Drone Pratap: ಫಿನಾಲೆ ದಿನಗಣನೆ ಇರುವಾಗಲೇ ಮನೆಯಿಂದ ಡ್ರೋನ್ ಪ್ರತಾಪ್ ಔಟ್?
Team Udayavani, Jan 24, 2024, 7:44 AM IST
ಬೆಂಗಳೂರು: ಬಿಗ್ ಬಾಸ್ ಸೀಸನ್ 10 ಫಿನಾಲೆಗೆ ದಿನಗಣನೆ ಶುರುವಾಗಿದೆ. ಫಿನಾಲೆ ಸ್ಪರ್ಧೆಗಳಲ್ಲಿ ಯಾರು ಟ್ರೋಫಿ ಗೆಲ್ಲುತ್ತಾರೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ದಿನ ಸಮೀಪಿಸುತ್ತಿದ್ದಂತೆ ಹೆಚ್ಚಾಗುತ್ತಿದೆ.
ಈ ಬಾರಿ ದೊಡ್ಮನೆ ಆಟ ನೂರು ದಿನಕ್ಕೂ ಹೆಚ್ಚು ನಡೆದಿದೆ. ಅಂತಿಮವಾಗಿ ಆರು ಜನ ಮನೆಯಲ್ಲಿ ಉಳಿದಿದ್ದಾರೆ. ವಿನಯ್, ಸಂಗೀತಾ, ಕಾರ್ತಿಕ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಹಾಗೂ ಡ್ರೋನ್ ಪ್ರತಾಪ್ ಬಿಗ್ ಬಾಸ್ ಟ್ರೋಫಿ ಗೆಲ್ಲುವ ಹಾದಿಯಲ್ಲಿದ್ದಾರೆ.
ಬಿಗ್ ಬಾಸ್ ಆಟ ಅಂತಿಮ ಘಟ್ಟದಲ್ಲಿದ್ದು, ಮನೆಯಲ್ಲಿನ ಸ್ಪರ್ಧಿಗಳು ಫಿನಾಲೆ ವೇದಿಕೆ ಹತ್ತಲು ಕಾಯುತ್ತಿದ್ದಾರೆ. ಈ ನಡುವೆ ಆರು ಜನ ಸ್ಪರ್ಧೆಯಲ್ಲಿ ಒಬ್ಬರು ಎಲಿಮಿನೇಟ್ ಆಗಿದ್ದಾರೆ ಎನ್ನಲಾಗುತ್ತಿದೆ.
ಬಿಗ್ ಬಾಸ್ ಮನೆಯಲ್ಲಿ ತನ್ನ ನಿರ್ಧಾರ ಹಾಗೂ ವ್ಯಕ್ತಿತ್ವದಿಂದ ಗಮನ ಸೆಳೆದು ಅಪಾರ ಪ್ರೇಕ್ಷಕರ ಬೆಂಬಲ ಪಡೆದುಕೊಂಡಿದ್ದ ಡ್ರೋನ್ ಪ್ರತಾಪ್ ಫಿನಾಲೆಗೆ ದಿನಗಣನೆ ಇರುವಾಗಲೇ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ಹರಿದಾಡುತ್ತಿದೆ.
ಕಿಚ್ಚ ಸುದೀಪ್ ಕಳೆದ ವಾರದ ವೀಕೆಂಡ್ ನಲ್ಲಿ ಆರು ಜನರಲ್ಲಿ ಒಬ್ಬರು ಎಲಿಮಿನೇಟ್ ಆಗುತ್ತಾರೆ ಎಂದಿದ್ದರು. ಹೇಗೆ ಆಗ್ತಾರೆ, ಯಾವಾಗ ಆಗ್ತಾರೆ ಎನ್ನುವುದನ್ನು ಕುತೂಹಲವಾಗಿಟ್ಟಿದ್ದರು. ಇದೀಗ ಡ್ರೋನ್ ಪ್ರತಾಪ್ ಎಲಿಮಿನೇಟ್ ವಿಚಾರ ಹರಿದಾಡಿದ್ದು, ಕಿಚ್ಚ ಸುದೀಪ್ ಹೇಳಿದಂತೆ ಒಬ್ಬರು ಎಲಿಮಿನೇಟ್ ಆಗಿರಬಹುದು ಎನ್ನಲಾಗುತ್ತಿದೆ.
ಆದರೆ ಕೆಲವರು ಇದು ಫ್ರಾಂಕ್ ಮಾಡಲು ಮಾಡಿರಬಹುದು ಹೇಳುತ್ತಿದ್ದಾರೆ. ಡ್ರೋನ್ ಪ್ರತಾಪ್ ಹೊರಗೆ ಹೋಗಿದ್ದಾರೋ ಇಲ್ವೋ ಎನ್ನುವುದರ ಬಗ್ಗೆ ಯಾವ ಸ್ಪಷ್ಟನೆ ಇದುವರೆಗೆ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.