Serial; ಕಿರುತೆರೆಯ ಸೂರ್ಯವಂಶ: ಅನಿರುದ್ಧ ಹೊಸ ಧಾರವಾಹಿ ಇಂದಿನಿಂದ
Team Udayavani, Mar 11, 2024, 11:56 AM IST
ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ “ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿದ್ದು ನಿಮಗೆ ಗೊತ್ತಿರಬಹುದು. ಈಗ ಅದೇ ಹೆಸರಿನಲ್ಲಿ “ಸೂರ್ಯವಂಶ’ ಧಾರಾವಾಹಿ ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ಧವಾಗಿದೆ.
ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್. ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ ಮಾಡುತ್ತಿದ್ದಾರೆ.
ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ “ಸೂರ್ಯವಂಶ’ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಬಯಕೆ. ವಂಶದ ಕುಡಿ ಇಪ್ಪತ್ತು ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದ ಚಿಂತೆಗೆ ಕಾರಣವಾಗಿರುತ್ತದೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಆ ಹುಡುಗ ಸಿಗುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವುದರಿಂದ ಆತನು ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ. ನಂತರ ಕರ್ಣನು ಸೂರ್ಯವಂಶಕ್ಕೆ ಕಾಲಿಟ್ಟ ನಂತರ ಎಲ್ಲಾ ಕಡೆಗಳಿಂದಲೂ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅದೇ ಊರಿನ ಕಾಳಿಂಗ ಆಟಾಟೋಪವನ್ನು ಬಗ್ಗು ಬಡಿಯಲು ಕರ್ಣನಿಂದ ಮಾತ್ರ ಸಾಧ್ಯ ಎಂದು ಊರ ಜನರು ನಂಬಿರುತ್ತಾರೆ.
ಇದರ ಮಧ್ಯೆ ನಾಯಕಿ ಸುರಭಿ ಆಗಮನವಾಗುತ್ತದೆ. ಇದರಿಂದ ಕಥೆ ಹೊಸ ರೂಪ ಪಡೆದುಕೊಳ್ಳುತ್ತದೆ. ಮುಂದೆ ಕರ್ಣನೇ ಸೂರ್ಯವರ್ಧನ ಎನ್ನುವ ವಿಷಯ ತಿಳಿಯುತ್ತದೆ. ಅದು ಹೇಗೆ, ಯಾರಿಂದ, ಯಾವಾಗ ಎಂಬ ಸನ್ನಿವೇಶಗಳೊಂದಿಗೆ ರೋಚಕ ತಿರುವುಗಳು ಬರುತ್ತದೆ. ಪ್ರತಿ ಕಂತುಗಳು ಶ್ರೀಮಂತವಾಗಿ ಮೂಡಿಬಂದಿರುವುದು ವಿಶೇಷ.
ನಾಯಕನಾಗಿ ಅನಿರುದ್ಧ್ ಜಟ್ಕರ್, ನಾಯಕಿಯಾಗಿ ಸುರಭಿ. ತಾತನಾಗಿ ಸುಂದರರಾಜ್, ಖಳನಾಗಿ ದಿ.ಉದಯ್ ಕುಮಾರ್ ಪುತ್ರ ವಿಕ್ರಂ ಉದಯಕುಮಾರ್. ಉಳಿದಂತೆ ರವಿ ಭಟ್, ಸುಂದರ ಶ್ರೀ, ಲೋಕೇಶ್ ಬಸವಟ್ಟಿ, ಪುಷ್ಪಾಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರು ನಟಿಸುತ್ತಿದ್ದಾರೆ. ಮಾರ್ಚ್ 11 ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.