Amaran: ರಿಲೀಸ್ ಆದ ಮೂರೇ ದಿನದಲ್ಲಿ ʼಅಮರನ್ʼ ಸಿನಿಮಾದ ಹೆಚ್‌ಡಿ ಪ್ರಿಂಟ್ ಲೀಕ್
Team Udayavani, Nov 4, 2024, 4:02 PM IST
ಚೆನ್ನೈ: ಕಾಲಿವುಡ್‌ನಲ್ಲಿ ಕಳೆದ ವಾರ ರಿಲೀಸ್ ಆಗಿರುವ ʼಅಮರನ್ʼ (Amaran) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತನ್ನ ಡ್ರೀಮ್ ರನ್ ಮುಂದುವರೆಸಿದೆ. ದಿನಕಳೆಯುತ್ತಿದ್ದಂತೆ ಸಿನಿಮಾದ ಮೇಲಿನ ಪಾಸಿಟಿವ್ ರೆಸ್ಪಾನ್ಸ್ ಹೆಚ್ಚಾಗುತ್ತಿದೆ.
ಶಿವಕಾರ್ತಿಕೇಯನ್ (Sivakarthikeyan), ಸಾಯಿ ಪಲ್ಲವಿ (Sai Pallavi) ಮುಖ್ಯ ಭೂಮಿಕೆಯ ʼಅಮರನ್ʼ ಸಿನಿಮಾ ನೋಡಿ ಪ್ರೇಕ್ಷಕರು ಕಣ್ಣೀರಿಟ್ಟಿದ್ದಾರೆ. ನೈಜ ಕಥೆಯನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ತಂದಿದ್ದಾರೆ.
ಮೇಜರ್ ಮುಕುಂದ್ ವರದರಾಜನ್ ಅವರ ಕೆಚ್ಚೆದೆಯ ಸಾಹಸಗಾಥೆಯಲ್ಲಿ ಶಿವಕಾರ್ತಿಕೇಯನ್ ಯೋಧನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇದರೊಂದಿಗೆ ಸಾಯಿಪಲ್ಲವಿ ಅವರ ಅಭಿನಯ ಪ್ರೇಕ್ಷಕರ ಮನಗೆದ್ದಿದೆ.
ಸಿನಿಮಾದ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೇಳಿ ಬರುತ್ತಿರುವಾಗಲೇ ʼಅಮರನ್ʼ ಹೆಚ್‌ಡಿ ಕ್ವಾಲಿಟಿಯಲ್ಲಿ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ.
ʼಅಮರನ್ʼ ಚಿತ್ರಮಂದಿರದಲ್ಲಿ ರಿಲೀಸ್ ಆದ ಕೆಲವೇ ದಿನಗಳಲ್ಲಿ ಪೈರೇಟೆಡ್ ಹೈ-ಡೆಫಿನಿಷನ್ ಪ್ರತಿಗಳು ಹಲವಾರು ಸೈಟ್‌ಗಳಲ್ಲಿ ಲೀಕ್ ಆಗಿದೆ. ಮೂವಿ ರೂಲ್ಸ್, ತಮಿಳು ರಾಕರ್ಸ್1337x ಮತ್ತು ಹಲವಾರು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ.
ಸಿನಿಮಾದ ಆನ್‌ಲೈನ್ ಸೋರಿಕೆಯಿಂದ ಬಾಕ್ಸ್ ಆಫೀಸ್ ಗಳಿಕೆಗೆ ಯಾವ ರೀತಿಯ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
ರಾಜಕುಮಾರ್ ಪೆರಿಯಸಾಮಿ ನಿರ್ದೇಶನದ ಸಿನಿಮಾದಲ್ಲಿ ಸಾಯಿ ಪಲ್ಲವಿ, ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ನಟಿಸಿದ್ದಾರೆ.
ʼಅಮರನ್ʼ ಶಿವ ಆರೂರ್ ಮತ್ತು ರಾಹುಲ್ ಸಿಂಗ್ ಅವರ ʼಇಂಡಿಯಾಸ್ ಮೋಸ್ಟ್ ಫಿಯರ್ ಲೆಸ್: ಟ್ರೂ ಸ್ಟೋರೀಸ್ ಆಫ್ ಮಾಡರ್ನ್ ಮಿಲಿಟರಿʼ ಕೃತಿಯ ರೂಪಾಂತರವಾಗಿದೆ. ಇದು ಮೇಜರ್ ವರದರಾಜನ್ ಅವರ ಶೌರ್ಯದ ಕಥೆಯನ್ನೊಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್ ನಿಧನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.