Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು
Team Udayavani, Jul 25, 2024, 9:17 AM IST
ಬೆಂಗಳೂರು: ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಕಿರುತೆರೆ ನಟ ಸನ್ನಿ ಮಹಿಪಾಲ್ ಅವರನ್ನು ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸರು ಬುಧವಾರ ಬಂಧಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಆರೋಪಿಗೆ ನೋಟಿಸ್ ನೀಡಿ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿ ಕಳುಹಿಸಲಾಗಿದೆ. ಕಿರುತೆರೆ ನಟ ಸನ್ನಿ ಮಹಿಪಾಲ್ ಮತ್ತು ಪತ್ನಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಜನವರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಬ್ಬರಿಗೂ ಪರಿಚಯ ವಾಗಿದ್ದು, ಬಳಿಕ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರೂ ಆತ್ಮೀಯವಾಗಿದ್ದರು. ಈ ವೇಳೆ ಸನ್ನಿ ಮಹಿಪಾಲ್ ಮದುವೆ
ಯಾಗುವುದಾಗಿ ನಂಬಿಸಿ ಆಕೆ ಜತೆಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದರು. ಪರಿಣಾಮ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ಬಳಿಕ ಪರಸ್ಪರ ಒಪ್ಪಿಗೆ ಮೇರೆಗೆ ಜೂನ್ 15ರಂದು ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು ಎಂದು ಹೇಳಲಾಗಿದೆ.
ಮನೆಯವರಿಗೆ ಮದುವೆ ವಿಚಾರ ತಿಳಿಸಲು ಸಮಯಬೇಕು. ಅದುವರೆಗೂ ಇಬ್ಬರು ಸ್ನೇಹಿತರಾಗಿಯೇ ಇರೋಣ ಎಂದು ಮಹಿಪಾಲ್ ಹೇಳಿದ್ದರು. ಅದರಂತೆ ಇಬ್ಬರೂ ಇದ್ದರು. ಈ ನಡುವೆ ಮಹಿಪಾಲ್ ಬೇರೊಂದು ಯುವತಿ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ವಿಚಾರ ತಿಳಿದು ಪ್ರಶ್ನಿಸಿದ ಯುವತಿ ಮೇಲೆ ಆರೋಪಿ ಹಲ್ಲೆ ನಡೆಸಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
BBK11: ಅತಿರೇಕಕ್ಕೆ ತಿರುಗಿದ ಬಿಗ್ ಬಾಸ್ ಟಾಸ್ಕ್.. ರಜತ್ – ಮಂಜು ನಡುವೆ ಹೈಡ್ರಾಮಾ
Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.