Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ

Team Udayavani, Nov 10, 2024, 1:22 PM IST

Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ

ಹೈದರಾಬಾದ್:‌ ಟಾಲಿವುಡ್‌ ನಟ ವಿಷ್ಣು ಮಂಚು (Vishnu Manchu) ಅವರ ಬಿಗ್‌ ಬಜೆಟ್‌, ಪ್ಯಾನ್‌ ಇಂಡಿಯಾ ʼಕಣ್ಣಪ್ಪʼ (Kannappa) ಸಿನಿಮಾದ ಬಗ್ಗೆ ಬಹು ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.

ಕಳೆದ ಕೆಲ ವರ್ಷಗಳಿಂದ ಸಿನಿಮಾಕ್ಕಾಗಿ ಚಿತ್ರತಂಡ ಸಾಕಷ್ಟು ಪರಿಶ್ರಮವನ್ನು ಹಾಕಿದೆ. ʼಕಣ್ಣಪ್ಪʼ ಚಿತ್ರದ ಟೀಸರ್‌ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವದಲ್ಲಿ ರಿಲೀಸ್‌ ಆಗಿ, ಆ ಬಳಿಕ ಭಾರತದಲ್ಲಿ ರಿಲೀಸ್‌ ಆಗಿತ್ತು.

ಕಿರುತೆರೆಯಲ್ಲಿ ʼಮಹಾಭಾರತʼವನ್ನು ನಿರ್ದೇಶನ ಮಾಡಿರುವ ಮುಕೇಶ್‌ ಕುಮಾರ್‌ ʼಕಣ್ಣಪ್ಪʼವನ್ನು ನಿರ್ದೇಶನ ಮಾಡಲಿದ್ದಾರೆ.

ಸಿನಿಮಾದ ತಯಾರಿಯ ಕೆಲಸ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರೀಕರಣ ಸಂದರ್ಭದಲ್ಲಿನ ಪ್ರಭಾಸ್‌ ಅವರ ಪಾತ್ರದ ಫೋಟೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ವರ್ಷಗಳಿಂದ ಯಾವುದೇ ಫೋಟೋ ಹಾಗೂ ವಿಡಿಯೋಗಳು ಸೆಟ್‌ ನಿಂದ ಲೀಕ್‌ ಆಗದೆ ಅದನ್ನು ರಹಸ್ಯವಾಗಿಟ್ಟ ʼಕಣ್ಣಪ್ಪʼ ಚಿತ್ರತಂಡಕ್ಕೆ ಕ್ಯಾರೆಕ್ಟರ್‌ ವೊಂದರ ಫೋಟೋ ಲೀಕ್‌ ಆಗಿದ್ದು, ಭಾರೀ ಬೇಸರ ತರಿಸಿದೆ.

ಇದಕ್ಕಾಗಿ ಚಿತ್ರತಂಡ ಲೀಕ್‌ ಮಾಡಿದವರ ಮೇಲೆ ಕ್ರಮಕೈಗೊಳ್ಳಲು ಮುಂದಾಗಿದೆ. ಫೋಟೋ ಲೀಕ್‌ ಮಾಡಿದವರನ್ನು ಪತ್ತೆ ಮಾಡಿಕೊಟ್ಟವರಿಗೆ 5 ಲಕ್ಷ ರೂ. ನಗದನ್ನು ಘೋಷಿಸಿದೆ.

ಕಳೆದ ಎಂಟು ವರ್ಷಗಳಿಂದ, ನಾವು ʼಕಣ್ಣಪ್ಪʼನಿಗಾಗಿ ಸಾಕಷ್ಟು ಪರಿಶ್ರಮ ಹಾಕಿದ್ದೇವೆ. ಎರಡು ವರ್ಷಗಳ ಪ್ರೊಡಕ್ಷನ್‌ ಕೆಲಸದ ಬಳಿಕ ಸಿನಿಮಾವನ್ನು ಉತ್ತಮ ಗುಣಮಟ್ಟದೊಂದಿಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಇತ್ತೀಚೆಗೆ ಯಾರೋ ಒಬ್ಬರು ಸಿನಿಮಾದ ಕೆಲಸವಾಗುತ್ತಿರುವ ಫೋಟೋವನ್ನು ಚಿತ್ರತಂಡದ ಅನುಮತಿ ಇಲ್ಲದೆ ತೆಗೆದು ಸೋರಿಕೆ ಮಾಡಿದ್ದಾರೆ. ಇದು ನಮಗೆ ತುಂಬಾ ಬೇಸರವನ್ನು ತಂದಿದೆ.

ಈ ಸೋರಿಕೆ ಹೇಗೆ ಸಂಭವಿಸಿದೆ ಎಂಬುದನ್ನು ಪತ್ತೆ ಹಚ್ಚಬೇಕಿದೆ. ಇದಕ್ಕೆ ಜವಾಬ್ದಾರರಾಗಿರುವವರನ್ನು ಪತ್ತೆ ಹಚ್ಚಲು ಪೊಲೀಸ್ ದೂರು ಸಲ್ಲಿಸುವ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತೇವೆ. ಈ ಸೋರಿಕೆಯಾದ ಚಿತ್ರ/ತುಣುಕುಗಳನ್ನು ಹಂಚಿಕೊಳ್ಳದಂತೆ ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಏಕೆಂದರೆ ಹಾಗೆ ಮಾಡುವುದರಿಂದ ಕಾನೂನು ಕ್ರಮಕ್ಕೆ ವ್ಯಕ್ತಿಗಳು ಹೊಣೆಗಾರರಾಗುತ್ತಾರೆ. ಈ ಸೋರಿಕೆಯ ಮೂಲವನ್ನು ಪತ್ತೆಹಚ್ಚಲು ನಮಗೆ ಸಹಾಯ ಮಾಡುವವರಿಗೆ ಈ ಮಾಹಿತಿಯನ್ನು ಹೊಂದಿರುವ ಯಾರಾದರೂ ಇದ್ದರೆ ಅವರಿಗೆ 5 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ತಿಳಿಸಿದೆ.

5 ಲಕ್ಷ ರೂ. ಘೋಷಣೆ ಬಳಿಕ ಆರೋಪಿ ಪತ್ತೆ.. ಚಿತ್ರತಂಡ ಫೋಟೋ ಲೀಕ್‌ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿದವರಿಗೆ 5 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದ ಬಳಿಕ ವ್ಯಕ್ತಿಯೊಬ್ಬ ಇದನ್ನು ತಾನೇ ಮಾಡಿದ್ದು ಎಂದು ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ್ದಾನೆ.

ವರ್ಕ್‌ಫ್ಲೋ ಎನ್ನುವ ಕಂಪೆನಿಯಲ್ಲಿ ಕೆಲಸ ಮಾಡುವ ವಿನಯ್ ಬೊಡ್ಡು ಎಂಬಾತ ಇದನ್ನು ಲೀಕ್‌ ಮಾಡಿ ಇತರೆ ಸ್ನೇಹಿತರಿಗೆ ಹಂಚಿದ್ದಾನೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ.

ಪ್ರಸ್ತುತ ಈ ಸಮಗ್ರ ತನಿಖೆ ನಡೆಯುತ್ತಿದೆ. ಪೊಲೀಸರು ಎಲ್ಲಾ ಸೂಕ್ತ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ದಕ್ಷಿಣ ಭಾರತದ ಖ್ಯಾತ ಕಲಾವಿದರಾಗಿರುವ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ಮೋಹನ್ ಬಾಬು, ಶರತ್‌ಕುಮಾರ್, ಮುಖೇಶ್ ರಿಷಿ, ಬ್ರಹ್ಮಾನಂದಂ, ಮಧು ಮತ್ತು ಪ್ರೀತಿ ಮುಕುಂದನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದೇ ಡಿಸೆಂಬರ್‌ ನಲ್ಲಿ ಸಿನಿಮಾ ತೆರೆಗೆ ಬರಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.