35 AM IST
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ(Renuka Swamy Case) ಪ್ರಕರಣದಲ್ಲಿ ನಟ ದರ್ಶನ್(Darshan Thoogudeepa) ಹಾಗೂ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ದರ್ಶನ್ ಆಪ್ತೆ ಪವಿತ್ರಾ ಗೌಡ (Pavithra Gowda) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ, ಶೆಡ್ ವೊಂದರಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ, ಆ ಬಳಿಕ ಭೀಕರವಾಗಿ ಹತ್ಯೆಗೈದು ಮೋರಿಯೊಂದಕ್ಕೆ ಎಸೆಯಲಾಗಿತ್ತು.
ಮೊದಲಿಗೆ ಇದೊಂದು ಹಣಕಾಸು ವಿಚಾರಕ್ಕೆ ನಡೆದ ಕೊಲೆ, ಇದನ್ನು ನಾವೇ ಮಾಡಿದ್ದೇವೆ ಎಂದು ಇಬ್ಬರು ಆರೋಪಿಗಳು ಠಾಣೆಗೆ ಬಂದು ಶರಣಾಗಿದ್ದರು. ಆ ಬಳಿಕ ತೀವ್ರ ವಿಚಾರಣೆ ನಡೆಸಿದ ಬಳಿಕ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ತಪ್ಪೋಪ್ಪಿಕೊಂಡಿದ್ದಾರೆ.
ಈ ಪ್ರಕರಣದ ಸಂಬಂಧ ತೀವ್ರ ವಿಚಾರಣೆ ನಡೆಸಿದ ಬಳಿಕ ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ 18 ಮಂದಿಯನ್ನು ಮೊದಲಿಗೆ ಬಂಧಿಸಲಾಗಿತ್ತು. ಇದರಲ್ಲಿ ಸದ್ಯ 14 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಪ್ರಕರಣ ದೇಶದಲ್ಲೇ ಸದ್ದು ಮಾಡುತ್ತಿರುವ ಬೆನ್ನಲ್ಲೇ ಇದೀಗ ಕಿರುತೆರೆಯಲ್ಲಿ ಈ ಘಟನೆಯನ್ನು ಆಧರಿಸಿಯೇ ಎಪಿಸೋಡ್ ವೊಂದರ ಪ್ರೋಮೊ ರಿಲೀಸ್ ಆಗಿ ಸದ್ದು ಮಾಡಿದೆ.
ಖಾಸಗಿ ವಾಹಿನಿಯ ‘ಶಾಂತಂ ಪಾಪಂ’ ಎನ್ನುವ ಕ್ರೈಮ್ ಕಥಾನಕದ ಕಾರ್ಯಕ್ರಮವೊಂದಲ್ಲಿ ರೇಣುಕಾಸ್ವಾಮಿ ಪ್ರಕರಣವನ್ನು ಹೋಲುವ ಎಪಿಸೋಡ್ ವೊಂದು ಪ್ರಸಾರ ಆಗಲಿದೆ.
ಈ ಡೇಡ್ ಡೆವಿಲ್ ದೇವದಾಸ್ ಎನ್ನುವ ಎಪಿಸೋಡ್ ಇದಾಗಿದ್ದು, ಇದರಲ್ಲಿ ಒಬ್ಬ ಶ್ರೀಮಂತನನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗುತ್ತದೆ. ಪ್ರಭಾವಿಗಳ ಒತ್ತಡ ಕೇಳಿಬಂದರೂ ಪೊಲೀಸರು ಆತನನ್ನು ಬಂಧಿಸುತ್ತಾರೆ. ಈತನಿಗೆ ಸಂಸಾರಯಿದ್ದರೂ ಈತ ಒಂದು ಹೆಣ್ಣಿನ ಜೊತೆ ಸಂಬಂಧವನ್ನಿಟ್ಟುಕೊಂಡಿರುತ್ತಾನೆ. ಆ ಹೆಣ್ಣಿಗೆ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಮೆಸೇಜ್ ಗಳನ್ನು ಮಾಡುತ್ತಾನೆ. ಇದನ್ನರಿತ ಶ್ರೀಮಂತ ವ್ಯಕ್ತಿ ತನ್ನ ಪ್ರಭಾವವನ್ನು ಬಳಸಿಕೊಂಡು ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ತನ್ನ ಸಹಚರರೊಂದಿಗೆ ಸೇರಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡುವ ದೃಶ್ಯವನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಇಲ್ಲಿ ಗರ್ಭಿಣಿ ಪತ್ನಿ ನೋವು, ಅಕ್ರಮ ಸಂಬಂಧದ ಹಿನ್ನೆಲೆ ಮುಂತಾದ ಸನ್ನಿವೇಶವನ್ನು ತೋರಿದಸಲಾಗಿದ್ದು, ಇದು ರೇಣುಕಾಸ್ವಾಮಿ ಕೇಸ್ ಎಂದು ಅನೇಕ ವೀಕ್ಷಕರು ಪ್ರೋಮೊ ಕೆಳಗೆ ಕಾಮೆಂಟ್ ಮಾಡಿದ್ದಾರೆ.
ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ಆಧಾರಿಸಿ ‘ಶಾಂತಂ ಪಾಪಂ’ ನಲ್ಲಿ ಸಿರೀಸ್ ರೀತಿ ಪ್ರಸಾರ ಮಾಡಲಾಗುತ್ತದೆ. ಸೋಮ – ಶುಕ್ರ ರಾತ್ರಿ 10:30ಕ್ಕೆ ಕಾರ್ಯಕ್ರಮ ಪ್ರಸಾರವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.