ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು
Team Udayavani, May 12, 2024, 11:09 AM IST
ಆಂಧ್ರಪ್ರದೇಶ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶದ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರ ನಿವಾಸದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆದಿದ್ದು, ಇದರಿಂದ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗೆ ಕಾರಣವಾಗಿದೆ.
ಶಾಸಕ ರೆಡ್ಡಿ ಅವರು ಶನಿವಾರ ಸಭೆಗೆ ಪೂರ್ವಾನುಮತಿ ಇಲ್ಲದೆ ಅಲ್ಲು ಅರ್ಜುನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಆಂಧ್ರಪ್ರದೇಶದಲ್ಲಿ ಸೋಮವಾರ (ಮೇ 13) ನಡೆಯಲಿರುವ ಮತದಾನಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ.
ಆಂಧ್ರಪ್ರದೇಶದ ನಂದ್ಯಾಲ ಗ್ರಾಮಾಂತರ ಕ್ಷೇತ್ರದ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿರುವ ತಹಸೀಲ್ದಾರ್ ಪಿ ರಾಮಚಂದ್ರರಾವ್ ಅವರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ರೆಡ್ಡಿ ಅವರ ನಿವಾಸಕ್ಕೆ ಅಲ್ಲು ಅರ್ಜುನ್ ಅವರು ಭೇಟಿ ನೀಡಿದಾಗ ಅಪಾರ ಜನರು ನೆರೆದಿದ್ದರು. ಈ ವೇಳೆ ಅಲ್ಲು ಅರ್ಜುನ್, ತನ್ನ ಸ್ನೇಹಿತನಿಗೆ ಸಹಾಯ ಮಾಡಲು ನಂದ್ಯಾಲಕ್ಕೆ ಭೇಟಿ ನೀಡಿದ್ದೇನೆ ಹೊರತು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಕ್ಕಲ್ಲ ಎಂದು ಅಲ್ಲು ಅರ್ಜುನ್ ಸ್ಪಷ್ಟಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Kollywood: ಕಾರ್ತಿಕ್ ಸುಬ್ಬರಾಜ್ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್ ಆಗಿದೆ ಮಾಸ್
Tollywood: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್ ಬೌನ್ಸರ್ ಬಂಧನ
Sukumar: ಸಿನಿಮಾರಂಗಕ್ಕೆ ಸುಕುಮಾರ್ ಗುಡ್ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್
Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.