ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Team Udayavani, Dec 25, 2024, 6:45 PM IST

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಹೈದರಾಬಾದ್: ʼಪುಷ್ಪ-2ʼ (Pushpa 2) ಚಿತ್ರದ ಪ್ರಿಮಿಯರ್‌ ಶೋ ಪ್ರದರ್ಶನದ ವೇಳೆ ಕಾಲ್ತುಳಿತ (Stampede Case) ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್‌ (Allu Arjun) ಮತ್ತು ನಿರ್ಮಾಪಕರು 2 ಕೋಟಿ ರೂ. ಪರಿಹಾರವನ್ನು ನೀಡಿದ್ದಾರೆ.

ಡಿ.4 ರಂದು ʼಪುಷ್ಪ-2ʼ ಸಿನಿಮಾದ ಪ್ರಿಮಿಯರ್‌ ಶೋವನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಅಲ್ಲು ಅರ್ಜುನ್‌ ಥಿಯೇಟರ್‌ಗೆ ನೀಡಿದ್ದರು. ಅವರ ಭೇಟಿ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಗಿತ್ತು. ಪರಿಣಾಮ 34 ವರ್ಷ ಮಹಿಳೆ ರೇವತಿ ಉಸಿರುಗಟ್ಟಿ ಮೃತಪಟ್ಟಿದ್ದರು. ಅವರ ಮಗ ಶ್ರೀತೇಜ್‌ ಗಂಭೀರ ಗಾಯಗೊಂಡಿದ್ದರು.

ಈ ಪ್ರಕರಣದಿಂದಾಗಿ ಅಲ್ಲು ಅರ್ಜುನ್‌ ಅವರ ಮೇಲೆ ಎಫ್‌ ಐಆರ್‌ ದಾಖಲಾಗಿತ್ತು. ಇದಾದ ನಂತರ ಪೊಲೀಸರು ಅವರನ್ನು ಬಂಧಿಸಿದ್ದರು. ಮಧ್ಯಂತರ ಜಾಮೀನು ಪಡೆದು ಅಲ್ಲು ಅರ್ಜುನ್‌ ಜೈಲಿನಿಂದ ಆಚೆ ಬಂದಿದ್ದರು. ಇತ್ತೀಚೆಗೆ ಮತ್ತೆ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬುಧವಾರ (ಡಿ.25 ರಂದು) ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರು ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷ ದಿಲ್ ರಾಜು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೇವತಿ ಅವರ ಪುತ್ರ ಶ್ರೀತೇಜ್‌ ಅವರಿಗೆ ಚೆಕ್‌ ಹಸ್ತಾಂತರ ಮಾಡಿದ್ದಾರೆ.

ಅಲ್ಲು ಅರ್ಜುನ್ 1 ಕೋಟಿ ನೀಡಿದ್ದು, ಮೈತ್ರಿ ಮೂವೀಸ್ ಮತ್ತು ನಿರ್ದೇಶಕ ಸುಕುಮಾರ್ ತಲಾ 50 ಲಕ್ಷ ರೂ.ವನ್ನು ನೀಡಿದ್ದಾರೆ.

ಶ್ರೀತೇಜ್‌ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಅವನು ವೆಂಟಿಲೇಟರ್ ನಲ್ಲಿದ್ದ. ಈಗ ವೆಂಟಿಲೇಟರ್‌ ಇಲ್ಲದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಅವನು ಚೇತರಿಸಿಕೊಳ್ಳುತ್ತಾನೆ ಎಂದು ವೈದ್ಯರು ಹೇಳಿದ್ದಾರೆ ಎಂದು ಅಲ್ಲು ಅವರ ತಂದೆ ಹೇಳಿದ್ದಾರೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.