Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ


Team Udayavani, Sep 19, 2024, 12:39 PM IST

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

ಬೆಂಗಳೂರು/ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ (Choreographer) ಜಾನಿ ಮಾಸ್ಟರ್‌ (Jani Master) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಳು. ಈ ಸಂಬಂಧ ಸೈಬರಾಬಾದ್‌ನ ನರಸಿಂಗಿ ಪೊಲೀಸರು ಬುಧವಾರ (ಸೆ.18ರಂದು) ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ ಏನಿದೆ?:

ದೂರು ನೀಡಿದ ಯುವತಿ ಕೂಡ ನೃತ್ಯ ಸಂಯೋಜಕಿಯಾಗಿದ್ದು, ಕಳೆದ ಕೆಲ ತಿಂಗಳಿನಿಂದ ಈಕೆ ಜಾನಿ ಮಾಸ್ಟರ್‌ ಜೊತೆಗೆ ಕೆಲಸ ಮಾಡುತ್ತಿದ್ದಳು. ಜಾನಿ ಮಾಸ್ಟರ್‌ ಹೊರಾಂಗಣ ಚಿತ್ರೀಕರಣದ ವೇಳೆ ತನ್ನ ಮೇಲೆ ಹಲ್ಲೆ ನಡೆಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.

ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಚಿತ್ರೀಕರಣದ ಸಮಯದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರು ನಾರ್ಸಿಂಗಿಯಲ್ಲಿರುವ ತನ್ನ ನಿವಾಸದಲ್ಲಿ ಹಲವಾರು ಬಾರಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರೆ ಹೇಳಿದ್ದಾಳೆ.

ಪೊಲೀಸರು ದೂರು ದಾಖಲಿಸಿಕೊಂಡು ಜಾನಿ ಮಾಸ್ಟರ್‌ ಅವರ ಬಂಧನಕ್ಕೆ ಬಲೆ ಬೀಸಿದ್ದರು. ಜಾನಿ ಮಾಸ್ಟರ್‌ ಅವರ ಫೋನ್‌ ಸ್ವಿಚ್ಡ್‌ ಆಫ್‌ ಆಗಿತ್ತು. ತಲೆ ಮರೆಸಿಕೊಂಡಿದ್ದ ಅವರನ್ನು  ವಿಶೇಷ ಕಾರ್ಯಾಚರಣೆ ತಂಡದ ಪೊಲೀಸರು ಗುರುವಾರ ಮುಂಜಾನೆ(ಸೆ.19ರಂದು) ಗೋವಾದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ವಿವಾದ ಇದೇ ಮೊದಲಲ್ಲ: ಜಾನಿ ವಿವಾದದಿಂದ ಸುದ್ದಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಜಾನಿ ಮಾಸ್ಟರ್‌ ವಿರುದ್ಧ ಆರೋಪಗಳು ಕೇಳಿ ಬಂದಿತ್ತು. ಈ ಹಿಂದೆ ಸತೀಶ್ ಎಂಬ ಡ್ಯಾನ್ಸರ್ ಜಾನಿ ಮಾಸ್ಟರ್ ವಿರುದ್ಧ ಕಿರುಕುಳದ ಆರೋಪ ಮಾಡಿ ದೂರು ದಾಖಲಿಸಿದ್ದರು. ಸಿನಿಮಾ ಚಿತ್ರೀಕರಣದಲ್ಲಿ ಕೆಲಸ ಸಿಗದಂತೆ ನೃತ್ಯ ನಿರ್ದೇಶಕರು ತಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಜಾನಿ ಮಾಸ್ಟರ್ ಈ ಆರೋಪಗಳನ್ನು ತಳ್ಳಿಹಾಕಿದ್ದರು. ಇದಲ್ಲದೆ 2015 ರಲ್ಲಿ ಕಾಲೇಜಿನಲ್ಲಿ ನಡೆದ ಗಲಾಟೆಯಿಂದಾಗಿ 2019 ರಲ್ಲಿ ಜಾನಿ ಮಾಸ್ಟರ್‌ಗೆ ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತು.

ಜಾನಿ ಮಾಸ್ಟರ್‌ ʼರೌಡಿ ಬೇಬಿʼ ಮತ್ತು ಇತ್ತೀಚೆಗೆ ʼಸ್ತ್ರೀ-2ʼ ಚಿತ್ರ ʼಆಯಿ ನಾಯ್ʼ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.