Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Team Udayavani, Sep 16, 2024, 12:54 PM IST
ಹೈದರಾಬಾದ್: ಟಾಲಿವುಡ್ ಕಪಲ್ ಸಿದ್ಧಾರ್ಥ್ (Siddharth) ಮತ್ತು ನಟಿ ಅದಿತಿ ರಾವ್ ಹೈದರಿ (Aditi Rao Hydari) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸೋಮವಾರ(ಸೆ.16ರಂದು) ದೇವಸ್ಥಾನವೊಂದರಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬ್ಯೂಟಿಫುಲ್ ಫೋಟೋಸ್ ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ದಕ್ಷಿಣ ಭಾರತದ ವಿವಾಹ ಸಮಾರಂಭದಲ್ಲಿ ನವಜೋಡಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. 400 ವರ್ಷಗಳ ಹಳೆಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿಯೇ ವಿವಾಹ ಸಮಾರಂಭ ನೆರವೇರಿದೆ.
“ನೀವು ನನ್ನ ಸೂರ್ಯ, ನನ್ನ ಚಂದ್ರ ಮತ್ತು ನನ್ನ ಎಲ್ಲಾ ನಕ್ಷತ್ರಗಳು” ಎಂದು ಮದುವೆ ಫೋಟೋಗಳನ್ನು ದಂಪತಿ ಹಂಚಿಕೊಂಡಿದೆ.
ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ 2021 ರಲ್ಲಿ ಬಂದ ‘ಮಹಾ ಸಮುದ್ರಂʼ ಸಿನಿಮಾದಲ್ಲಿ ಜೊತೆಯಾಗಿ ಸಿನಿಮಾ ಮಾಡಿದ್ದರು. ಆ ಬಳಿಕ ಅವರಿಬ್ಬರು ಆತ್ಮೀಯವಾಗಿ ನಾನಾ ಕಡೆ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಹಂಚಿಕೊಳ್ಳುತ್ತಿದ್ದರು.
View this post on Instagram
ಇಬ್ಬರು ಡೇಟ್ ಮಾಡುತ್ತಿದ್ದರೂ, ಅದನ್ನು ಎಲ್ಲೂ ಕೂಡ ಬಹಿರಂಗವಾಗಿ ಹೇಳಿರಲಿಲ್ಲ. ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಇಬ್ಬರು ಎಂಗೇಜ್ ಮೆಂಟ್ ಫೋಟೋವನ್ನು ಹಂಚಿಕೊಂಡಿದ್ದರು.
ಸಿದ್ಧಾರ್ಥ್ ಹಾಗೂ ಅದಿತಿ ಇಬ್ಬರಿಗೂ ಇದು ಎರಡನೇ ಮದುವೆ. ಅದಿತಿ ಈ ಹಿಂದೆ ಸತ್ಯದೀಪ್ ಮಿಶ್ರಾ ಎನ್ನುವವರನ್ನು ಮದುವೆ ಆಗಿದ್ದರು. ಸಿದ್ಧಾರ್ಥ್ ಮೇಘನಾ ನಾರಾಯಣ್ ಎನ್ನುವಾಕೆಯೊಂದಿಗೆ ಮದುವೆ ಆಗಿದ್ದರು.
ನವ ದಂಪತಿಗೆ ನಟ ದುಲ್ಕರ್ ಸಲ್ಮಾನ್,ನಟಿಯರಾದ ಭೂಮಿ ಪೆಡ್ನೇಕರ್, ಅನನ್ಯಾ ಪಾಂಡೆ, ಸೋನಾಕ್ಷಿ ಸಿನ್ಹಾ, ಅಥಿಯಾ ಶೆಟ್ಟಿ ಸೇರಿದಂತೆ ಹಲವರು ಶುಭಾಶಯವನ್ನು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.